ರೂ.2000ಕ್ಕೆ ನೋಕಿಯಾ 1 ಆಂಡ್ರಾಯ್ಡ್‌ ಫೋನ್‌: ಬಿಡುಗಡೆಗೆ ಮೂಹುರ್ತ ಫಿಕ್ಸ್..!

Written By:

ನೋಕಿಯಾ ಸ್ಮಾರ್ಟ್‌ಫೋನ್‌ಗಳು ಮತ್ತೆ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಸಂತೋಷದ ವಿಚಾರವಾಗಿತ್ತು. ಈ ಹಿನ್ನಲೆಯಲ್ಲಿ ನೋಕಿಯಾ ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಉತ್ತಮವಾಗಿಯೇ ಸದ್ದು ಮಾಡುತ್ತಿವೆ, ಇದೆ ಮಾದರಿಯಲ್ಲಿ ಮಾರುಕಟ್ಟೆಯಲ್ಲಿ ಬಜೆಟ್ ಸ್ಮಾರ್ಟ್‌ಫೋನ್‌ಗಳ ಸಂಖ್ಯೆಯೂ ಹೆಚ್ಚಾಗಿರುವ ಕಾರಣ ನೋಕಿಯಾ ಸಹ ಇದೇ ವಿಭಾಗದಲ್ಲಿ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಿದ್ದು, ಇದು ಮಾರುಕಟ್ಟೆಯಲ್ಲಿ ಸದ್ದು ಮಾಡುವುದು ಖಂಡಿತ ಎನ್ನಲಾಗಿದೆ.

ರೂ.2000ಕ್ಕೆ ನೋಕಿಯಾ 1 ಆಂಡ್ರಾಯ್ಡ್‌ ಫೋನ್‌: ಬಿಡುಗಡೆಗೆ ಮೂಹುರ್ತ ಫಿಕ್ಸ್..!

ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಚರ್ಚೆಯನ್ನು ಶುರು ಮಾಡಿರುವ ಆಂಡ್ರಾಯ್ಡ್ ಗೋ ಆವೃತ್ತಿಯ ನೋಕಿಯಾ 1 ಸ್ಮಾರ್ಟ್‌ಫೋನ್ ಮುಂದಿನ ತಿಂಗಳು ನಡೆಯಲಿರುವ ಬಾರ್ಸಿಲೋನದಲ್ಲಿ ನಡೆಯಲಿರುವ ಮೊಬೈಲ್ ಕಾಂಗ್ರೆಸ್ ಸಮಾವೇಶದಲ್ಲಿ ಬಿಡುಗಡೆಯಾಗಲಿದ್ದು, ಈ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಭಾಷ್ಯವನ್ನು ಬರೆಯಲಿದೆ ಎನ್ನಲಾಗಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್ ಕುರಿತ ನಿರೀಕ್ಷೆಗಳು ಹೆಚ್ಚಾಗುತ್ತಿದ್ದು, ಬೆಲೆಯ ವಿ‍ಚಾರಕ್ಕೆ ಇದು ಹೆಚ್ಚು ಸದ್ದು ಮಾಡುತ್ತದೆ.

ಓದಿರಿ: ನಿಮ್ಮ ಹೊಸ ಫೋನ್ ಸರಿಯಾಗಿದ್ಯಾ..? ನೀವೇ ಚೆಕ್ ಮಾಡುವುದು ಹೇಗೆ..?

