Home
ಮೊಬೈಲ್

Motorola Edge 60 Pro vs Motorola Edge 60 Stylus: ಬಜೆಟ್‌ ಬೆಲೆಯಲ್ಲಿ ಯಾವುದು ಬೆಸ್ಟ್? ಫೀಚರ್ಸ್‌ ಹೀಗಿವೆ

ಮೊಟೊರೊಲಾ ಭಾರತದಲ್ಲಿ ತನ್ನ ಕೈಗೆಟುಕುವ 5G ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಇದು 30,000 ರೂ.ಗಳಿಗಿಂತ ಕಡಿಮೆ ಬಜೆಟ್ ವಿಭಾಗದಲ್ಲಿ ಬರುತ್ತದೆ. ಕಂಪನಿಯ ಈ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೊಬೈಲ್ ಸ್ಟೈಲಿಶ್ ಲುಕ್, ಶಕ್ತಿಯುತ ಪ್ರೊಸೆಸರ್, ಸೂಪರ್ ಬ್ಯಾಟರಿ, ಇತ್ತೀಚಿನ ಆಂಡ್ರಾಯ್ಡ್ ಓಎಸ್ ಮತ್ತು ಇನ್ನಿತರ ವಿಶೇಷತೆಗಳೊಂದಿಗೆ ಬರುತ್ತದೆ. ಇದು ಮಾರುಕಟ್ಟೆಯಲ್ಲಿ ಲಭ್ಯವಿರುವ ಈ ಬೆಲೆ ವಿಭಾಗದ ಫೋನ್‌ಗಳಿಗೆ ನೇರ ಸ್ಪರ್ಧೆ ನೀಡುತ್ತಿದೆ.

ವಿವಶೇಷವೆಂದರೆ, ಕಳೆದ ತಿಂಗಳು ಬಿಡುಗಡೆಯಾಗಿದ್ದ ಮೊಟೊರೊಲಾ ಎಡ್ಜ್ 60 ಸ್ಟೈಲಸ್ (Motorola Edge 60 Stylus) ಫೋನ್ ಮೊಟೊರೊಲಾ ಎಡ್ಜ್ 60 ಪ್ರೊ 5Gನಂತೆಯೇ ಬಹುತೇಕ ವೈಶಿಷ್ಟ್ಯಗಳನ್ನು ಹೊಂದಿದೆ. ನೀವು ದೀರ್ಘ ನವೀಕರಣಗಳೊಂದಿಗೆ ಬಜೆಟ್ ಬೆಲೆಯಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್ ಬಯಸಿದರೆ, ಮೊಟೊರೊಲಾ ಎಡ್ಜ್ 60 ಪ್ರೊ ಉತ್ತಮ ಆಯ್ಕೆಯಾಗಿದೆ. ಸ್ವಲ್ಪ ಸುಗಮವಾದ ಡಿಸ್ಪ್ಲೇಯೊಂದಿಗೆ ಸ್ಟಾಕ್ ಆಂಡ್ರಾಯ್ಡ್ ಅನುಭವವನ್ನು ಬಯಸುವವರು ಮೊಟೊರೊಲಾ ಎಡ್ಜ್ 60 ಸ್ಟೈಲಸ್ 5G ಅನ್ನು ಖರೀದಿಸಬಹುದು. ಇದೀಗ, ನಿಮಗೆ ಎದುರಾಗುವ ಪ್ರಶ್ನೆ, ಎರಡರಲ್ಲಿ ಯಾವುದು ಉತ್ತಮ? ನಿಮ್ಮ ಈ ಗೊಂದಲಕ್ಕೆ ಇಲ್ಲಿದೆ ಉತ್ತರ. ನಾವು ಎರಡೂ ಮೊಬೈಲ್‌ಗಳ ವ್ಯತ್ಯಾಸಗಳ (Motorola Edge 60 Pro vs Motorola Edge 60 Stylus) ಬಗ್ಗೆ ಈ ಲೇಖನದಲ್ಲಿ ತಿಳಿಸಿದ್ದೇವೆ.

Motorola Edge 60 Pro vs Edge 60 Stylus: ಬಜೆಟ್‌ ಬೆಲೆಯಲ್ಲಿ ಯಾವುದು ಬೆಸ್ಟ್

ಮೊಟೊರೊಲಾ ಎಡ್ಜ್ 60 ಪ್ರೊ vs ಎಡ್ಜ್ 60 ಸ್ಟೈಲಸ್ ಡಿಸ್ಪ್ಲೇ

ಮೊಟೊರೊಲಾ ಎಡ್ಜ್ 60 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್‌ ಎಚ್‌ಡಿ ಕ್ವಾಡ್ ಕರ್ವ್ಡ್ POLED ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ದರದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು HDR10+, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 60 ಸ್ಟೈಲ್ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಸೆಂಟರ್ ಪಂಚ್ ಹೋಲ್ ಶೈಲಿಯ pOLEDಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2712 x 1220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್‌ ಹೊಂದಿದೆ. ಈ ಫೋನ್ HDR10 ಬೆಂಬಲ, 120Hz ರಿಫ್ರೆಶ್ ದರ, 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನಿನ ಡಿಸ್ಪ್ಲೇಯು ಆಕ್ವಾ ಟಚ್‌ನೊಂದಿಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.

