ನೋಕಿಯಾ 2.4 ಫಸ್ಟ್‌ ಲುಕ್; ಅಗ್ಗದ ದರದಲ್ಲಿ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌!

|

ಎವರ್‌ಗ್ರೀನ್‌ ಬ್ರ್ಯಾಂಡ್‌ ಎನಿಸಿಕೊಂಡಿರುವ ನೋಕಿಯಾ ಇತ್ತೀಚಿಗಷ್ಟೆ ನೋಕಿಯಾ 2.4 ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹೆಚ್‌ಎಂಡಿ ಗ್ಲೋಬಲ್‌ ಭಾರತದಲ್ಲಿ ನೋಕಿಯಾ 2.4 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಹಿಲಿಯೊ P22 ಪ್ರೊಸೆಸರ್‌, ಉತ್ತಮ ಬ್ಯಾಟರಿಗಳಂತಹ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿಯ ನೋಕಿಯಾ 2.4 ಸ್ಮಾರ್ಟ್‌ಫೋನ್‌ 3GB ಮತ್ತು 64GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಎನ್ನುವುದನ್ನು ಹಾಗೂ ಫೀಚರ್ಸ್‌ಗಳ ಕಾರ್ಯವೈಖರಿ ಹೇಗೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ನೋಕಿಯಾ 2.4 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಮತ್ತು ಸ್ಕ್ರೀನ್-ಟು-ಬಾಡಿ ಅನುಪಾತ 80.61% ಹೊಂದಿದೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ನೋಕಿಯಾ 2.4 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ನೋಕಿಯಾ 2.4 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ 2.4 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಎನ್‌ಎಫ್‌ಸಿ, ಎಫ್‌ಎಂ ರೇಡಿಯೋ, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಅನ್ನು ಸಹ ಒಳಗೊಂಡಿದೆ. ಜೊತೆಗೆ ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ

ನೋಕಿಯಾ 2.4 ಭಾರತದಲ್ಲಿ 10,399 ರೂ.ಬೆಲೆಯನ್ನು ಹೊಂದಿದೆ. ನೋಕಿಯಾ.ಕಾಮ್ / ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿರುತ್ತದೆ.ಈ ಸ್ಮಾರ್ಟ್‌ಫೋನ್ ಚಾರ್ಕೋಲ್, ಡಸ್ಕ್ ಮತ್ತು ಫ್ಜೋರ್ಡ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
The Nokia 2.4 sports a big 6.5-inch display and is powered by a 4,500 mAh battery unit.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X