Just In
Don't Miss
- Education
UIDAI Recruitment 2022 : ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಸೈಬರ್ ದಾಳಿಗೆ ಎಸ್ಬಿಐ ವಿಮಾ ಸುರಕ್ಷೆ, ಇಲ್ಲಿದೆ ವಿವರ
- Sports
ಲೈಂಗಿಕ ದುರ್ನಡತೆ ಆರೋಪ: ಭಾರತೀಯ U-17 ಮಹಿಳಾ ಫುಟ್ಬಾಲ್ ತಂಡದ ಸಹಾಯಕ ಕೋಚ್ ವಜಾ
- Movies
ಪುನೀತ್ ರಾಜ್ಕುಮಾರ್ಗೆ ಆ ಒಂದು ಮಾತು ಹೇಳಲೇ ಬೇಕಿತ್ತಂತೆ ಸಾಯಿ ಪಲ್ಲವಿ!
- News
ನೂಪುರ್ ವಿರುದ್ಧದ ಸುಪ್ರೀಂ ಹೇಳಿಕೆಗೆ ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳ ಆಕ್ಷೇಪ
- Lifestyle
ನೀವು ಯಾವ ಭಂಗಿಯಲ್ಲಿ ಮಲಗುತ್ತೀರಾ ಅದೇ ಹೇಳುತ್ತೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತಾ!
- Automobiles
ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ನೋಕಿಯಾ C01 ಪ್ಲಸ್ ವಿಮರ್ಶೆ: ಆಕರ್ಷಕ ಫೀಚರ್ಸ್ನ ಎಂಟ್ರಿ ಲೆವೆಲ್ ಫೋನ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ನೋಕಿಯಾ ಭಾರತದಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ನೋಕಿಯಾ C 01 ಪ್ಲಸ್ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್ಫೋನ್ ಎಂಟ್ರಿ ಲೆವೆಲ್ ಮಾದರಿಯ ಫೋನ್ ಆಗಿದ್ದು, ಸಿಂಗಲ್ ಕ್ಯಾಮೆರಾ ಸೆಟ್ಅಪ್ ಒಳಗೊಂಡಿದೆ. ಇದರೊಂದಿಗೆ 3,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ. ಅದಾಗ್ಯೂ ಈ ಫೋನ್ ಅಗ್ಗದ ದರದಲ್ಲಿ ಟ್ರೆಂಡಿ ಅನಿಸಿಕೊಂಡಿದೆ.

ನೋಕಿಯಾ C 01 ಪ್ಲಸ್ ಸ್ಮಾರ್ಟ್ಫೋನ್ ಆಂತರಿಕ ಸ್ಟೋರೇಜ್ಗೂ ಪ್ರಾಮುಖ್ಯತೆ ನೀಡಿದ್ದು, 2GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಹಾಗೆಯೇ ತನ್ನ ವರ್ಗದಲ್ಲೇ ಸ್ಕ್ರೀನ್ ರೆಸಲ್ಯೂಶನ್ ಅಧಿಕವಾಗಿದೆ. ಇನ್ನುಳಿದಂತೆ ನೋಕಿಯಾ C 01 ಪ್ಲಸ್ ಸ್ಮಾರ್ಟ್ಫೋನ್ ಇತರೆ ಫೀಚರ್ಸ್ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್ಗಳನ್ನು ಓದಿರಿ.
ಡಿಸ್ಪ್ಲೇ ವಿನ್ಯಾಸ ಹೇಗಿದೆ?
ನೋಕಿಯಾ C01 ಪ್ಲಸ್ ಸ್ಮಾರ್ಟ್ಫೋನ್ 720 x 1,440 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 5.45 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 18:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಫೋನ್ ಪಾಲಿಕಾರ್ಬೊನೇಟ್ ಬಾಡಿಯನ್ನು ಹೊಂದಿದೆ. ತನ್ನ ವರ್ಗದಲ್ಲೇ ಇದು ಸ್ಪರ್ಧಾತ್ಮಕ ಡಿಸ್ಪ್ಲೇ ಆಗಿದೆ. ಜೊತೆಗೆ ವಿಡಿಯೊ ವೀಕ್ಷಣೆಗೂ ಪೂರಕ ಅನಿಸಲಿದೆ.
ಪ್ರೊಸೆಸರ್ ಪವರ್ ಯಾವುದು?
ನೋಕಿಯಾ C01 ಪ್ಲಸ್ ಸ್ಮಾರ್ಟ್ಫೋನ್ 1.6GHz ಆಕ್ಟಾ ಕೋರ್ ಯುನಿಸೋಕ್ SC9863a ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್ 11 (ಗೋ ಆವೃತ್ತಿ) ಡೇಟಾ ಬಳಕೆಯನ್ನು 60% ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಹಾಗೆಯೇ ಈ ಫೋನ್ 2GB RAM ಜೊತೆಗೆ 16GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಗೇಮಿಂಗ್ ಆಟಗಳಿಗೆ ಪ್ರೊಸೆಸರ್ ಪೂರಕವಾಗಿದೆ.
ಸಿಂಗಲ್ ಕ್ಯಾಮೆರಾ ಸೆನ್ಸಾರ್
ನೋಕಿಯಾ C01 ಪ್ಲಸ್ ಸ್ಮಾರ್ಟ್ಫೋನ್ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಈ ಎರಡೂ ಕ್ಯಾಮೆರಾಗಳು ಎಲ್ಇಡಿ ಫ್ಲ್ಯಾಷ್ ಅನ್ನು ಬೆಂಬಲಿಸಲಿವೆ. ಎಂಟ್ರಿ ಲೆವೆಲ್ ಫೋನ್ಗಳ ವರ್ಗದಲ್ಲಿ ಇದು ಆಕರ್ಷಕ ಕ್ಯಾಮೆರಾ ಎನಿಸಿದರೂ, ಮುಖ್ಯ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಹೆಚ್ಚಿಸಬಹುದಿತ್ತು.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ನೋಕಿಯಾ C01 ಪ್ಲಸ್ ಸ್ಮಾರ್ಟ್ಫೋನ್ 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಇಡೀ ದಿನ ಬ್ಯಾಟರಿ ಬ್ಯಾಕಪ್ ನೀಡಲಿದೆ ಎಂದು ನೋಕಿಯಾ ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಯುಎಸ್ಬಿ ಪೋರ್ಟ್, ಅನ್ನು ಬೆಂಬಲಿಸಲಿದೆ. ಸದ್ಯದ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಈ ಫೋನ್ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ನೋಕಿಯಾ C01 ಪ್ಲಸ್ ಸ್ಮಾರ್ಟ್ಫೋನ್ ಭಾರತದಲ್ಲಿ ಏಕೈಕ 2 GB RAM + 16 GB ಸ್ಟೊರೇಜ್ ಆಯ್ಕೆಗೆ 5,999ರೂ. ಬೆಲೆಯನ್ನು ಹೊಂದಿದೆ. ಈ ಫೋನ್ ನೀಲಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086