OnePlus 13R ಸಂಪೂರ್ಣ ಫೀಚರ್ಸ್ ಬಹಿರಂಗ; 6000mAh ಬ್ಯಾಟರಿ.. 512GB ಸ್ಟೋರೇಜ್.. ಬೆಲೆಯೂ ಲೀಕ್!
ಒನ್‌ಪ್ಲಸ್ ತನ್ನ ಗ್ರಾಹಕರಿಗೆ ಕ್ರಿಸ್ಮಸ್ ಉಡುಗೊರೆ ನೀಡಲು ಸಜ್ಜಾಗಿದೆ. ಒನ್‌ಪ್ಲಸ್ 13 (OnePlus 13) ಜನವರಿಯಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲೇ, ಒನ್‌ಪ್ಲಸ್ 13R (OnePlus 13R) ಈ ತಿಂಗಳು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಮೊಬೈಲ್ OnePlus Ace 5 ಹೆಸರಿನೊಂದಿಗೆ ಜಾಗತಿಕವಾಗಿ ರಿಲೀಸ್ ಆಗಲಿದೆ. ಇದು ಒನ್‌ಪ್ಲಸ್ 13 ಫೋನಿನ ಜೊತೆಗೆ ಬಿಡುಗಡೆಯಾಗಲಿದೆಯೇ? ಎಂಬ ಕುತೂಹಲ ಮೂಡಿದೆ. ಪ್ರಸ್ತುತ, ಮುಂಬರುವ ಫೋನಿನ ಸಂಪೂರ್ಣ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಒನ್‌ಪ್ಲಸ್ 12R ಫೋನಿಗಿಂತ ಮುಂಬರುವ ಒನ್‌ಪ್ಲಸ್ 13R ತೆಳ್ಳಗಿರುತ್ತದೆ. ಇದು ಜನವರಿಯಲ್ಲಿ ಒನ್‌ಪ್ಲಸ್ 13 ಜೊತೆಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಒನ್‌ಪ್ಲಸ್ 13R ನಿರೀಕ್ಷಿತ ಬೆಲೆ
ಒನ್‌ಪ್ಲಸ್ 13R ಫೋನನ್ನು ಭಾರತದಲ್ಲಿ 40 ಸಾವಿರ ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಫೋನಿನ ಟಾಂಪ್ ವೇರಿಯಂಟ್ ಬೆಲೆ 52 ಸಾವಿರ ರೂ. ಆಗಿರಲಿದೆ. ಈ ಒನ್‌ಪ್ಲಸ್ 13R ಮೊಬೈಲ್, ಮೊದಲು ಚೀನಾದಲ್ಲಿ ಬಿಡುಗಡೆಯಾಗಲಿದೆ. ಬಳಿಕ, ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಚೀನಾದ ಬೆಲೆಗಿಂತ ಕಡಿಮೆ ಬೆಲೆಗೆ ಭಾರತದಲ್ಲಿ ಖರೀದಿಗೆ ಲಭ್ಯವಿರಲಿದೆ.
ಒನ್‌ಪ್ಲಸ್ 13R: ಟಾಪ್ 5 ವೈಶಿಷ್ಟ್ಯಗಳು
ಒನ್‌ಪ್ಲಸ್ 13R ಫೋನಿನ ಡಿಸ್ಪ್ಲೇ, ಕ್ಯಾಮೆರಾ ಸೆಟಪ್, ಬ್ಯಾಟರಿ ಸೇರಿದಂತೆ ಎಲ್ಲ ಪ್ರಮುಖ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ. ಅವುಗಳನ್ನು ಒಂದೊಂದಾಗಿ ನೋಡೋಣ ಬನ್ನಿ.
ಡಿಸ್ಪ್ಲೇ ವಿವರ
ಒನ್‌ಪ್ಲಸ್ 13R ಮೊಬೈಲ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1264 × 2780 ಪಿಕ್ಸೆಲ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒನ್‌ಪ್ಲಸ್ 13R ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಒನ್‌ಪ್ಲಸ್ 12R ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ OxygenOS 15.0 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.
ಸ್ಟೋರೇಜ್ ಆಯ್ಕೆ
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ 12GB RAM ಮತ್ತು 256GB ಸ್ಟೋರೇಜ್‌ನೊಂದಿಗೆ ಬಿಡುಗಡೆಯಾಗಲಿದೆ. ಒನ್‌ಪ್ಲಸ್ 12R ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಮುಂಬರುವ ಈ ಫೋನಿನ ಟಾಪ್ ವೇರಿಯಂಟ್ 16GB RAM ಮತ್ತು 512GB ಸ್ಟೋರೇಜ್ ಹೊಂದಿರಲಿದೆ.
ಕ್ಯಾಮೆರಾ ಸೆಟಪ್
ಒನ್‌ಪ್ಲಸ್ 13R ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒನ್‌ಪ್ಲಸ್ 13R ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಒನ್‌ಪ್ಲಸ್ 12R ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್‌ಫ್ರಾರೆಡ್ ರಿಮೋಟ್ ಕಂಟ್ರೋಲ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಎನ್‌ಎಫ್‌ಸಿ, ವೈ-ಫೈ, ಬ್ಲೂಟೂತ್ 5.4 ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








