Home
ಮೊಬೈಲ್

ನಾಳೆ Motorola Edge 60 Pro ಲಾಂಚ್; 50MP + 50MP + 50MP ಕ್ಯಾಮೆರಾಗಳು.. 6000mAh ಬ್ಯಾಟರಿ.. ಬೆಲೆ ಇಷ್ಟು!

ಮೊಟೊ ಮೊಬೈಲ್ ಪ್ರಿಯರೇ ಇಲ್ಲಿ ಕೇಳಿ..! ನಾಳೆ 50MP ಸೆಲ್ಫಿ ಕ್ಯಾಮೆರಾ ಹೊಂದಿರುವ ಸೊಗಸಾದ 5G ಫೋನ್ ಮಾರುಕಟ್ಟೆಗೆ ಬರಲಿದೆ. ಹೌದು, ನಾಳೆ (ಏಪ್ರಿಲ್ 30) ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಮೊಬೈಲ್ ಬಜೆಟ್ ಬೆಲೆಯಲ್ಲಿ ಬರುವುದು ಖಚಿತವಾಗಿದೆ. ಬಿಡುಗಡೆ ಬಳಿಕ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಈ ಹೊಸ 5G ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಭಾರತದಲ್ಲಿ ಈಗಾಗಲೇ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮತ್ತು ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಫೋನ್‌ಗಳು ಬಿಡುಗಡೆಯಾಗಿವೆ. ಇದೀಗ, ಮೂರನೇ ಸ್ಮಾರ್ಟ್‌ಫೋನ್ ಮೊಟೊರೊಲಾ ಎಡ್ಜ್ 60 ಪ್ರೊ ಸಹ ಬರುತ್ತಿದೆ. ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಮೊಟೊ ಹವಾ ಹೆಚ್ಚಾಗಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಎಕ್ಸ್‌ಟ್ರೀಮ್ ಪ್ರೊಸೆಸರ್ ಹೊಂದಿದೆ. ಇದು 6.7 ಇಂಚಿನ ಡಿಸ್ಪ್ಲೇ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50MP ಮುಖ್ಯ ಕ್ಯಾಮೆರಾ, 6000mAh ಬ್ಯಾಟರಿ, 90W ವೇಗದ ಚಾರ್ಜಿಂಗ್ ಮತ್ತು 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಲಭ್ಯವಿರುತ್ತವೆ.

ನಾಳೆ Motorola Edge 60 Pro ಲಾಂಚ್; 50MP + 50MP + 50MP ಕ್ಯಾಮೆರಾ.. ಬೆಲೆ?

ಮೊಟೊರೊಲಾ ಎಡ್ಜ್ 60 ಪ್ರೊ ಬಿಡುಗಡೆ ಸಮಯ

ಮೊಟೊರೊಲಾ ತನ್ನ 'ಎಡ್ಜ್ 60' ಸರಣಿಯಲ್ಲಿ ಈ ಮೂರನೇ ಫೋನನ್ನು ಬಿಡುಗಡೆ ಮಾಡಲಿದೆ. ನಾಳೆ (ಏಪ್ರಿಲ್ 30) ಮಧ್ಯಾಹ್ನ 12 ಗಂಟೆಗೆ ಮೊಟೊರೊಲಾ ಎಡ್ಜ್ 60 ಪ್ರೊ 5G ಫೋನ್ ಅಧಿಕೃತವಾಗಿ ರಿಲೀಸ್ ಆಗಲಿದೆ. ಈ ಹೊಸ 5G ಫೋನನ್ನು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌, ಆಫ್‌ಲೈನ್ ಮಾರುಕಟ್ಟೆಯಲ್ಲಿ ಚಿಲ್ಲರೆ ಅಂಗಡಿಗಳು ಮತ್ತು ಮೊಬೈಲ್ ಅಂಗಡಿಗಳ ಮೂಲಕ ಮಾರಾಟ ಮಾಡಲಾಗುವುದು. ಕಂಪನಿಯು ನಾಳೆ ಮೊಟೊರೊಲಾ ಎಡ್ಜ್ 60 ಪ್ರೊ ಬೆಲೆ ಮತ್ತು ವಿಶೇಷತೆಗಳನ್ನು ಬಹಿರಂಗಪಡಿಸಲಿದೆ. ವಿಶೇಷವೆಂದರೆ, ನಾಳೆಯೇ ಈ ಫೋನಿನ ಮಾರಾಟ ಪ್ರಾರಂಭವಾಗಲಿದೆ.

