Home
ಮೊಬೈಲ್

ಬಿಗ್‌ ವಾರ್ ಶುರು!..'ನೋಕಿಯಾ 2.2' v/s 'ರೆಡ್ಮಿ 7' ಯಾವುದು ಬೆಸ್ಟ್‌?

ಭಾರತೀಯ ಮೊಬೈಲ್‌ ಮಾರುಕಟ್ಟೆ ವಿಶಾಲವಾಗಿದ್ದು, ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಿದೆ. ಈ ದಿಸೆಯಲ್ಲಿ ಸ್ಮಾರ್ಟ್‌ಫೋನ್‌ ಕಂಪನಿಗಳು ದೇಶಿಯ ಮಾರುಕಟ್ಟೆಯನ್ನು ನಂಬಿಕೊಂಡು, ವಿವಿಧ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಸಾಗಿವೆ. ಇತ್ತೀಚಿಗೆ ನೋಕಿಯಾ ಕಂಪನಿಯ ಬಿಡುಗಡೆ ಮಾಡಿರುವ 'ನೋಕಿಯಾ 2.2' ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ನೇರವಾಗಿ ಶಿಯೋಮಿ ರೆಡ್ಮಿ 7' ಸ್ಮಾರ್ಟ್‌ಫೋನಿಗೆ ಹಿಟ್‌ ಮಾಡುವ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ.

ಬಿಗ್‌ ವಾರ್ ಶುರು!..'ನೋಕಿಯಾ 2.2' v/s 'ರೆಡ್ಮಿ 7' ಯಾವುದು ಬೆಸ್ಟ್‌?

ಹೌದು, ನೋಕಿಯಾ 2.2 ಮತ್ತು ಶಿಯೋಮಿ ರೆಡ್ಮಿ 7 ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳು ಬಹುತೇಕ ಸಾಮ್ಯತೆಯನ್ನು ಹೊಂದಿವೆ. ಈ ಎರಡು ಸ್ಮಾರ್ಟ್‌ಫೋನ್‌ಗಳು 2GB+32GB ಮತ್ತು 3GB+32GB ಎರಡು ವೇರಿಯಂಟ್ ಮಾದರಿಗಳ ಆಯ್ಕೆಯನ್ನು ಹೊಂದಿದ್ದು, ಪ್ರೈಸ್‌ಟ್ಯಾಗ್‌ ಸಹ ಅಗ್ಗದ ದರದಲ್ಲಿವೆ. ಹೀಗಾಗಿ ಮಾರುಕಟ್ಟೆಯಲ್ಲಿ 'ಶಿಯೋಮಿಯ ರೆಡ್ಮಿ 7 ಫೋನ್‌ಗೆ, 'ನೋಕಿಯಾ 2.2' ಸ್ಮಾರ್ಟ್‌ಫೋನ್‌ ಪ್ರಬಲ ಎದುರಾಳಿ ಎನಿಸಿಕೊಳ್ಳಲಿದೆ.

ಬಿಗ್‌ ವಾರ್ ಶುರು!..'ನೋಕಿಯಾ 2.2' v/s 'ರೆಡ್ಮಿ 7' ಯಾವುದು ಬೆಸ್ಟ್‌?

ಈ ಎರಡು ಸ್ಮಾರ್ಟ್‌ಫೋನ್‌ಗಳು ತಮ್ಮ ವರ್ಗದಲ್ಲಿಯೇ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್‌ ಫೀಚರ್ಸ್‌ಗಳನ್ನು ಒಳಗೊಂಡಿವೆ. ಆದರೆ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿರುವ ನೋಕಿಯಾದ ಮುಂದೆ ಶಿಯೋಮಿಯ ರೆಡ್ಮಿ 7 ಸ್ಮಾರ್ಟ್‌ಫೋನ್‌ ಜನಪ್ರಿಯತೆ ಕಳೆದುಕೊಳ್ಳಲಿದೆಯೇ ಎಂಬುದನ್ನು ಅವುಗಳ ಫೀಚರ್ಸ್‌ಗಳಿಂದ ನೀವೆ ಊಹಿಸಿ. ಹಾಗಾದರೇ ಶಿಯೋಮಿ ರೆಡ್ಮಿ 7 ಮತ್ತು ನೋಕಿಯಾ 2.2 ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳನ್ನು ನೋಡೋಣ ಬನ್ನಿರಿ.

