Just In
Don't Miss
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- News
Karnataka Budget 2021 Live Updates; ಬಜೆಟ್ ಮಂಡಿಸಲಿದ್ದಾರೆ ಯಡಿಯೂರಪ್ಪ
- Movies
ಬಿಗ್ಬಾಸ್: ಒಂದು ವಾರದಲ್ಲಿ ಪ್ರಶಾಂತ್ ಸಂಬರ್ಗಿ ಬದಲಾಯಿಸಿರುವ ಬಟ್ಟೆ ಎಷ್ಟು ಗೊತ್ತೆ?
- Sports
ಆತನಲ್ಲಿ ನನಗಿಂತಲೂ ಹೆಚ್ಚಿನ ಸ್ವಾಭಾವಿಕ ಸಾಮರ್ಥ್ಯವಿದೆ: ರವಿಶಾಸ್ತ್ರಿ
- Finance
ಮಾರ್ಚ್ 07ರಂದು ಚಿನ್ನದ ಬೆಲೆ ಯಾವ ನಗರದಲ್ಲಿ ಹೆಚ್ಚು ಬೆಲೆ?
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೋಕಿಯಾ 5.4 ಫೋನ್ ಫಸ್ಟ್ ಲುಕ್: ಬಜೆಟ್ ಪ್ರೈಸ್‌ನಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ನೋಕಿಯಾ ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ನೋಕಿಯಾ 5.4 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ. ಇದರೊಂದಿಗೆ ಡಿಸೈನ್, ಅಧಿಕ RAM ಹಾಗೂ ವೇಗದ ಪ್ರೊಸೆಸರ್ ಫೀಚರ್ಸ್‌ಗಳಿಂದಲೂ ಈ ಫೋನ್ ಮತ್ತಷ್ಟು ಟ್ರೆಂಡಿ ಅನಿಸಿಕೊಂಡಿದೆ.

ನೋಕಿಯಾ 5.4 ಸ್ಮಾರ್ಟ್‌ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 4GB/64GB ಮತ್ತು 6GB/64GB ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 48ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಅಧಿಕವಾಗಿದೆ. ಹಾಗಾದರೇ ನೋಕಿಯಾ 5.4 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ನೋಕಿಯಾ 5.4 ಸ್ಮಾರ್ಟ್‌ಫೋನ್ 720x1,560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.39-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5: 9 ರಚನೆಯ ಅನುಪಾತ ಮತ್ತು 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಫೋನಿನ ಬ್ಯಾಕ್ ಪ್ಯಾನೆಲ್ ಗ್ಲಾಸ್ ಕೋಟ್ ರಚನೆಯನ್ನು ಪಡೆದಿದ್ದು, ಇದು ಫೋನಿನ ಅಂದ ಹೆಚ್ಚಿಸಿದೆ. ಹಾಗೆಯೇ ಹೈ ಎಂಡ್ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ ಜೊತೆಗೆ ವಿಡಿಯೊ ವೀಕ್ಷಣೆಗೂ ಪೂರಕ ಅನಿಸಲಿದೆ.

ಯಾವ ಪ್ರೊಸೆಸರ್ ಇದೆ
ನೋಕಿಯಾ 5.4 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB/64GB ಮತ್ತು 6GB/64GB ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆಡ್ರಿನೊ ಗ್ರಾಫಿಕ್ಸ್ ಪಡೆದಿದೆ. ವೇಗದ ಗೇಮಿಂಗ್ ಆಟಗಳಿಗೆ ಪ್ರೊಸೆಸರ್ ಪೂರಕವಾಗಿದೆ.

ಕ್ವಾಡ್ ಕ್ಯಾಮೆರಾ ವಿಶೇಷತೆ
ನೋಕಿಯಾ 5.4 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು
ನೋಕಿಯಾ 5.4 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಜಿಪಿಎಸ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ರಿಯರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಮೀಸಲಾದ ಗೂಗಲ್ ಅಸಿಸ್ಟೆಂಟ್ ಬಟನ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ 5.4 ಸ್ಮಾರ್ಟ್‌ಫೋನ್ 4GB RAM + 64GB ರೂಪಾಂತರಕ್ಕೆ ಬೆಲೆ 13,999 ರೂ. ಮತ್ತು 6GB RAM + 64GB ರೂಪಾಂತರದ ಬೆಲೆ ರೂ. 15,499.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಫೆಬ್ರವರಿ 17ರಂದು ಫ್ಲಿಪ್‌ಕಾರ್ಟ್ ಮತ್ತು ನೋಕಿಯಾ ಇಂಡಿಯಾ ವೆಬ್‌ಸೈಟ್ ಮೂಲಕ ಮಾರಾಟ ಕಂಡಿದ್ದು, ಆನ್‌ಲೈನ್ ತಾಣಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇದು ಡಸ್ಕ್ ಮತ್ತು ಪೋಲಾರ್ ನೈಟ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190