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಫೆಬ್ರವರಿ 25ಕ್ಕೆ ಚಾಂಚ್:

ಫೆಬ್ರವರಿ 25ಕ್ಕೆ ಚಾಂಚ್:

ಆಂಡ್ರಾಯ್ಡ್ ಗೋ ಆವೃತ್ತಿಯ ನೋಕಿಯಾ 1 ಸ್ಮಾರ್ಟ್‌ಫೋನ್ ಫೆಬ್ರವರಿ 25 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಮೊಬೈಲ್ ಕಾಂಗ್ರೆಸ್ ಸಮಾವೇಶದಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು ನೋಕಿಯಾ ಲಾಂಚ್ ಮಾಡಲಿದೆ ಎನ್ನಲಾಗಿದೆ. ಇದರೊಂದಿಗೆ ಇನ್ನು ಅನೇಕ ನೋಕಿಯಾ ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಅಂದೇ ಪರಿಚಯಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರೂ.2000 ಮಾತ್ರವೇ:

ರೂ.2000 ಮಾತ್ರವೇ:

ಸದ್ಯ ದೊರೆತಿರುವ ಮಾಹಿತಿಯ ಪ್ರಕಾರ ನೋಕಿಯಾ ಬಿಡುಗಡೆ ಮಾಡುತ್ತಿರುವ ಆಂಡ್ರಾಯ್ಡ್ ಗೋ ಆವೃತ್ತಿಯ ನೋಕಿಯಾ 1 ಸ್ಮಾರ್ಟ್‌ಫೋನ್‌ ಬೆಲೆಯ ಮೂಲಕವೇ ಮಾರುಕಟ್ಟೆಯಲ್ಲಿ ಸದ್ದು ಶುರು ಮಾಡಲಿದೆ. ಈಗಾಗಲೇ ತಿಳಿದಿರುವಂತೆ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಬೆಲೆ ತೀರಾ ಕಡಿಮೆ ಇರಲಿದ್ದು, ಇದೇ ಮಾದರಿಯಲ್ಲಿ ನೋಕಿಯಾ 1 ಸಹ ರೂ.2000ದ ಅಸುಪಾಸಿನಲ್ಲಿ ಲಭ್ಯವಿರಲಿದೆ.

Aadhaar-ಬಾಂಕ್ ಲಿಂಕ್ ಆಗಿದೆಯೇ-ಇಲ್ಲವೇ ಚೆಕ್‌ ಮಾಡಿ..!
ಹೊಸ ಅಲೆ:

ಹೊಸ ಅಲೆ:

ಈಗಾಗಲೇ ಮಾರುಕಟ್ಟೆಯಲ್ಲಿ ಆಂಡ್ರಾಯ್ಡ್ ಗೋ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳು ಶೀಘ್ರವೇ ಕಾಣಿಸಿಕೊಳ್ಳಲಿದ್ದು, ಈ ಹಿನ್ನಲೆಯಲ್ಲಿ ನೋಕಿಯಾ ಮೊದಲೇ ಮಾರುಕಟ್ಟೆಯನ್ನು ನಿಯಂತ್ರಿಸುವ ಸಲುವಾಗಿ ನೋಕಿಯಾ 1 ಸ್ಮಾರ್ಟ್‌ಫೋನ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡುವ ಸಲುವಾಗಿ ಕಡಿಮೆ ಬೆಲೆಗೆ ಲಾಂಚ್ ಮಾಡಲಿದೆ.

ಮಾರುಕಟ್ಟೆಯ ಚಿತ್ರಣವೇ ಬದಲು:

ಮಾರುಕಟ್ಟೆಯ ಚಿತ್ರಣವೇ ಬದಲು:

ನೋಕಿಯಾ ಲಾಂಚ್ ಮಾಡಲಿದೆ ಎನ್ನಲಾಗಿರುವ ನೋಕಿಯಾ 1 ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಚಿತ್ರಣವನ್ನು ಬದಲು ಮಾಡಲಿದ್ದು, ಚೀನಾ ಸ್ಮಾರ್ಟ್ ಫೋನ್ ಕಂಪನಿಗಳಿಗೆ ದೊಡ್ಡ ಹೊಡೆತವನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ಮಾರುಕಟ್ಟೆಯನ್ನು ತನ್ನ ಕಡೆಗೆ ತಿರುಗಿಸಿಕೊಳ್ಳೊಲು ನೋಕಿಯಾಗೆ ಸಹಾಯ ಮಾಡಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Nokia to Launch Its Next Android Smartphones on February 25. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot