ನೋಕಿಯಾ 6.1 ಪ್ಲಸ್ ಮೇಲೆ 5,000 ರೂ.ವರೆಗೆ ಬೆಲೆ ಇಳಿಕೆ!

|

ಇದೇ ಸೆಪ್ಟೆಂಬರ್ 6 ರಿಂದ ಪ್ರಾರಂಭವಾಗುವ ಐಎಫ್‌ಎ ಬರ್ಲಿನ್ 2019 ಕಾರ್ಯಕ್ರಮದಲ್ಲಿ ಹೊಸ ನೋಕಿಯಾ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ತಯಾರಾಗಿರುವ ಎಚ್‌ಎಂಡಿ ಗ್ಲೋಬಲ್ ಭರ್ಜರಿ ಸಿಹಿಸುದ್ದಿ ನೀಡಿದೆ. ನೂತನ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಮುನ್ನವೇ ತನ್ನ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ 7.1 ಮತ್ತು ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಫೋನ್‌ಗಳ ಮೇಲೆ 5,000 ರೂ.ವರೆಗೆ ಬೆಲೆ ಇಳಿಕೆ ಮಾಡಿ ಸಿಹಿಸುದ್ದಿ ನೀಡಿದೆ.

ನೋಕಿಯಾ 6.1 ಪ್ಲಸ್ ಮೇಲೆ 5,000 ರೂ.ವರೆಗೆ ಬೆಲೆ ಇಳಿಕೆ!

ಹೌದು, ಭಾರತದಲ್ಲಿ ನೋಕಿಯಾ 6.1 ಪ್ಲಸ್ ಮತ್ತು ನೋಕಿಯಾ 7.1 ಬೆಲೆ ಇಳಿಕೆಯ ಹಿಂದಿನ ಅಧಿಕೃತ ಕಾರಣವನ್ನು ಎಚ್‌ಎಂಡಿ ಬಹಿರಂಗಪಡಿಸಿಲ್ಲ. ಆದರೆ, ನೋಕಿಯಾ 6.1 ಪ್ಲಸ್ ಮತ್ತು ನೋಕಿಯಾ 7.1 ಉತ್ತರಾಧಿಕಾರಿ ಫೋನ್‌ಗಳು ಬರುತ್ತಿರುವುದರಿಂದ ಬೆಲೆಗಳು ಇಳಿಕೆಯಾಗಿವೆ ಎನ್ನಲಾಗಿದೆ. ವದಂತಿಗಳು ಮತ್ತು ಸೋರಿಕೆಯ ಪ್ರಕಾರ, ನೋಕಿಯಾ 7.2 ಮತ್ತು ನೋಕಿಯಾ 6.2 ಎರಡು ಸ್ಮಾರ್ಟ್‌ಫೋನ್‌ಗಳು ಐಎಫ್ಎ 2019ರಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ.

ಬೆಲೆ ಇಳಿಕೆಯಾದ ನಂತರ 15,999 ರೂ. ದರದಲ್ಲಿ ಬಿಡುಗಡೆಯಾಗಿದ್ದ ನೋಕಿಯಾ 6.1 ಪ್ಲಸ್ ಬೆಲೆ ನೋಕಿಯಾದ ಆನ್‌ಲೈನ್ ತಾಣದಲ್ಲಿ 11,999 ರೂ.ಗಳಾಗಿವೆ. ಆದರೆ, ಅಮೆಜಾನ್ ಸೈಟ್‌ನಲ್ಲಿ ನೋಕಿಯಾ 6.1 ಪ್ಲಸ್ ಇನ್ನೂ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು, 10,989 ರೂ.ಗಳಿಗೆ ಪೋನನ್ನು ಖರೀದಿಸಬಹುದಾಗಿದೆ. ಇನ್ನು ನೋಕಿಯಾ 7.1 ಬೆಲೆ ಈಗ 4GB ಆವೃತ್ತಿ ಬೆಲೆ 12,999 ರೂ.ಗೆ ಲಭ್ಯವಿದ್ದು, ಆರಂಭದಲ್ಲಿ 17,999 ರೂ. ದರ ಹೊಂದಿದ್ದನ್ನು ನಾವು ನೋಡಬಹುದು.

ಹೊಸ ಫೋನ್ ಬಿಡುಗಡೆಗೂ ಮುನ್ನ ಹಳೆಯ ಮಾದರಿಗಳ ಬೆಲೆಯಲ್ಲಿ ನೋಕಿಯಾ ಇಳಿಕೆ ಮಾಡಿರುವುದು ಗ್ರಾಹಕರಿಗೆ ಪ್ರಯೋಜನವಾಗಲಿದೆ. ಸುಮಾರು 11,000 ರೂ.ಗಳಿಗೆ ಆಂಡ್ರಾಯ್ಡ್ ಒನ್ ಫೋನ್ ನೋಕಿಯಾ 6.1 ಪ್ಲಸ್ ಉತ್ತಮ ವ್ಯವಹಾರ ಎಂದು ಹೇಳಬಹುದು. ಹಾಗಾದರೆ, 5,000 ರೂ.ವರೆಗೆ ಬೆಲೆ ಇಳಿಕೆ ಕಂಡಿರಿವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಫೋನ್ ಹೇಗಿದೆ?, ಸ್ಮಾರ್ಟ್‌ಫೋನಿನ ಫೀಚರ್ಸ್ ಯಾವುವು ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ಓದಿ ತಿಳಿಯಿರಿ.

ಡಿಸ್‌ಪ್ಲೇ ಮತ್ತು ಡಿಸೈನ್!

ಡಿಸ್‌ಪ್ಲೇ ಮತ್ತು ಡಿಸೈನ್!