ನೋಕಿಯಾ 2.2 ಡಿಸ್‌ಪ್ಲೇ ಹೇಗಿದೆ

ನೋಕಿಯಾ 2.2 ಡಿಸ್‌ಪ್ಲೇ ಹೇಗಿದೆ

ನೋಕಿಯಾ 2.2 ಸ್ಮಾರ್ಟ್‌ಫೋನ್‌ 5.7 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು 720x1520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಡಿಸ್‌ಪ್ಲೇಯ ಸುತ್ತಲೂ ಬೆಜಲ್‌ ಮತ್ತು ಡಿಸ್‌ಪ್ಲೇಯ ಮೇಲ್ಭಾಗದಲ್ಲಿ ನಾಚ್‌ ರಚನೆಯನ್ನು ನೀಡಲಾಗಿದ್ದು, ಡಿಸ್‌ಪ್ಲೇಯು ವಿಶಾಲವಾಗಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯ ಅನುಪಾತವು 19:9 ರಷ್ಟಾಗಿದೆ.

ನೋಕಿಯಾ 2.2 ಪ್ರೊಸೆಸರ್‌

ನೋಕಿಯಾ 2.2 ಪ್ರೊಸೆಸರ್‌

ನೋಕಿಯಾ 2.2 ಸ್ಮಾರ್ಟ್‌ಫೋನ್ 'ಮೀಡಿಯಾ ಟೆಕ್‌ ಹಿಲಿಯೊ A22' ಪ್ರೊಸೆಸರ್ ಅನ್ನು ಒಳಗೊಂಡಿದೆ. ತನ್ನ ವರ್ಗದಲ್ಲಿಯೇ ಇದು ಅತ್ಯುತ್ತಮ ಪ್ರೊಸೆಸರ್‌ ಆಗಿದ್ದು, ಇದರೊಂದಿಗೆ ಆಂಡ್ರಾಯ್ಡ್‌ ಪೈ ಆಧಾರಿತ ಲೈಟರ್‌ ವರ್ಷನ್ 'ಆಂಡ್ರಾಯ್ಡ್‌ ಒನ್' ಓಎಸ್‌' ಬೆಂಬಲ ಪಡೆದಿದೆ. ಮಲ್ಟಿಟಾಸ್ಕ್‌ ಕೆಲಸಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.

ನೋಕಿಯಾ 2.2 ಮೆಮೊರಿ

ನೋಕಿಯಾ 2.2 ಮೆಮೊರಿ

ನೋಕಿಯಾದ ಈ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ 2GB RAM ಮತ್ತು 3GB RAM ಸಾಮರ್ಥ್ಯದ ಎರಡು ವೇರಿಯಂಟ್‌ ಮಾದರಿಗಳ ಆಯ್ಕೆಯನ್ನು ಹೊಂದಿದ್ದು, ಅವು ಕ್ರಮವಾಗಿ 16GB ಮತ್ತು 32GB ಆಂತರಿಕ ಸ್ಟೋರೇಜ್‌ ಸ್ಥಳಾವಕಾಶವನ್ನು ಹೊಂದಿವೆ. ತನ್ನ ವರ್ಗದಲ್ಲಿಯೇ ಇದು ಉತ್ತಮ ಮೆಮೊರಿ ಆಯ್ಕೆಯನ್ನು ಒಳಗೊಂಡಿದೆ.

