ಶಾಪಿಂಗ್ ಡೇಸ್ ಆಫರ್!..ನೋಕಿಯಾ 6.1 ಪ್ಲಸ್' ಖರೀದಿಗೆ ಕ್ಯೂ ಗ್ಯಾರಂಟಿ!
ಪ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಶಾಪಿಂಗ್ ಡೇಸ್ ಮಾರಾಟ ಮೇಳದಲ್ಲಿ 'ನೋಕಿಯಾ 6.1 ಪ್ಲಸ್' ಸ್ಮಾರ್ಟ್‌ಫೋನ್ ಬೆಲೆ ಊಹಿಸಲಾಗದಷ್ಟು ಇಳಿಕೆಯಾಗಿದೆ. ಕೇವಲ ಎರಡು ದಿನಗಳ ಹಿಂದೆ 15,999 ರೂಪಾಯಿ ಬೆಲೆಯನ್ನು ಹೊಂದಿದ್ದ 'ನೋಕಿಯಾ 6.1 ಪ್ಲಸ್' ಬೆಲೆ ಇದೀಗ ಕೇವಲ 12,999 ರೂಪಾಯಿಗಳಾಗಿದ್ದು, 10 ಪರ್ಸೆಂಟ್ ಕ್ಯಾಶ್‌ಬ್ಯಾಕ್ ಪಡೆದಿರುವ ಎಸ್‌ಬಿಐ ಬ್ಯಾಂಕ್ ಗ್ರಾಹಕರು ಕೇವಲ 11,699 ರೂಪಾಯಿಗಳಿಗೆ 'ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಫೋನನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ.

ಹೌದು, ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿಟ್ರೆಂಡ್ ಸೃಷ್ಟಿಸಿರುವ ಪ್ರೀಮಿಯಂ ಬಜೆಟ್ ಸ್ಮಾರ್ಟ್‌ಫೋನ್‌ಗಳಲ್ಲಿ ಈಗಲೂ 'ನೋಕಿಯಾ 6.1 ಪ್ಲಸ್' ಮೊದಲ ಸ್ಥಾನದಲ್ಲಿದೆ. ಪ್ರೀಮಿಯಂ ಡಿಸೈನ್ ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ಈ ಡ್ಯುಯಲ್ ಕ್ಯಾಮೆರಾ ಸ್ಮಾರ್ಟ್‌ಫೋನ್ 'ನೋಕಿಯಾ 6.1 ಪ್ಲಸ್' ಅತಿ ಹೆಚ್ಚು ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದ್ದು, ಇದೀಗ ಬೆಲೆ ಇಳಿಕೆಯಿಂದಾಗಿ ಅತ್ಯುತ್ತಮ ಪ್ರೀಮಿಯಂ ಬಜೆಟ್ ಫೋನ್ ಖರೀದಿಸಬೇಕು ಎಂದುಕೊಂಡಿದ್ದವರಿಗೆ ಬೆಸ್ಟ್ ಆಯ್ಕೆಯಾಗಿದೆ.
ಬಹುತೇಕ ಎಲ್ಲಾ ಮೊಬೈಲ್ ಕಂಪೆನಿಗಳು ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುತ್ತಿರುವುದರಿಂದ ಯಾವ ಸ್ಮಾರ್ಟ್‌ಫೋನ್ ಅನ್ನು ಖರೀದಿಸುವುದು ಎಂಬುದು ಎಲ್ಲರಿಗೂ ಗೊಂದಲವಾಗುವ ವಿಷಯವೇ. ಆದರೆ, ಈ ಡ್ಯುಯಲ್ ಕ್ಯಾಮೆರಾ ಫೋನ್ ಗ್ರಾಹಕರ ಹಾಟ್ ಫೇವರೇಟ್ ಸ್ಮಾರ್ಟ್‌ಫೋನ್ ಆಗಿದೆ. ಹಾಗಾದರೆ, ಡ್ಯುಯಲ್ ಕ್ಯಾಮೆರಾ ಸ್ಮಾರ್ಟ್‌ಫೋನ್ 'ನೋಕಿಯಾ 6.1 ಪ್ಲಸ್'' ಸ್ಮಾರ್ಟ್‌ಫೋನ್ ಹೊಂದಿರುವ ವಿಶೇಷ ಫೀಚರ್ಸ್ ಯಾವುವು? ಖರೀದಿಸಲು ಏನು ಕಾರಣಗಳು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ಮತ್ತು ಡಿಸೈನ್!
ಅತ್ಯಾಕರ್ಷಕ ವಿನ್ಯಾಸದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 19: 9 ಆಕಾರ ಅನುಪಾತದ 5.84 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1080 x 2280 ಸಾಮರ್ಥ್ಯದ ಡಿಸ್‌ಪ್ಲೇ ಇದಾಗಿದೆ. ಇನ್ನು ಹಿಂಭಾಗದಲ್ಲಿ ಎರಡು ಕ್ಯಾಮೆರಾಗಳು ಹಾಗೂ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಐಫೋನ್ 10 ಮಾದರಿಯ ನೋಚ್ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್ ಮತ್ತು RAM!
ಮೊದಲೇ ಹೇಳಿದಂತೆ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 4+64 GB ವೆರಿಯಂಟ್ ಮಾದರಿಯಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಆಂಡ್ರಾಯ್ಡ್ ಒನ್ ಸಪೋರ್ಟ್ ಕ್ವಾಲ್ಕಂ ಕಂಪೆನಿಯ ಸ್ನ್ಯಾಪ್‌ಡ್ರಾಗನ್ 636 ಎಸ್‌ಒಸಿ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಪೈನಲ್ಲಿ ಕಾರ್ಯನಿರ್ವಹಣೆ ನೀಡಲಿದೆ. ಎಸ್‌ಡಿ ಕಾರ್ಡ್ ಸಹಾಯದಿಂದ ಸ್ಮಾರ್ಟ್‌ಫೋನ್ ಮೆಮೊರಿಯನ್ನು 400GB ಹೆಚ್ಚಿಸಿಕೊಳ್ಳಬಹುದಾದ ಆಯ್ಕೆ ಸಹ ಲಭ್ಯವಿದೆ.

