'ನೋಕಿಯಾ 6.1 ಪ್ಲಸ್‌' ಸ್ಮಾರ್ಟ್‌ಫೋನಿನ '6GB RAM' ವೇರಿಯಂಟ್ ಬಿಡುಗಡೆ!

|

ಮೊಬೈಲ್ ದಿಗ್ಗಜ ನೋಕಿಯಾ ಆಂಡ್ರಾಯ್ಡ ಮಾದರಿಯ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಮತ್ತೆ ಗ್ರಾಹಕರಿಗೆ ಖುಷಿ ನೀಡಿದ್ದು, ಕಂಪನಿ 'ನೋಕಿಯಾ 6.1 ಪ್ಲಸ್‌' ಆಂಡ್ರಾಯ್ಡ್, ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಅತ್ಯುತ್ತಮ ಮಾರಾಟ ಕಂಡಿದ್ದು, ಇದು ನೋಕಿಯಾ ಜನಪ್ರಿಯತೆಗೆ ಸಾಕ್ಷಿ. ಇದೀಗ 'ನೋಕಿಯಾ 6.1 ಪ್ಲಸ್‌' ಸ್ಮಾರ್ಟ್‌ಫೋನಿನ '6GB RAM' ಅಪ್‌ಡೇಟ್‌ ವರ್ಷನ್ ಅನ್ನು ಮಾರುಕಟ್ಟೆಗೆ ಲಾಂಚ್‌ ಮಾಡಿದೆ.

'ನೋಕಿಯಾ 6.1 ಪ್ಲಸ್‌' ಸ್ಮಾರ್ಟ್‌ಫೋನಿನ '6GB RAM' ವೇರಿಯಂಟ್ ಬಿಡುಗಡೆ!

ನೋಕಿಯಾ ಈ ಹಿಂದೆ ಬಿಡುಗಡೆ ಮಾಡಿದ್ದ 'ನೋಕಿಯಾ 6.1 ಪ್ಲಸ್‌' ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯವನ್ನು ಹೊಂದಿತ್ತು, ಇದೀಗ 6GB RAM ಸಾಮರ್ಥ್ಯದೊಂದಿಗೆ ಭಾರತೀಯ ಮಾರುಕಟ್ಟೆಗೆ ಮರು ಪ್ರವೇಶ ಪಡದಿದೆ. ನೋಕಿಯಾ 6.1 ಪ್ಲಸ್‌ನ 4GB RAM ವೇರಿಯಂಟ್‌ ಬೆಲೆ 15,999ರೂ.ಗಳಿದ್ದು, ಹೊಸ 6GB RAM ವೇರಿಯಂಟ್ 18,499ರೂ.ಗಳಲ್ಲಿ ಗ್ರಾಹಕರಿಗೆ ದೊರೆಯಲಿದೆ. ಹಾಗಾದರೇ ನೋಕಿಯಾ 6.1 ಪ್ಲಸ್‌ನ ಇನ್ನುಳಿದ ಫೀಚರ್ಸ್‌ಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

ಅತ್ಯಾಕರ್ಷಕ ವಿನ್ಯಾಸದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 19:9 ಆಕಾರ ಅನುಪಾತದ 5.84 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1080 x 2280 ಸಾಮರ್ಥ್ಯದ ಡಿಸ್‌ಪ್ಲೇ ಇದಾಗಿದೆ. ಇನ್ನು ಹಿಂಭಾಗದಲ್ಲಿ ಎರಡು ಕ್ಯಾಮೆರಾಗಳು ಹಾಗೂ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಐಫೋನ್ 10 ಮಾದರಿಯ ನೋಚ್ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್ ಮತ್ತು RAM

