Motorola: ಮೊಟೊರೊಲಾದ ಈ ಬಹು ಬೇಡಿಕೆಯ ಫೋನ್‌ಗೆ ಇನ್ನಷ್ಟು ರಿಯಾಯಿತಿ! 8GB RAM, ಡ್ಯುಯಲ್ ಕ್ಯಾಮೆರಾ
ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು (Motorola smartphones) ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆ ಪಡೆದುಕೊಂಡಿವೆ. ಯಾಕೆಂದರೆ ಈ ಫೋನ್‌ಗಳು ಕಡಿಮೆ ದರದಲ್ಲಿ ಪ್ರೀಮಿಯಂ ಫೀಚರ್ಸ್ ಅನ್ನು ನೀಡುತ್ತಿದ್ದು, ಈ ಮೂಲಕ ಗ್ರಾಹಕರು ಈ ಫೋನ್‌ಗಳನ್ನು ಹೆಚ್ಚು ಹೆಚ್ಚಾಗಿ ಖರೀದಿ ಮಾಡುತ್ತಿದ್ದಾರೆ. ಇದರ ಜೊತೆಗೆ ಈಗ ಮೊಟೊರೊಲಾದ ಬಹು ಬೇಡಿಕೆಯ ಫೋನ್‌ಗೆ ಆಫರ್ ಘೋಷಣೆ ಮಾಡಲಾಗಿದೆ.
ಹೌದು, ಮೊಟೊರೊಲಾ G73 5G ಸ್ಮಾರ್ಟ್‌ಫೋನ್‌ಗೆ (Motorola G73 5G smartphone)ಇದೀಗ ಭರ್ಜರಿ ಆಫರ್ ನೀಡಲಾಗಿದೆ. ಈ ಫೋನ್ 128GB ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 50 ಮೆಗಾಪಿಕ್ಸೆಲ್‌ನೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ವಿವರ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಮೊಟೊರೊಲಾ G73 5G ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 21,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 16,390 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಅಮೆಜಾನ್ ಈ ಫೋನ್ ಮೇಲೆ 25% ರಿಯಾಯಿತಿ ಘೋಷಣೆ ಮಾಡಿದೆ. ಇದರೊಂದಿಗೆ ಕೆಲವು ಬ್ಯಾಂಕ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದರೆ ಇನ್ನೂ ಕಡಿಮೆ ಬೆಲೆಗೆ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು. ಜೊತೆಗೆ ತಿಂಗಳಿಗೆ 795 ರೂ.ಗಳ ಇಐಮ್ಐ ಪಾವತಿ ಮಾಡುವ ಮೂಲಕವೂ ಈ ಫೋನ್ ಖರೀದಿ ಮಾಡಬಹುದಾಗಿದೆ.
ಮೊಟೊರೊಲಾ G73 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದುಕೊಂಡಿದೆ ಈ ಮೂಲಕ ಅತ್ಯುತ್ತಮವಾದ ವೀಕ್ಷಣೆ ಅನುಭವ ಪಡೆಯಬಹುದು. ಅಂದರೆ ವಿಡಿಯೋ ವೀಕ್ಷಣೆ ಮಾಡುವಾಗ ಅಥವಾ ಗೇಮಿಂಗ್ ಆಡುವಾಗ ಯಾವುದೇ ಅಡೆತಡೆಗಳನ್ನು ಅನುಭವಿಸುವುದಿಲ್ಲ.

ಮೊಟೊರೊಲಾ G73 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ಮಾಹಿತಿ: ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 930 ಪ್ರೊಸೆಸರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಎಂತಹುದೇ ಕಾರ್ಯಕ್ಕೂ ಸೈ ಎನ್ನುವಂತಿದೆ. ಇದರೊಂದಿಗೆ 8 GB RAM ಆಯ್ಕೆ ಹಾಗೂ 128 GB ಇಂಟರ್ ಸ್ಟೋರೇಜ್ ಆಯ್ಕೆ ನೀಡಲಾಗಿದ್ದು, ನಿಮಗೆ ಇನ್ನೂ ಹೆಚ್ಚಿನ ಸ್ಟೋರೇಜ್ ಬೇಕು ಎಂದರೆ ಎಸ್‌ಡಿ ಕಾರ್ಡ್ ಆಯ್ಕೆ ಸಹ ನೀಡಲಾಗಿದೆ. ಈ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.
ಮೊಟೊರೊಲಾ G73 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದ್ದು, ಈ ಮೂಲಕ ಅತ್ಯುತ್ತಮವಾದ ಫೋಟೋ ಹಾಗೂ ವಿಡಿಯೋಗಳನ್ನು ಸೆರೆಹಿಡಿಯಬಹುದಾಗಿದೆ.
ಅದರಲ್ಲೂ 2 um ಅಲ್ಟ್ರಾ-ಪಿಕ್ಸೆಲ್ ತಂತ್ರಜ್ಞಾನದೊಂದಿಗೆ ಬರುವ ಕ್ಯಾಮೆರಾ ಸೆನ್ಸರ್‌ಗಳು ಮನಮೋಹಕ ಫೋಟೋಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಪಡೆದಿವೆ.

ಮೊಟೊರೊಲಾ G73 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, ಇದು 30 W ಟರ್ಬೋಪವರ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ ನೀವು ದೀರ್ಘ ಬ್ಯಾಕಪ್ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ವೇಗವಾಗಿ ಚಾರ್ಜ್ ಸಹ ಮಾಡಿಕೊಳ್ಳಬಹುದಾಗಿದೆ. ಉಳಿದಂತೆ ಸುಧಾರಿತ ಬ್ಲೂಟೂತ್, ವೈ- ಫೈ ಹಾಗೂ ಇತರೆ ಸೆನ್ಸರ್ ಆಯ್ಕೆ ಪಡೆದಿದ್ದು, ಕಡಿಮೆ ದರದಲ್ಲಿ ಪ್ರೀಮಿಯಂ ಫೀಚರ್ಸ್ ಅನುಭವವನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