ಕ್ಯಾಮೆರಾ ಸಾಮರ್ಥ್ಯ?
ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು ಹೊಂದಿದ್ದು, ಎಫ್ / 2.0 ಅಪಾರ್ಚರ್ ಮತ್ತು 1-ಮೈಕ್ರಾನ್ ಪಿಕ್ಸೆಲ್ಗಳಲ್ಲಿ 16-ಮೆಗಾಪಿಕ್ಸೆಲ್ ಮತ್ತು 5-ಮೆಗಾಪಿಕ್ಸೆಲ್ ಮೊನೊಕ್ರೋಮ್ ರಿಯರ್ ಕ್ಯಾಮೆರಾಗಳನ್ನು ಹೊಂದಿದೆ. 2.0 ಅಪಾರ್ಚರ್ ಮತ್ತು 1ಮೈಕ್ರಾನ್ ಪಿಕ್ಸೆಲ್ ಸೆನ್ಸಾರ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಸ್ಮಾರ್ಟ್‌ಫೋನಿನಲ್ಲಿ ನೋಡಬಹುದಾಗಿದೆ.

ಬ್ಯಾಟರಿ ಸಾಮರ್ಥ್ಯ ಎಷ್ಟು?
ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 3060mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಅಲ್ಲದೇ, ಸ್ಮಾರ್ಟ್‌ಫೋನಿನಲ್ಲಿ 18W ಚಾರ್ಜರ್ ನೀಡಿರುವುದರಿಂದ ಕೇವಲ 30 ನಿಮಿಷಗಳಲ್ಲಿ 50 ಪರ್ಸೆಂಟ್‌ಗೂ ಹೆಚ್ಚು ಚಾರ್ಜ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಯುಎಸ್‌ಬಿ ಟೈಪ್ ಸಿ ಪೋರ್ರ್ಟ ಮತ್ತು 3.5MM ಹೆಡ್‌ಪೋನ್ ಜಾಕ್ ಅನ್ನು ಸ್ಮಾರ್ಟ್‌ಫೋನಿನಲ್ಲಿ ನಾವು ಕಾಣಬಹುದಾಗಿದೆ.

ಇತರೆ ಏನೆಲ್ಲಾ ಫೀಚರ್ಸ್?
4G ವೋಲ್ಟ್, ಬ್ಲೂಟೂತ್ V5.0, 2.3 ಕರ್ವರ್ ಗ್ಲಾಸ್ 3 ಸ್ಕ್ರೀನ್ ಪ್ರೊಟೆಕ್ಷನ್ ಹೊಂದಿರುವ ಸ್ಮಾರ್ಟ್‌ಫೋನ್, ಅಕ್ಸೆಲೆರೊಮೀಟರ್, ಸುತ್ತುವರಿದ ಬೆಳಕಿನ ಸಂವೇದಕ, ಡಿಜಿಟಲ್ ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕಗಳನ್ನು ಹೊಂದಿದೆ. ಹಿಂಬಾಗದಲ್ಲಿ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಫೇಸ್‌ಲಾಕ್ ಫೀಚರ್ ಅನ್ನು ಒಳಗೊಂಡಿರುವುದು ವಿಶೇಷತೆಯಾಗಿದೆ.


Click it and Unblock the Notifications








