ಚೀನಾ ಸ್ಮಾರ್ಟ್‌ಫೋನ್‌ಗಳಿಗೆ ಸೆಡ್ಡು ಹೊಡೆಯುವ ನೋಕಿಯಾ X6 ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..!
ನೋಕಿಯಾ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಲಾಂಚ್ ಮಾಡುತ್ತಿರುವ HMD ಕಂಪನಿಯೂ ಹೊಸದಾಗಿ ನೋಕಿಯಾ X ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಲು ಮುಂದಾಗಿದೆ. ಇದೇ ಮೊದಲಿಗೆ ಚೀನಾದಲ್ಲಿ ನೋಕಿಯಾ X6 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ.

ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಳಕೆದಾರರ ಕೈಗೆ ನೀಡಲು ಮುಂದಾಗಿದೆ. ನೋಕಿಯಾ X6 ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಹಾಕಿದೆ. ನೋಡಲು ಆಪಲ್ ಮಾದರಿಯಲ್ಲಿ ಸ್ಮಾರ್ಟ್‌ಫೊನ್ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.

ಡಿಸ್‌ಪ್ಲೇ:
ನೋಕಿಯಾ X6 ಸ್ಮಾರ್ಟ್‌ಫೋನಿನಲ್ಲಿ 5.8 ಇಂಚಿನ ಡಿಸ್‌ಪ್ಲೇ ಯನ್ನು ಕಾಣಬಹುದಾಗಿದ್ದು, FHD+ ಡಿಸ್‌ಪ್ಲೇಯನ್ನು ನೋಡಬಹುದಾಗಿದೆ. ಅಲ್ಲದೇ ಇದು 19:9 ಅನುಪಾತದಿಂದ ಕೂಡಿದೆ. ಸುರಕ್ಷತೆಗಾಗಿ ಗೊರಿಲ್ಲಾ ಗ್ಲಾಸ್ 3 ಸುರಕ್ಷತೆಯನ್ನು ಹೊಂದಿದೆ.

ಪ್ರೋಸೆಸರ್:
ನೋಕಿಯಾ X6 ಸ್ಮಾರ್ಟ್‌ಫೋನ್ 1.8GHz ವೇಗದ ಸ್ನಾಪ್‌ಡ್ರಾಗನ್ 636 ಪ್ರೋಸೆಸರ್ ಅನ್ನು ಹೊಂದಿದ್ದು, ಆಂಡ್ರಿನೋ 509 GPU ವನ್ನು ಕಾಣಬಹುದಾಗಿದೆ. ಉತ್ತಮವಾದ ಗೇಮ್ ಗಳನ್ನು ಮತ್ತು ವಿಡಿಯೋಗಳನ್ನು ಇದರಲ್ಲಿ ನೋಡಬಹುದಾಗಿದೆ.

RAM ಮತ್ತು ಸ್ಟೋರೆಜ್:
ಇದಲ್ಲದೇ ನೋಕಿಯಾ X6 ಸ್ಮಾರ್ಟ್‌ಫೋನ್ ಮೂರು ಆವೃತ್ತಿಯಲ್ಲಿ ದೊರೆಯಲಿದ್ದು, 4GB RAM ಮತ್ತು 32GB ಇಂಟರ್ನಲ್ ಮೆಮೊರಿ, 4GB RAM ಮತ್ತು 64GB ಇಂಟರ್ನಲ್ ಮೆಮೊರಿ ಹಾಗೂ 6GB RAM ಮತ್ತು 64GB ಇಂಟರ್ನಲ್ ಮೆಮೊರಿಯೊಂದಿಗೆ ಲಭ್ಯವಾಗಲಿದೆ. ಅಲ್ಲದೇ 256GB ವರೆಗೂ ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ:
ನೋಕಿಯಾ X6 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 16MP + 5 MPಯ ಡ್ಯುಯಲ್ ಕ್ಯಾಮೆರಾವನ್ನು ನೀಡಲಾಗಿದ್ದು, ಮುಂಭಾಗದಲ್ಲಿ 16 MP ಕ್ಯಾಮೆರಾವನ್ನು ನೀಡಲಾಗಿದ್ದು, AI ಸ್ಟೀಕರ್ ಗಳನ್ನು ಕ್ರಿಯೆಟ್ ಮಾಡಿಕೊಳ್ಳಲು ಇದು ಸಹಾಯ ಮಾಡಲಿದೆ.

ಬೆಲೆ:
ನೋಕಿಯಾ X6 ಸ್ಮಾರ್ಟ್‌ಫೋನ್ ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದ್ದು, 4GB RAM ಮತ್ತು 32GB ಇಂಟರ್ನಲ್ ಮೆಮೊರಿಯ ಸ್ಮಾರ್ಟ್‌ಫೊನ್ ರೂ.14,000ಕ್ಕೆ, 4GB RAM ಮತ್ತು 64GB ಇಂಟರ್ನಲ್ ಮೆಮೊರಿ ರೂ. 16000ಕ್ಕೆ ಹಾಗೂ 6GB RAM ಮತ್ತು 64GB ಇಂಟರ್ನಲ್ ಮೆಮೊರಿ ರೂ.18,000ಕ್ಕೆ ಲಭ್ಯವಿರಲಿದೆ.


Click it and Unblock the Notifications








