Home
ಮೊಬೈಲ್

ಇಂದಿನಿಂದ OnePlus 13R ಸೇಲ್ ಶುರು; 50+50MP ಕ್ಯಾಮೆರಾ.. ಬಿಗ್ ಬ್ಯಾಟರಿ.. ಬೆಲೆ, ಆಫರ್‌ ಏನಿದೆ?

ಒನ್‌ಪ್ಲಸ್‌ 13 (OnePlus 13) ಸರಣಿಯನ್ನು ಇತ್ತೀಚೆಗೆ ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಒನ್‌ಪ್ಲಸ್‌ 13R (OnePlus 13R) ಫೋನ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಇಂದು (ಜನವರಿ 13) ಅಮೆಜಾನ್‌ ಮೂಲಕ ತನ್ನ ಮೊದಲ ಮಾರಾಟವನ್ನು ಶುರು ಮಾಡಲಿದೆ. ನೀವು ಮೊದಲ ದಿನವೇ ಖರೀದಿಸಿದರೆ, 3,000 ರೂ. ಡಿಸ್ಕೌಂಟ್ ಸಿಗುತ್ತದೆ. ಜೊತೆಗೆ 12,000 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಮತ್ತು ನೋ ಕಾಸ್ಟ್ ಇಎಂಐ ಸೇರಿದಂತೆ ಹಲವು ಆಫರ್‌ಗಳ ಲಾಭ ಪಡೆಯಬಹುದು. ಬನ್ನಿ, ಈ ಫೋನಿನ ವಿಶೇಷತೆಗಳನ್ನು ತಿಳಿಯೋಣ.

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಇದು ಎರಡು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳನ್ನು ಹೊಂದಿದೆ. ಈ ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 12GB RAM + 256GB ಸ್ಟೋರೇಜ್‌, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಆಫರ್ ತಿಳಿಯಲು ಮುಂದೆ ಓದಿ.

ಇಂದು OnePlus 13R ಫಸ್ಟ್ ಸೇಲ್; 3000 ಡಿಸ್ಕೌಂಟ್.. ಬೆಲೆ, ಹೇಗಿವೆ ಫೀಚರ್ಸ್

ಒನ್‌ಪ್ಲಸ್ 13R ವೈಶಿಷ್ಟ್ಯಗಳು

ದೊಡ್ಡ ಡಿಸ್ಪ್ಲೇ

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.78 ಇಂಚಿನ 8T LTPO ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2780 × 1264 ಪಿಕ್ಸೆಲ್ ರೆಸಲ್ಯೂಶನ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಶಕ್ತಿಶಾಲಿ ಪ್ರೊಸೆಸರ್

ಒನ್‌ಪ್ಲಸ್ 13R ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ ಹೊಂದಿದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 750 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ OxygenOS 15.0 ನೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು16GB RAM ಹೊಂದಿದೆ. ಈ ಫೋನಿನಲ್ಲಿ 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್

ಒನ್‌ಪ್ಲಸ್ 13R ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ 2x ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬಿಗ್‌ ಬ್ಯಾಟರಿ

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್ 80W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್‌ಫ್ರಾರೆಡ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, 5G, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಒನ್‌ಪ್ಲಸ್ 13R ಬೆಲೆ ಮತ್ತು ಆಫರ್‌

12GB + 256GB ಸ್ಟೋರೇಜ್ ಬೆಲೆ = 42,999 ರೂ.
16GB + 512GB ಸ್ಟೋರೇಜ್ ಬೆಲೆ = 49,999 ರೂ.

ಒನ್‌ಪ್ಲಸ್ 13R ಫೋನಿನ 256GB ಸ್ಟೋರೇಜ್ ರೂಪಾಂತರವು 42,999 ರೂ. ಮತ್ತು 512GB ಸ್ಟೋರೇಜ್ ಬೆಲೆ 49,999 ರೂ. ಇದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಎರಡು ರೂಪಾಂತರಗಳ ಮೇಲೆ 3,000 ರೂ. ರಿಯಾಯಿತಿ ನೀಡುತ್ತಿದೆ. ಜೊತೆಗೆ 12,000 ರೂ. ಎಕ್ಸ್‌ಚೇಂಜ್‌ ಆಫರ್‌ ಮತ್ತು 4,000 ರೂ. ಎಕ್ಸ್‌ಚೇಂಜ್ ಬೋನಸ್‌ ಸಿಗುತ್ತದೆ. ಈ ಮೂಲಕ ಒನ್‌ಪ್ಲಸ್‌ 13R ಫೋನನ್ನು 23,999 ರೂ.ಗೆ ಮಾರಾಟವಾಗಲಿದೆ. ಇದು ಕಂಪನಿಯ ಅಧಿಕೃತ ವೆಬ್‌ಸೈಟ್, ಒನ್‌ಪ್ಲಸ್ ಸ್ಟೋರ್, ಅಮೆಜಾನ್‌ ಮೂಲಕ ಇಂದು (ಜನವರಿ 13) ಮಧ್ಯಾಹ್ನ 12 ಗಂಟೆಗೆ ಮಾರಾಟವಾಗಲಿದೆ.

Best Mobiles in India

English summary
OnePlus 13R First Sale Start in India Today via Amazon: Check Price, Offers and Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+