ಪ್ರೊಸೆಸರ್ ಮತ್ತು RAM

4+64 GB ವೆರಿಯಂಟ್ ಮಾದರಿಯಲ್ಲಿ ಲಭ್ಯವಿದ್ದ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್, ಇದೀಗ 6+64 GB ವೆರಿಯಂಟ್ ಮಾದರಿಯಲ್ಲಿ ಮತ್ತೆ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಆಂಡ್ರಾಯ್ಡ್ ಒನ್ ಸಪೋರ್ಟ್ ನೊಂದಿಗೆ ಕ್ವಾಲ್ಕಂ ಸ್ನ್ಯಾಪ್‌ಡ್ರಾಗನ್ 636 ಎಸ್‌ಒಸಿ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಓರಿಯೋದಲ್ಲಿ ಕಾರ್ಯನಿರ್ವಹಣೆ ನೀಡಲಿದೆ. ಎಸ್‌ಡಿ ಕಾರ್ಡ್ ಸಹಾಯದಿಂದ ಸ್ಮಾರ್ಟ್‌ಫೋನ್ ಮೆಮೊರಿಯನ್ನು 400GB ಹೆಚ್ಚಿಸಿಕೊಳ್ಳಬಹುದಾದ ಆಯ್ಕೆ ಸಹ ಲಭ್ಯವಿದೆ.

ಕ್ಯಾಮೆರಾ ಸಾಮರ್ಥ್ಯ

ಕ್ಯಾಮೆರಾ ಸಾಮರ್ಥ್ಯ

ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು ಹೊಂದಿದ್ದು, ಎಫ್ / 2.0 ಅಪಾರ್ಚರ್ ಮತ್ತು 1-ಮೈಕ್ರಾನ್ ಪಿಕ್ಸೆಲ್ಗಳಲ್ಲಿ 16-ಮೆಗಾಪಿಕ್ಸೆಲ್ ಮತ್ತು 5-ಮೆಗಾಪಿಕ್ಸೆಲ್ ಮೊನೊಕ್ರೋಮ್ ರಿಯರ್ ಕ್ಯಾಮೆರಾಗಳನ್ನು ಹೊಂದಿದೆ. 2.0 ಅಪಾರ್ಚರ್ ಮತ್ತು 1ಮೈಕ್ರಾನ್ ಪಿಕ್ಸೆಲ್ ಸೆನ್ಸಾರ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಸ್ಮಾರ್ಟ್‌ಫೋನಿನಲ್ಲಿ ನೋಡಬಹುದಾಗಿದೆ.

ಬ್ಯಾಟರಿ

ಬ್ಯಾಟರಿ

ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 3060mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಅಲ್ಲದೇ, ಸ್ಮಾರ್ಟ್‌ಫೋನ್‌ 18W ಚಾರ್ಜರ್ ಸಹಾಯದಿಂದ ಕೇವಲ 30 ನಿಮಿಷಗಳಲ್ಲಿ 50 ಪರ್ಸೆಂಟ್ ಚಾರ್ಜ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಯುಎಸ್‌ಬಿ ಟೈಪ್ ಸಿ ಪೋರ್ರ್ಟ ಮತ್ತು 3.5MM ಹೆಡ್‌ಪೋನ್ ಜಾಕ್ ಅನ್ನು ಸ್ಮಾರ್ಟ್‌ಫೋನಿನಲ್ಲಿ ಕಾಣಬಹುದಾಗಿದೆ.

ಇತರೆ ಫೀಚರ್ಸ್

ಇತರೆ ಫೀಚರ್ಸ್

4G ವೋಲ್ಟ್, ಬ್ಲೂಟೂತ್ V5.0, 2.3 ಕರ್ವರ್ ಗ್ಲಾಸ್ 3 ಸ್ಕ್ರೀನ್ ಪ್ರೊಟೆಕ್ಷನ್ ಹೊಂದಿರುವ ಸ್ಮಾರ್ಟ್‌ಫೋನ್, ಅಕ್ಸೆಲೆರೊಮೀಟರ್, ಸುತ್ತುವರಿದ ಬೆಳಕಿನ ಸಂವೇದಕ, ಡಿಜಿಟಲ್ ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕಗಳನ್ನು ಹೊಂದಿದೆ. ಹಿಂಬಾಗದಲ್ಲಿ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಫೇಸ್‌ಲಾಕ್ ಫೀಚರ್ ಅನ್ನು ಒಳಗೊಂಡಿರುವುದು ವಿಶೇಷತೆಯಾಗಿದೆ.

Best Mobiles in India

English summary
Nokia 6.1 Plus was launched in India last year and now, the 6GB RAM variant of the smartphone has also been introduced in the country. The Nokia 6.1 Plus price in India was recently slashed as well..to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X