ಧೂಳೆಬ್ಬಿಸಲು ಬಂತು OnePlus 13 ಫೋನ್; ರಾಶಿ ರಾಶಿ ಫೀಚರ್ಸ್.. ಅಬ್ಬಾ.. ಬೆಲೆ ಎಷ್ಟು ಗೊತ್ತಾ?
ಸ್ಮಾರ್ಟ್‌ಫೋನ್ ಪ್ರಿಯರ ಕಾಯುವಿಕೆ ಮುಗಿಯಿತು! ಬಹುನಿರೀಕ್ಷಿತ ಒನ್‌ಪ್ಲಸ್ 13 (OnePlus 13) ಸರಣಿಯು ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸರಣಿಯಲ್ಲಿ ಎರಡು ಹೊಸ ಮೊಬೈಲ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹೌದು, ಒನ್‌ಪ್ಲಸ್ 13 (OnePlus 13) ಮತ್ತು ಒನ್‌ಪ್ಲಸ್ 13R (OnePlus 13R) ಸ್ಮಾರ್ಟ್‌ಫೋನ್ ಅಧಿಕೃತವಾಗಿ ರಿಲೀಸ್ ಆಗಿವೆ. ಈ ಪೈಕಿ ಒನ್‌ಪ್ಲಸ್ 13 ಮೊಬೈಲ್ ಟೆಕ್ ಪ್ರಿಯರ ಗಮನ ಸೆಳೆಯುವಲ್ಲಿ ಸೈ ಎನಿಸಿಕೊಂಡಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.
ಒನ್‌ಪ್ಲಸ್ 13 ಫೋನ್ ಎರಡು 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.82 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 100W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನುಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಒನ್‌ಪ್ಲಸ್ 13 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒನ್‌ಪ್ಲಸ್ 13 ಮೊಬೈಲ್ 6.82 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2K+ LTPO ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 3168 × 1440 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒನ್‌ಪ್ಲಸ್ 13 ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತದೆ. ಇದು ಗ್ರಾಫಿಕ್ಸ್‌ಗಾಗಿ, 900MHz ಅಡ್ರಿನೊ 830 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಆಕ್ಸಿಜನ್ ಓಎಸ್15 ನೊಂದಿಗೆ ಕೆಲಸ ನಿರ್ವಹಿಸುತ್ತದೆ.
ಸ್ಟೋರೇಜ್ ಆಯ್ಕೆ
ಒನ್‌ಪ್ಲಸ್ 13 ಸ್ಮಾರ್ಟ್‌ಫೋನ್ 12GB, 16GB ಮತ್ತು 24GB RAM ಹೊಂದಿದೆ. ಇದರಲ್ಲಿ 256GB ಮತ್ತು 512GB ಸ್ಟೋರೇಜ್ ಲಭ್ಯವಿದೆ.

ಕ್ಯಾಮೆರಾ ಸೆಟಪ್
ಒನ್‌ಪ್ಲಸ್ 13 ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೋನಿ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒನ್‌ಪ್ಲಸ್ 13 ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸಹ ಲಭ್ಯವಿದೆ.
ಒನ್‌ಪ್ಲಸ್ 13 ಫೋನಿನ ಬೆಲೆ
12GB RAM + 256GB ಸ್ಟೋರೇಜ್ = 69,999 ರೂ.
ರಿಯಾಯಿತಿ ಬೆಲೆ = 64,999 ರೂ.
16GB RAM + 512GB ಸ್ಟೋರೇಜ್ = 76,999 ರೂ.
ರಿಯಾಯಿತಿ ಬೆಲೆ = 71,999 ರೂ.
24GB RAM + 1TB ಸ್ಟೋರೇಜ್ = 89,999 ರೂ.
ರಿಯಾಯಿತಿ ಬೆಲೆ = 84,999 ರೂ.
ಒನ್‌ಪ್ಲಸ್ 13 ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವನ್ನು 69,999 ರೂ.ಗೆ ಬಿಡುಗಡೆ ಮಾಡಲಾಗಿದೆ. ನೀವು ರಿಯಾಯಿತಿಯೊಂದಿಗೆ 64,999 ರೂ.ಗೆ ಖರೀದಿಸಬಹುದು. ಈ ಫೋನ್ ಜನವರಿ 10 ರಂದು ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು,ಕಂಪನಿಯ ಅಧಿಕೃತ ವೆಬ್‌ಸೈಟ್, ಒನ್‌ಪ್ಲಸ್ ಸ್ಟೋರ್, ಅಮೆಜಾನ್ ಮೂಲಕ ಖರೀದಿಸಬಹುದು.
ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಈ ಫೋನ್ ಖರೀದಿಸಿದರೆ, 5000 ರೂ. ಬ್ಯಾಂಕ್ ರಿಯಾಯಿತಿ ಪಡೆಯಬಹುದು. ಜೊತೆಗೆ 18,000 ರೂ.ವರೆಗೆ ಎಕ್ಸ್‌ಚೇಂಜ್ ಆಫರ್ ಸಹ ಸಿಗುತ್ತದೆ. ನೀವು ಬಜಾಜ್ ಫಿನ್‌ಸರ್ವ್ ಮತ್ತು ಪ್ರಮುಖ ಕ್ರೆಡಿಟ್ ಕಾರ್ಡ್‌ಗಳಲ್ಲಿ 12 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಸೌಲಭ್ಯ ಸಹ ಪಡೆಯಬಹುದು.


Click it and Unblock the Notifications