ಭಾರತದಲ್ಲಿ Motorola Edge 60 Fusion ಲಾಂಚ್; 4000 ರಿಯಾಯಿತಿ.. ಬೆಲೆಯೂ ಕಡಿಮೆ.. ವಾವ್ ಎನಿಸುವ ಫೀಚರ್ಸ್
ಮೊಟೊರೊಲಾ ಇಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G (Motorola Edge 60 Fusion 5G) ಹೆಸರಿನೊಂದಿಗೆ ಭಾರತಕ್ಕೆ ಲಗ್ಗೆ ಇಟ್ಟಿದೆ. ಹೌದು, ಕಂಪನಿಯು ತನ್ನ Edge ಸರಣಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ವಿಸ್ತರಿಸಿದೆ. ಇದು ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ. ಈ ಮೊಬೈಲ್ ಶಕ್ತಿಶಾಲಿ ಮತ್ತು ಸ್ಟೈಲಿಶ್ ಆಗಿದೆ. ಬನ್ನಿ, ನೂತನ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ತಿಳಿಯೋಣ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಇದು ಹಲವು ಎಐ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಫೋನ್ 6.7 ಇಂಚಿನ 1.5K ಕರ್ವ್ಡ್ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದಲ್ಲದೆ 5500mAh ಬ್ಯಾಟರಿ, 68W ವೇಗದ ಚಾರ್ಜಿಂಗ್, 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಫೋನಿನ ಆಫರ್ ಮತ್ತು ಮಾರಾಟ ದಿನಾಂಕ ತಿಳಿಯಲು ಮುಂದೆ ಓದಿ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 10 ಬಿಟ್ OLED ಎಂಡ್‌ಲೆಸ್ ಎಡ್ಜ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ. ಇದರೊಂದಿಗೆ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಬೆಂಬಲ ಪಡೆದಿದೆ. ಈ ಫೋನಿನ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7400 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿರುತ್ತದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಫೋನ್ ಇದಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 3 ವರ್ಷಗಳ ಆಂಡ್ರಾಯ್ಡ್ ಓಎಸ್ ಅಪ್‌ಗ್ರೇಡ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳೊಂದಿಗೆ ಬರುತ್ತದೆ. ಗ್ರಾಫಿಕ್ಸ್‌ಗಾಗಿ ಇದು ಮಾಲಿ G615 MC2 ಜಿಪಿಯು ಸಹ ಹೊಂದಿದೆ.
RAM ಮತ್ತು ಸ್ಟೋರೇಜ್ ಆಯ್ಕೆ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ 8GB RAM ಮತ್ತು 12GB RAM ಹೊಂದಿದೆ. ಈ ಫೋನಿನಲ್ಲಿ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಇದದೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು LED ಫ್ಲ್ಯಾಷ್ ಲೈಟ್ ಜೊತೆಗೆ ಬರುತ್ತದೆ. ಹಾಗೆಯೇ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು ಮ್ಯಾಕ್ರೋ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ 5,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ. ಇದು ಪೂರ್ಣ ಚಾರ್ಜ್ ಮಾಡಿದ ನಂತರ, 42.5 ಗಂಟೆಗಳವರೆಗೆ ಬ್ಯಾಕಪ್ ಒದಗಿಸುತ್ತದೆ ಎಂದು ಕಂಪನಿ ಹೇಳಿದೆ..
ಇತರೆ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ MIL-810H ಮಿಲಿಟರಿ ಪ್ರಮಾಣೀಕರಣದೊಂದಿಗೆ ಬರುತ್ತದೆ. ಈ ಫೋನ್ ಬಿದ್ದರೂ ಸಾಮಾನ್ಯ ಫೋನಿಗಿಂತ ಹೆಚ್ಚಿನ ರಕ್ಷಣೆ ನೀಡುತ್ತದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಹಾಗೆಯೇ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಇದು ವಾಟರ್ ಟಚ್ 3.0 ವೈಶಿಷ್ಟ್ಯದೊಂದಿಗೆ ಬರುತ್ತದೆ. ಈ ಫೋನಿನಲ್ಲಿ ಮೋಟೋ ಗೆಸ್ಚರ್‌ಗಳು ಮತ್ತು ಎಐ (AI) ವೈಶಿಷ್ಟ್ಯಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು ಬ್ಲೂಟೂತ್ 5.4, ವೈ-ಫೈ 6, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವು 22,999 ರೂ.ಗೆ ಬಿಡುಗಡೆಯಾಗಿದೆ. 12GB RAM + 256GB ಸ್ಟೋರೇಜ್ ಮಾದರಿಯ ಬೆಲೆ 24,999 ರೂ. ಆಗಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಈ 5G ಫೋನ್ ಮೇಲೆ 2,000 ರೂ.ಗಳ ರಿಯಾಯಿತಿ ಘೋಷಿಸಿದೆ. ಈ ಸ್ಮಾರ್ಟ್‌ಫೋನ್ ಅನ್ನು 20,999 ರೂ.ಗೆ ಖರೀದಿಸಬಹುದು.
ಈ ಸ್ಮಾರ್ಟ್‌ಫೋನ್ ಏಪ್ರಿಲ್ 9 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಹಾಗೆಯೇ ಕಂಪನಿಯ ಅಧಿಕೃತ ವೆಬ್‌ಸೈಟ್ (Motorola.in) ಮತ್ತು ರಿಲಯನ್ಸ್ ಡಿಜಿಟಲ್ ಸೇರಿದಂತೆ ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಮಾರಾಟವಾಗಲಿದೆ. ಈ ಮೊಬೈಲ್ ಪ್ಯಾಂಟೋನ್ ಅಮೆಜಾನೈಟ್, ಪ್ಯಾಂಟೋನ್ ಸ್ಲಿಪ್‌ಸ್ಟ್ರೀಮ್ ಮತ್ತು ಪ್ಯಾಂಟೋನ್ ಜೆಫಿರ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆ ಇಳಿಕೆ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬಿಡುಗಡೆಗೂ ಮೊದಲೇ ಈ ಹಿಂದೆ ಲಾಂಚ್ ಆಗಿದ್ದ ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಾಗಿದೆ. ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಶೇ.23 ರಷ್ಟು ನೇರ ರಿಯಾಯಿತಿ ಪಡೆದಿದೆ. ಇದು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯು 25,999 ರೂ.ಗೆ ಬಿಡುಗಡೆಯಾಗಿತ್ತು. ಇದು ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 19,999 ರೂ.ಗೆ ಮಾರಾಟವಾಗುತ್ತಿದೆ.
ನೀವು ಈ ಫೋನಿನ ಖರೀದಿ ಮೇಲೆ ಶೇ.23 ರಷ್ಟು ನೇರ ರಿಯಾಯಿತಿಯ ಲಾಭ ಪಡೆಯಬಹುದು. ಹೆಚ್ಚುವರಿಯಾಗಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭ್ಯವಿದೆ. ಈ ಮೊಟೊರೊಲಾ ಮೊಬೈಲ್ ಫಾರೆಸ್ಟ್ ಬ್ಲೂ, ಮಾರ್ಷ್‌ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳೊಂದಿಗೆ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಅನ್ನು ಖರೀದಿಸಬಹುದು.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ದರ, 1600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್ ಹೊಂದಿದೆ. ಹಾಗೆಯೇ ಆಂಡ್ರಾಯ್ಡ್ 14 ಆಧಾರಿತ ಹೆಲೋ ಯುಐ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಇದರಲ್ಲಿ 12GB RAM ಮತ್ತು 256GB ಸ್ಟೋರೇಜ್ ಇದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.


Click it and Unblock the Notifications