ನೋಕಿಯಾ 2.2 ಕ್ಯಾಮೆರಾ

ನೋಕಿಯಾ 2.2 ಕ್ಯಾಮೆರಾ

ನೋಕಿಯಾ 2.2 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ರೇರ್ ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿದ್ದು, f/2.2 ಅಪರ್ಚರ್‌ ಸಾಮರ್ಥ್ಯವನ್ನು ಪಡೆದಿದೆ. ಸಿಂಗಲ್‌ ಎಲ್‌ಇಡಿ ಫ್ಲ್ಯಾಶ್ ಲೈಟ್‌ ಸಹ ಇದೆ. ಇನ್ನು ಸೆಲ್ಫಿಗಾಗಿ 5ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, ಫ್ರಂಟ್‌ ಫೇಸಿಂಗ್ ಆಯ್ಕೆಯನ್ನು ಒಳಗೊಂಡಿದೆ.

ನೋಕಿಯಾ 2.2 ಬ್ಯಾಟರಿ ಶಕ್ತಿ

ನೋಕಿಯಾ 2.2 ಬ್ಯಾಟರಿ ಶಕ್ತಿ

ನೋಕಿಯಾ 2.2 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಹೊಂದಿದ್ದು, ತನ್ನ ವರ್ಗದಲ್ಲಿಯೇ ಇದು ಅತ್ಯುತ್ತಮ ಬ್ಯಾಟರಿ ಆಗಿದೆ. ಇದರೊಂದಿಗೆ 5W ಶಕ್ತಿ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದ್ದು, ಚಾರ್ಜಿಂಗ್‌ಗೆ ಉತ್ತಮ ಬೆಂಬಲ ನೀಡಲಿದೆ. ಹಾಗೆಯೇ ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿದೆ.

ನೋಕಿಯಾ 2.2 ಬೆಲೆ

ನೋಕಿಯಾ 2.2 ಬೆಲೆ

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವ ನೋಕಿಯಾ 2.2 ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ಗಳಲ್ಲಿ ಲಭ್ಯವಿದೆ. 2GB + 16GB ಆಂತರಿತ ಸಾಮರ್ಥ್ಯದ ವೇರಿಯಂಟ್ ಬೆಲೆಯು 7,699ರೂ.ಗಳು ಆಗಿದೆ. ಮತ್ತು 3GB + 32GB ವೇರಿಯಂಟ್ ಬೆಲೆಯು 8,699ರೂ.ಆಗಿದೆ.

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ

'ರೆಡ್‌ಮಿ ನೋಟ್ 7' ಫೋನ್ 19.5: 9 ಆಕಾರ ಅನುಪಾತದಲ್ಲಿ 1080x2340 ಪಿಕ್ಸೆಲ್‌ಗಳ ಸಾಮರ್ಥ್ಯದ 6.3-ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿರುವ ಡಿಸ್‌ಪ್ಲೇ ವಾಟರ್‌ಡ್ರಾಪ್ ಚಿಕ್ಕ ನೋಚ್ ವಿನ್ಯಾಸವನ್ನು ಹೊಂದಿರುವುದನ್ನು ನೋಡಬಹುದಾಗಿದೆ. ಇದು ಮಲ್ಟಿಮೀಡಿಯಾ ಪ್ರಿಯರ ಮನಗೆಲ್ಲಲು ಯಶಸ್ವಿಯಾಗಿದೆ.

'ರೆಡ್‌ಮಿ ನೋಟ್ 7' ಪ್ರೊಸೆಸರ್

'ರೆಡ್‌ಮಿ ನೋಟ್ 7' ಪ್ರೊಸೆಸರ್

'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 2.2GHz ಸ್ನಾಪ್ಡ್ರಾಗನ್ 660 ಎಸ್‌ಒಸಿ ಪ್ರೊಸೆಸರ್, ಅಡ್ರಿನೋ 512 ಗ್ರಾಫಿಕ್ಸ್, 3 ಜಿಬಿಮತ್ತು 4 ಜಿಬಿ RAM ಆಯ್ಕೆಗಳೊಂದಿಗೆ ಬಿಡುಗಡೆಯಾಗಿದೆ. 32GB ಮತ್ತು 64GB ಮೆಮೊರಿ ಆಯ್ಕೆಗಳ ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು 256GB ವರೆಗೆ ವಿಸ್ತರಿಸುವ ಆಯ್ಕೆಯೂ ಸಹ ಲಭ್ಯವಿದೆ.