ಎಡ್ಜ್ 60 ಪ್ರೊ vs ಎಡ್ಜ್ 60 ಸ್ಟೈಲಸ್ ಪ್ರೊಸೆಸರ್

ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 8350 ಎಕ್ಸ್‌ಟ್ರೀಮ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಇದು ಮಾಲಿ G615 MC6 ಜಿಪಿಯು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 3 ವರ್ಷಗಳ ಓಎಸ್ ನವೀಕರಣಗಳು ಮತ್ತು 4 ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ. ಈ ಮೊಬೈಲ್ 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ.

ಮೊಟೊರೊಲಾ ಎಡ್ಜ್ 60 ಸ್ಟೈಲ್ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ ಗ್ರಾಫಿಕ್ಸ್‌ಗಾಗಿ, ಅಡ್ರಿನೊ 710 ಜಿಪಿಯು ಸಹ ಲಭ್ಯವಿದೆ. ಈ ಮೊಬೈಲ್ 8GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

Motorola Edge 60 Pro vs Edge 60 Stylus: ಬಜೆಟ್‌ ಬೆಲೆಯಲ್ಲಿ ಯಾವುದು ಬೆಸ್ಟ್

ಎಡ್ಜ್ 60 ಪ್ರೊ vs ಎಡ್ಜ್ 60 ಸ್ಟೈಲಸ್ ಕ್ಯಾಮೆರಾ

ಮೊಟೊರೊಲಾ ಎಡ್ಜ್ 60 ಪ್ರೊ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ + ಮ್ಯಾಕ್ರೋ ಮತ್ತು 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಹೊಂದಿದೆ. ಇದರಲ್ಲಿ ಎಐ ಆಧಾರಿತ ಸಿಗ್ನೇಚರ್ ಸ್ಟೈಲ್, ಆಕ್ಷನ್ ಶಾಟ್ ಮತ್ತು ಸೂಪರ್ ಜೂಮ್ ವೈಶಿಷ್ಟ್ಯಗಳು ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಟೊರೊಲಾ ಮೊಬೈಲ್ 32 ಮೆಗಾಪಿಕ್ಸೆಲ್ ಹೈ ರೆಸಲ್ಯೂಷನ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಎಡ್ಜ್ 60 ಪ್ರೊ vs ಎಡ್ಜ್ 60 ಸ್ಟೈಲಸ್ ಬ್ಯಾಟರಿ

ಮೊಟೊರೊಲಾ ಎಡ್ಜ್ 60 ಪ್ರೊ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನ್ 90W ಟರ್ಬೊಪವರ್ ಚಾರ್ಜಿಂಗ್, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನ್ 68W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನವೂ ಲಭ್ಯವಿದೆ.

ಮೊಟೊರೊಲಾ ಎಡ್ಜ್ 60 ಪ್ರೊ ಬೆಲೆ

8GB RAM + 256GB ಸ್ಟೋರೇಜ್ = 29,999 ರೂ.
12GB RAM + 256GB ಸ್ಟೋರೇಜ್ = 33,999 ರೂ.

ಮೊಟೊರೊಲಾ ಎಡ್ಜ್ 60 ಪ್ರೊ ಎರಡು RAM ರೂಪಾಂತರಗಳಲ್ಲಿ ಲಭ್ಯವಿದೆ. 8GB RAM ರೂಪಾಂತರದ ಬೆಲೆ 29,999 ರೂ. ಮತ್ತು 12GB RAM ಸ್ಟೋರೇಜ್ ರೂಪಾಂತರದ ಬೆಲೆ 33,999 ರೂ.ಗೆ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್, Motorola.in ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಇದೇ ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮೊದಲ ಮಾರಾಟ ಪ್ರಾರಂಭವಾಗಲಿದೆ. ನೀವು ಶ್ಯಾಡೋ, ಡ್ಯಾಜ್ಲಿಂಗ್ ಬ್ಲೂ ಮತ್ತು ಸ್ಪಾರ್ಕ್ಲಿಂಗ್ ಗ್ರೇಪ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.

Motorola Edge 60 Pro vs Edge 60 Stylus: ಬಜೆಟ್‌ ಬೆಲೆಯಲ್ಲಿ ಯಾವುದು ಬೆಸ್ಟ್

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ

8GB RAM + 256GB ಸ್ಟೋರೇಜ್ = 22,999 ರೂ.
12GB RAM + 256GB ಸ್ಟೋರೇಜ್ = 24,999 ರೂ

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನಿನ ಮೂಲ ಮಾದರಿ 8GB RAM + 256GB ಸ್ಟೋರೇಜ್ ಬೆಲೆ 22,999 ರೂ. ಆಗಿದೆ. ಇನ್ನು 12GB RAM + 256GB ಸ್ಟೋರೇಜ್ ಅನ್ನು 24,999 ರೂ.ಗೆ ಮಾರಾಟ ಮಾಡಲಾಗುವುದು. ಈ ಫೋನ್ ಪ್ಯಾಂಟೋನ್ ಅಮೆಜಾನೈಟ್, ಪ್ಯಾಂಟೋನ್ ಸ್ಲಿಪ್‌ಸ್ಟ್ರೀಮ್ ಮತ್ತು ಪ್ಯಾಂಟೋನ್ ಜೆಫಿರ್ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್ ಖರೀದಿ ಮೇಲೆ 2,000 ರೂ. ರಿಯಾಯಿತಿ ಲಭ್ಯವಿದೆ. ನೀವು 20,999 ರೂ.ಗೆ ಮೂಲ ರೂಪಾಂತರವನ್ನು ಖರೀದಿಸಬಹುದು. ಇದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ.

Best Mobiles in India

English summary
Motorola Edge 60 Pro vs Motorola Edge 60 Stylus Detailed Comparison: Which Smartphone Should You Buy?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+