ಅತ್ಯಾಕರ್ಷಕ ವಿನ್ಯಾಸದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 19: 9 ಆಕಾರ ಅನುಪಾತದ 5.84 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1080 x 2280 ಸಾಮರ್ಥ್ಯದ ಡಿಸ್‌ಪ್ಲೇ ಇದಾಗಿದೆ. ಇನ್ನು ಹಿಂಭಾಗದಲ್ಲಿ ಎರಡು ಕ್ಯಾಮೆರಾಗಳು ಹಾಗೂ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಐಫೋನ್ 10 ಮಾದರಿಯ ನೋಚ್ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್ ಮತ್ತು RAM!

ಪ್ರೊಸೆಸರ್ ಮತ್ತು RAM!

ಮೊದಲೇ ಹೇಳಿದಂತೆ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 4+64 GB ವೆರಿಯಂಟ್ ಮಾದರಿಯಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಆಂಡ್ರಾಯ್ಡ್ ಒನ್ ಸಪೋರ್ಟ್ ಕ್ವಾಲ್ಕಂ ಕಂಪೆನಿಯ ಸ್ನ್ಯಾಪ್‌ಡ್ರಾಗನ್ 636 ಎಸ್‌ಒಸಿ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಓರಿಯೋದಲ್ಲಿ ಕಾರ್ಯನಿರ್ವಹಣೆ ನೀಡಲಿದೆ. ಎಸ್‌ಡಿ ಕಾರ್ಡ್ ಸಹಾಯದಿಂದ ಸ್ಮಾರ್ಟ್‌ಫೋನ್ ಮೆಮೊರಿಯನ್ನು 400GB ಹೆಚ್ಚಿಸಿಕೊಳ್ಳಬಹುದಾದ ಆಯ್ಕೆ ಸಹ ಲಭ್ಯವಿದೆ.

ಕ್ಯಾಮೆರಾ ಸಾಮರ್ಥ್ಯ?

ಕ್ಯಾಮೆರಾ ಸಾಮರ್ಥ್ಯ?

ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು ಹೊಂದಿದ್ದು, ಎಫ್ / 2.0 ಅಪಾರ್ಚರ್ ಮತ್ತು 1-ಮೈಕ್ರಾನ್ ಪಿಕ್ಸೆಲ್ಗಳಲ್ಲಿ 16-ಮೆಗಾಪಿಕ್ಸೆಲ್ ಮತ್ತು 5-ಮೆಗಾಪಿಕ್ಸೆಲ್ ಮೊನೊಕ್ರೋಮ್ ರಿಯರ್ ಕ್ಯಾಮೆರಾಗಳನ್ನು ಹೊಂದಿದೆ. 2.0 ಅಪಾರ್ಚರ್ ಮತ್ತು 1ಮೈಕ್ರಾನ್ ಪಿಕ್ಸೆಲ್ ಸೆನ್ಸಾರ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಸ್ಮಾರ್ಟ್‌ಫೋನಿನಲ್ಲಿ ನೋಡಬಹುದಾಗಿದೆ.

ಬ್ಯಾಟರಿ ಸಾಮರ್ಥ್ಯ ಎಷ್ಟು?

ಬ್ಯಾಟರಿ ಸಾಮರ್ಥ್ಯ ಎಷ್ಟು?

ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 3060mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಅಲ್ಲದೇ, ಸ್ಮಾರ್ಟ್‌ಫೋನ್‌ 18W ಚಾರ್ಜರ್ ಸಹಾಯದಿಂದ ಕೇವಲ 30 ನಿಮಿಷಗಳಲ್ಲಿ 50 ಪರ್ಸೆಂಟ್ ಚಾರ್ಜ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಯುಎಸ್‌ಬಿ ಟೈಪ್ ಸಿ ಪೋರ್ರ್ಟ ಮತ್ತು 3.5MM ಹೆಡ್‌ಪೋನ್ ಜಾಕ್ ಅನ್ನು ಸ್ಮಾರ್ಟ್‌ಫೋನಿನಲ್ಲಿ ಕಾಣಬಹುದಾಗಿದೆ.

ಇತರೆ ಏನೆಲ್ಲಾ ಫೀಚರ್ಸ್?

ಇತರೆ ಏನೆಲ್ಲಾ ಫೀಚರ್ಸ್?

4G ವೋಲ್ಟ್, ಬ್ಲೂಟೂತ್ V5.0, 2.3 ಕರ್ವರ್ ಗ್ಲಾಸ್ 3 ಸ್ಕ್ರೀನ್ ಪ್ರೊಟೆಕ್ಷನ್ ಹೊಂದಿರುವ ಸ್ಮಾರ್ಟ್‌ಫೋನ್, ಅಕ್ಸೆಲೆರೊಮೀಟರ್, ಸುತ್ತುವರಿದ ಬೆಳಕಿನ ಸಂವೇದಕ, ಡಿಜಿಟಲ್ ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕಗಳನ್ನು ಹೊಂದಿದೆ. ಹಿಂಬಾಗದಲ್ಲಿ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಫೇಸ್‌ಲಾಕ್ ಫೀಚರ್ ಅನ್ನು ಒಳಗೊಂಡಿರುವುದು ವಿಶೇಷತೆಯಾಗಿದೆ.

Best Mobiles in India

English summary
HMD Global is expected to launch the Nokia 6.2 and the Nokia 7.2 at IFA 2019 event in Berlin next month. Before the new Nokia phones arrive HMD Global reduces India price of predecessor phones -- Nokia 7.1 and Nokia 6.1 Plus. to know more visit to kannada.gizbxot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X