ಮೊಟೊರೊಲಾ ಎಡ್ಜ್ 60 ಪ್ರೊ ಬೆಲೆ

8GB RAM + 256GB ಸ್ಟೋರೇಜ್ = 28,999 ರೂ.
12GB RAM + 512GB ಸ್ಟೋರೇಜ್ = 32,000 ರೂ.

ಇತ್ತೀಚೆಗೆ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮತ್ತು ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇವುಗಳ ಬೆಲೆಯನ್ನು ನೋಡಿದರೆ, ನೂತನ ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್‌ 30,000 ರೂ.ಗೆ ಬರುವ ಸಾಧ್ಯತೆಯಿದೆ. ಈ ಫೋನಿನ ಮೂಲ ರೂಪಾಂತರವನ್ನು 28,999 ಅಥವಾ 29,999 ರೂ.ಗೆ ಪರಿಚಯಿಸಬಹುದು. ಟಾಪ್ ವೇರಿಯಂಟ್ ಬೆಲೆ 32,000 ರೂ. ಆಗಿರಲಿದೆ. ನಾಳೆ ಅಧಿಕೃತ ಬೆಲೆ ಬಹಿರಂಗವಾಗಲಿದೆ.

ನಾಳೆ Motorola Edge 60 Pro ಲಾಂಚ್; 50MP + 50MP + 50MP ಕ್ಯಾಮೆರಾ.. ಬೆಲೆ?

ಮೊಟೊರೊಲಾ ಎಡ್ಜ್ 60 ಪ್ರೊ ಫೀಚರ್ಸ್

ಡಿಸ್ಪ್ಲೇ ಮಾಹಿತಿ

ಮೊಟೊರೊಲಾ ಎಡ್ಜ್ 60 ಪ್ರೊ ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್‌, 120Hz ರಿಫ್ರೆಶ್ ದರ, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರಲಿದೆ. ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿರಲಿದೆ.

ಪ್ರೊಸೆಸರ್ ಸಾಮರ್ಥ್ಯ

ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಮೀಡಿಯಾಟೆಕ್‌ ಡೈಮೆನ್ಸಿಟಿ 8350 ಎಕ್ಸ್‌ಟ್ರೀಮ್ ಪ್ರೊಸೆಸರ್ ಹೊಂದಿರಲಿದೆ. ಇದು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾದ ಆಕ್ಟಾ-ಕೋರ್ ಪ್ರೊಸೆಸರ್ ಆಗಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G615 MC6 ಜಿಪಿಯು ಹೊಂದಿರಲಿದೆ.

ಕ್ಯಾಮೆರಾ ಸೆಟಪ್

ಮೊಟೊರೊಲಾ ಎಡ್ಜ್ 60 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್, 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾದೊಂದಿಗೆ ಬರುತ್ತದೆ. ಹಾಗೆಯೇ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಇರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಮೊಟೊರೊಲಾ ಎಡ್ಜ್ 60 ಪ್ರೊ ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 90W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್‌ ತಂತ್ರಜ್ಞಾನ ಒದಗಿಸಲಾಗುವುದು. ಹಾಗೆಯೇ 15W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ಇರಲಿದೆ.

ಇತರೆ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಮೊಟೊ ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ಇದು MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕರಣ, ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮೋಸ್ ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G SA/NSA, ಡ್ಯುಯಲ್ 4G VoLTE, ವೈ-ಫೈ 6E, ಬ್ಲೂಟೂತ್ 5.4, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಹೊಂದಿರಲಿದೆ.

Best Mobiles in India

English summary
Motorola Edge 60 Pro Launching in India Tomorrow: know price, camera, display, battery and everything here
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+