Just In
- 38 min ago
ಸ್ಯಾಮ್ಸಂಗ್ ಗ್ಯಾಲಕ್ಸಿ F02s ಫಸ್ಟ್ ಲುಕ್; ಅಗ್ಗದ ಬೆಲೆಯಲ್ಲಿ ಆಕರ್ಷಕ ಫೋನ್!
- 15 hrs ago
ವಿದ್ಯಾರ್ಥಿಗಳಿಗಾಗಿ 'ಬ್ಯಾಕ್ ಟು ಸ್ಕೂಲ್' ಅಭಿಯಾನ ಆರಂಭಿಸಿದ ಸ್ಯಾಮ್ಸಂಗ್!
- 16 hrs ago
ಬಿಎಸ್ಎನ್ಎಲ್ನಿಂದ ಅಗ್ಗದ ಪ್ಲ್ಯಾನ್ ಲಾಂಚ್; ದಂಗಾದ ಖಾಸಗಿ ಟೆಲಿಕಾಂಗಳು!
- 16 hrs ago
ಏಪ್ರಿಲ್ನಲ್ಲಿ 10,000 ರೂ.ಒಳಗೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್ಫೋನ್ಗಳು!
Don't Miss
- Finance
ದಾಖಲೆಯತ್ತ ಮುನ್ನುಗ್ಗುತ್ತಿರುವ ಬಿಟ್ಕಾಯಿನ್: ಏಪ್ರಿಲ್ 11ರ ಬೆಲೆ ಇಲ್ಲಿದೆ
- News
ದಿವ್ಯ ಸಪ್ತತಿ ಪೂರ್ತಿ ಮಹೋತ್ಸವ; ಶೃಂಗೇರಿಗೆ ಭಕ್ತರ ಭೇಟಿಗೆ ಅವಕಾಶವಿಲ್ಲ
- Sports
ಈ ವಿಶಿಷ್ಟ ದಾಖಲೆಯಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಧವನ್
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Automobiles
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- Movies
'ಇಂದಿರಾನಗರದ ಗೂಂಡಾ ನಾನೇ' ಎಂದು ದ್ರಾವಿಡ್ಗೆ ಸೆಡ್ಡು ಹೊಡೆದ ಖ್ಯಾತ ನಟಿ
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೋಕಿಯಾ 3.4 ಫಸ್ಟ್ ಲುಕ್: ಅಗ್ಗದ ದರದಲ್ಲಿ ಉತ್ತಮ ಸ್ಮಾರ್ಟ್‌ಫೋನ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ನೋಕಿಯಾ ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ನೋಕಿಯಾ 3.4 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ. ಇದರೊಂದಿಗೆ ಡಿಸೈನ್, ಅಧಿಕ RAM ಹಾಗೂ ವೇಗದ ಪ್ರೊಸೆಸರ್ ಫೀಚರ್ಸ್‌ಗಳಿಂದಲೂ ಈ ಫೋನ್ ಮತ್ತಷ್ಟು ಟ್ರೆಂಡಿ ಅನಿಸಿಕೊಂಡಿದೆ.

ನೋಕಿಯಾ 3.4 ಸ್ಮಾರ್ಟ್‌ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 4GB/64GB ಸಾಮರ್ಥ್ಯದ ವೇರಿಯಂಟ್ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 13ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಅಧಿಕವಾಗಿದೆ. ಹಾಗಾದರೇ ನೋಕಿಯಾ 3.4 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ಡಿಸೈನ್ ಹೇಗಿದೆ
ನೋಕಿಯಾ 3.4 ಸ್ಮಾರ್ಟ್‌ಫೋನ್ 720x1,560 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.39 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 400 nits ಬ್ರೈಟ್ನೆಸ್ ಪಡೆದಿದೆ. ಹಾಗೆಯೇ ಹೈ ಎಂಡ್ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ ಜೊತೆಗೆ ವಿಡಿಯೊ ವೀಕ್ಷಣೆಗೂ ಪೂರಕ ಅನಿಸಲಿದೆ.

ಪ್ರೊಸೆಸರ್ ಕಾರ್ಯ ಹೇಗೆ
ನೋಕಿಯಾ 3.4 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 460 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಫೋರ್ಟ್(ಆಂಡ್ರಾಯ್ಡ್ 11 ರೆಡಿ) ಪಡೆದಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ 512GB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ. ವೇಗದ ಗೇಮಿಂಗ್ ಆಟಗಳಿಗೆ ಪ್ರೊಸೆಸರ್ ಪೂರಕವಾಗಿದೆ.

ತ್ರಿವಳಿ ಕ್ಯಾಮೆರಾ ರಚನೆ ವಿಶೇಷ
ನೋಕಿಯಾ 3.4 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ ನಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, LED ಫ್ಲ್ಯಾಶ್ ಸೌಲಭ್ಯವನ್ನು ಒಳಗೊಂಡಿದೆ.

ಬ್ಯಾಟರಿ ಪವರ್
ನೋಕಿಯಾ 3.4 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇದರೊಂದಿಗೆ 10W ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇನ್ನು ಈ ಫೋನ್ ಬ್ಲೂಟೂತ್, GPS/ A-GPS, USB Type-C, FM, ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999