ಸಂಚಲನ ಸೃಷ್ಟಿ! ಭಾರತಕ್ಕೆ ಬಂತು ಸ್ಟೈಲಸ್ ಫೋನ್; 5000mAh ಬ್ಯಾಟರಿ, Moto AI ವೈಶಿಷ್ಟ್ಯಗಳು.. ಬೆಲೆ ಎಷ್ಟು?
ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 60 ಸ್ಟೈಲಸ್ (Motorola Edge 60 Stylus) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದು ಅಂತರ್ನಿರ್ಮಿತ ಸ್ಟೈಲಸ್ ಹೊಂದಿರುವ ಮೊದಲ ಫೋನ್ ಆಗಿದೆ. ಹೌದು, ಕಂಪನಿಯು ತನ್ನ ಎಡ್ಜ್ 60 ಸರಣಿಯ ಎರಡನೇ ಮೊಬೈಲ್ ಅನ್ನು ದೇಶೀಯ ಮಾರುಕಟ್ಟೆಗೆ ಪರಿಚಯಿಸಿದೆ. ಈಗಾಗಲೇ ಇದೇ ಸರಣಿಯಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಶೀಘ್ರದಲ್ಲೇ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಬನ್ನಿ, ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಮೊಬೈಲ್ ಒಂದೇ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ನೀವು ಈ ಸ್ಮಾರ್ಟ್‌ಫೋನ್ ಅನ್ನು ಎರಡು ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳೆಂದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.7ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮತ್ತು 32 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 68W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ.

ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಸ್ಮಾರ್ಟ್‌ಫೋನ್ ಹಲವು ಎಐ (AI) ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಕೆಚ್ ಟು ಇಮೇಜ್, ಗ್ಲಾನ್ಸ್ ಎಐ, ಎಐ ಸ್ಟೈಲಿಂಗ್ ಮತ್ತು ಇತರೆ ಎಐ ಫೀಚರ್ ಸಹ ಲಭ್ಯವಿದೆ. ಇದಲ್ಲದೆ, ಈ ಮೊಬೈಲ್ ಮಿಲಿಟರಿ ದರ್ಜೆಯ ಬಾಳಿಕೆ (MIL-STD-810H) ಮತ್ತು IP68 ರೇಟಿಂಗ್ ಪಡೆದಿದೆ. ಆಡಿಯೋ ಅನುಭವವನ್ನು ಸುಧಾರಿಸಲು ಇದು ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಬೆಂಬಲ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಹೊಂದಿದೆ.
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊರೊಲಾ ಎಡ್ಜ್ 60 ಸ್ಟೈಲ್ ಮೊಬೈಲ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಸೆಂಟರ್ ಪಂಚ್ ಹೋಲ್ ಶೈಲಿಯ pOLEDಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2712 x 1220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಈ ಫೋನ್ HDR10 ಬೆಂಬಲ, 120Hz ರಿಫ್ರೆಶ್ ದರ, 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನಿನ ಡಿಸ್ಪ್ಲೇಯು ಆಕ್ವಾ ಟಚ್‌ನೊಂದಿಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಎಡ್ಜ್ 60 ಸ್ಟೈಲ್ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ ಗ್ರಾಫಿಕ್ಸ್‌ಗಾಗಿ, ಅಡ್ರಿನೊ 710 ಜಿಪಿಯು ಸಹ ಲಭ್ಯವಿದೆ. ಈ ಮೊಬೈಲ್ 8GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಟೊರೊಲಾ ಮೊಬೈಲ್ 32 ಮೆಗಾಪಿಕ್ಸೆಲ್ ಹೈ ರೆಸಲ್ಯೂಷನ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನ್ 68W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನವೂ ಲಭ್ಯವಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಭಾರತದಲ್ಲಿ ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಫೋನನ್ನು ಒಂದೇ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ನೀವು 8GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಸಬಹುದು. ಇದರ ಬೆಲೆ 22,999 ಆಗಿದೆ. ಈ ಸ್ಮಾರ್ಟ್‌ಫೋನ್ ಎರಡು ಬಣ್ಣಗಳಲ್ಲಿ ಲಭ್ಯವಿದೆ. ನೀವು ಪ್ಯಾಂಟೋನ್ ಸರ್ಫ್ ದಿ ವೆಬ್ ಮತ್ತು ಪ್ಯಾಂಟೋನ್ ಜಿಬ್ರಾಲ್ಟರ್ ಸೀ ಬಣ್ಣಗಳಲ್ಲಿ ಕೊಳ್ಳಬಹುದು. ಈ ಹೊಸ ಮೊಟೊರೊಲಾ ಮೊಬೈಲ್ ಏಪ್ರಿಲ್ 23 ರಿಂದ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಭಿಸಲಿದೆ. ಆಕ್ಸಿಸ್ ಬ್ಯಾಂಕ್ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಮೊಬೈಲ್ ಖರೀದಿಸಿದರೆ, 1000 ರೂ.ಗಳ ತಕ್ಷಣದ ರಿಯಾಯಿತಿ ಸಿಗುತ್ತದೆ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನಿನ ಮೂಲ ಮಾದರಿ 8GB RAM + 256GB ಸ್ಟೋರೇಜ್ ಬೆಲೆ 22,999 ರೂ. ಆಗಿದೆ. ಇನ್ನು 12GB RAM + 256GB ಸ್ಟೋರೇಜ್ ಅನ್ನು 24,999 ರೂ.ಗೆ ಮಾರಾಟ ಮಾಡಲಾಗುವುದು. ಈ ಫೋನ್ ಪ್ಯಾಂಟೋನ್ ಅಮೆಜಾನೈಟ್, ಪ್ಯಾಂಟೋನ್ ಸ್ಲಿಪ್‌ಸ್ಟ್ರೀಮ್ ಮತ್ತು ಪ್ಯಾಂಟೋನ್ ಜೆಫಿರ್ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್ ಖರೀದಿ ಮೇಲೆ 2,000 ರೂ. ರಿಯಾಯಿತಿ ಲಭ್ಯವಿದೆ. ನೀವು 20,999 ರೂ.ಗೆ ಮೂಲ ರೂಪಾಂತರವನ್ನು ಖರೀದಿಸಬಹುದು. ಇದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್ ಲೈಟ್ ಜೊತೆಗೆ ಬರುತ್ತದೆ. ಇದರೊಂದಿಗೆ 13 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಮತ್ತು ಮ್ಯಾಕ್ರೋ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ. ಈ ಫೋನ್ 8GB RAM ಮತ್ತು 12GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಫೋನ್ ಇದಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಮೊಬೈಲ್ ಮಾಲಿ G615 MC2 ಜಿಪಿಯು ಸಹ ಹೊಂದಿದೆ. ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,712 x 1,220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 360Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.


Click it and Unblock the Notifications








