ಮಾರುಕಟ್ಟೆಯಲ್ಲಿಯೇ ಅತೀ ಕಡಿಮೆ ಬೆಲೆ ದೊರೆಯುವ ಸ್ಮಾರ್ಟ್ ಫೋನ್….!
ಕಡಿಮೆ ಬೆಲೆಗೆ ಮಾರಾಟ ಮಾಡುವ ಸಲುವಾಗಿಯೇ ರೂಪಿತವಾಗಿರುವ ಆಂಡ್ರಾಯ್ಡ್ ಗೋ ಆವೃತ್ತಿಯ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಟಾಪ್ ಕಂಪನಿಗಳು ಸಹ ತಮ್ಮದೇ ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಗಳನ್ನು ಲಾಂಚ್ ಮಾಡಿದ್ದು, ಇದೇ ಮಾದರಿಯಲ್ಲಿ ಮಾರುಕಟ್ಟೆಯಲ್ಲಿಯೇ ಅತೀ ಕಡಿಮೆ ಬೆಲೆಗೆ ಆಲ್ಕಟೆಲ್ ಕಂಪನಿಯೂ ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಗಳನ್ನು ಲಾಂಚ್ ಮಾಡಿದೆ. ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಫೋನ್ ಸದ್ದು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದ್ಯ ರಷ್ಯಾ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿರುವ ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದ್ದು, ಇದು ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಎಲ್ಲಾ ಫೋನ್ ಗಳಿಗಿಂತ ಕಡಿಮೆ ಬೆಲೆಗೆ ದೊರೆಯಲಿದೆ. ಇದಲ್ಲದೇ ಈ ಸ್ಮಾರ್ಟ್ ಫೋನಿನಲ್ಲಿ ಉತ್ತಮ ವಿನ್ಯಾಸವನ್ನು ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಕುರಿತ ಮಾಹಿತಿಯೂ ಮುಂದಿನಂತಿದೆ.

18:9 ಅನುಪಾತದ ಡಿಸ್ ಪ್ಲೇ:
ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನಿನಲ್ಲಿ 5 ಇಂಚಿನ ಡಿಸ್ ಪ್ಲೇಯನ್ನ ಕಾಣಬಹುದಾಗಿದ್ದು, ಇದು 18:9 ಅನುಪಾತದ ಡಿಸ್ ಪ್ಲೇಯಾಗಿದ್ದು, ಬಳಕೆದಾರರಿಗೆ ಹೊಸ ಅನುಭವನ್ನು ನಿಡಲಿದೆ. ಅಲ್ಲದೇ ಇದು HD ಗುಣಮಟ್ಟವನ್ನು ಹೊಂದಿದ್ದು, ಈ ವಿಭಾಗದಲ್ಲಿ ಬೆಸ್ಟ್ ಎನ್ನಬಹುದು.

ಉತ್ತಮ ಕ್ಯಾಮೆರಾ:
ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಹಿಂಭಾಗದಲ್ಲಿ 5 MP ಕ್ಯಾಮೆರಾವನ್ನು ಅಳವಡಿಸಲಾಗಿದೆ, ಅಲ್ಲದೇ ಮುಂಭಾಗದಲ್ಲಿ 2 MP ಕ್ಯಾಮೆರಾವನ್ನು ಅಳವಡಿಲಾಗಿದ್ದು, ಬೆಸ್ಟ್ ಫೋಟೋಗಳನ್ನು ಇದರಲ್ಲಿ ಕ್ಲಿಕ್ ಮಾಡಬಹುದಾಗಿದೆ.

RAM –ROM:
ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನಿನಲ್ಲಿ 1 GB RAM ಅನ್ನು ನೀಡಲಾಗಿದ್ದು, ಇದರೊಂದಿಗೆ 8 GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಇದಲ್ಲದೇ ಮಿಡಿಯಾ ಟೆಕ್ 6739 ಚಿಪ್ ಸೆಟ್ ಅನ್ನು ಅಳವಡಿಸಲಾಗಿದೆ. ಅಲ್ಲದೇ ಡ್ಯುಯಲ್ ಸಿಮ್ ಕಾರ್ಡ್ ಹಾಕಿಕೊಳ್ಳಬಹುದಾಗಿದೆ.

ಆಂಡ್ರಾಯ್ಡ್ ಗೋ:
ಆಲ್ಕಟೆಲ್ 1 ಸ್ಮಾರ್ಟ್ ಫೋನ್ ಆಂಡ್ರಾಯ್ಡ್ ಗೋ ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್ ಫೋನಿನಲ್ಲಿ ಗೂಗಲ್ ಗೋ ಆಪ್ ಗಳೊಂದಿಗೆ ಕಾಣಿಸಿಕೊಳ್ಳಲಿದ್ದು, ಕಡಿಮೆ ಜಾಗದಲ್ಲಿ ಈ ಆಪ್ ಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಶಕ್ತವಾಗಿವೆ.

ಬೆಲೆಗಳು:
ಆಲ್ಕಟೆಲ್ 1 ಆಂಡ್ರಾಯ್ಡ್ ಗೋ ಸ್ಮಾರ್ಟ್ ಪೋನ್ ಮೂಲಗಳು ತಿಳಿಸಿರುವಂತೆ ರೂ.2499ಕ್ಕೆ ದೊರೆಯಲಿದೆ ಎನ್ನಲಾಗಿದೆ. ಆದರೆ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯೂ ಲಭ್ಯವಾಗಿಲ್ಲ. ಆದರೆ ಮೂಲಗಳ ಪ್ರಕಾರ ಇದೇ ಬೆಲೆಗೆ ಮಾರಾಟವಾಗಲಿದೆ.


Click it and Unblock the Notifications