ರೆಡ್ಮಿ ನೋಟ್ 7 ಕ್ಯಾಮೆರಾ

ರೆಡ್ಮಿ ನೋಟ್ 7 ಕ್ಯಾಮೆರಾ

ಶಿಯೋಮಿ ಕಂಪೆನಿ ತನ್ನ ರೆಡ್ಮಿ ನೋಟ್ 7 ಸ್ಮಾರ್ಟ್‌ಪೋನಿನಲ್ಲಿ 12 ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸಾಮರ್ಥ್ಯದ ಎರಡು ಕ್ಯಾಮೆರಾಗಳನ್ನು ಹಿಂಬಾಗದಲ್ಲಿ ನೀಡಿದೆ. ಇನ್ನುಳಿದಂತೆ ಡ್ಯುಯಲ್-ಎಲ್ಇಡಿ ಫ್ಲಾಶ್ ಬೆಂಬಲ, ಪಿಡಿಎಎಫ್ ಅನ್ನು ಸಹ ಹಿಂಬಾಗದಲ್ಲಿ ನೋಡಬಹುದಾಗಿದೆ.

ರೆಡ್ಮಿ ನೋಟ್ 7 ಸೆಲ್ಫಿ

ರೆಡ್ಮಿ ನೋಟ್ 7 ಸೆಲ್ಫಿ

ಹಿಂಬಾಗದಲ್ಲಿ 12MP+2MP ಸಾಮರ್ಥ್ಯದ ಕ್ಯಾಮೆರಾಗಳನ್ನು ಹೊಂದಿರುವ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ 13-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಪೊರ್ಟ್ರೇಟ್ ಮೋಡ್, ಹೆಚ್‌ಡಿಆರ್, ಎಐ ಫೇಸ್ ಅನ್ಲಾಕ್, ಎಐ ಸ್ಮಾರ್ಟ್ ಬ್ಯೂಟಿ, ಎಐ ಸಿಂಗಲ್ ಶಾಟ್ ಬ್ಲರ್, ಫ್ರಂಟ್ ಹೆಚ್‌ಡಿಆರ್‌ನಂತಹ ವಿಶೇಷತೆಗಳನ್ನು ಈ ಕ್ಯಾಮೆರಾ ತಂತ್ರಜ್ಞಾನದಲ್ಲಿವೆ.

ರೆಡ್ಮಿ ನೋಟ್ 7 ಬ್ಯಾಟರಿ

ರೆಡ್ಮಿ ನೋಟ್ 7 ಬ್ಯಾಟರಿ

ಕ್ವಿಕ್ ಚಾರ್ಜ್ 4 ತಂತ್ರಜ್ಞಾನ ಬೆಂಬಲದೊಂದಿಗೆ 4,000 mAh ಬ್ಯಾಟರಿಯನ್ನು 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ ನೀಡಲಾಗಿದೆ. ಇದು 251 ಗಂಟೆಗಳ ಸ್ಟ್ಯಾಂಡ್‌ ಬೈ ಸಮಯ, 23 ಗಂಟೆಗಳ ಟಾಕ್ ಟೈಮ್, 13 ಗಂಟೆಗಳ ವೀಡಿಯೋ ಪ್ಲೇಬ್ಯಾಕ್, ಮತ್ತು 7 ಗಂಟೆಗಳ ಗೇಮಿಂಗ್‌ವರೆಗೆ ಬ್ಯಾಟರಿ ಸಾಮರ್ಥ್ಯವನ್ನು ನೀಡಲಿದೆ ಎಂದು ಶಿಯೋಮಿ ಕಂಪೆನಿ ಹೇಳಿಕೊಂಡಿದೆ.

Best Mobiles in India

English summary
Nokia 2.2 and Xiaomi Redmi 7 Which is a better phone. Here a comparison between the two. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+