Home
ಮೊಬೈಲ್

ಮಾರುಕಟ್ಟೆಗೆ ಅಪ್ಪಳಿಸಿತು OnePlus 13R ಫೋನ್: ಎರಡು 50MP ಕ್ಯಾಮೆರಾಗಳು.. 6000mAh ಬ್ಯಾಟರಿ.. ಬೆಲೆ ಇಷ್ಟೆನಾ?

ಬಹುನಿರೀಕ್ಷಿತ ಒನ್‌ಪ್ಲಸ್‌ 13R (OnePlus 13R) ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದನ್ನು ಒನ್‌ಪ್ಲಸ್‌ 13 (OnePlus 13) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ಈ ಸರಣಿಯಲ್ಲಿ ಒನ್‌ಪ್ಲಸ್‌ 13 ಮತ್ತು ಒನ್‌ಪ್ಲಸ್‌ 13R ಫೋನ್‌ಗಳು ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ಒನ್‌ಪ್ಲಸ್‌ 13R ಈಗಾಗಲೇ ಚೀನಾದಲ್ಲಿ ಬಿಡುಗಡೆಯಾಗಿದೆ. ಇದು OnePlus Ace 5 ಫೋನಿನ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಒನ್‌ಪ್ಲಸ್‌ 13R ಫೋನ್ ಎರಡು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳನ್ನು ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB RAM + 256GB ಸ್ಟೋರೇಜ್‌, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

OnePlus 13R ಲಾಂಚ್; ಅದ್ಭುತ ಕ್ಯಾಮೆರಾ, ಬೃಹತ್ ಬ್ಯಾಟರಿ.. ಬೆಲೆ ಎಷ್ಟು?

ಒನ್‌ಪ್ಲಸ್ 13R ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒನ್‌ಪ್ಲಸ್ 13R ಮೊಬೈಲ್ 6.78 ಇಂಚಿನ 8T LTPO ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2780 × 1264 ಪಿಕ್ಸೆಲ್ ರೆಸಲ್ಯೂಶನ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 750 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ OxygenOS 15.0 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಒನ್‌ಪ್ಲಸ್ 12R ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ.

ಸ್ಟೋರೇಜ್ ಆಯ್ಕೆ

ಒನ್‌ಪ್ಲಸ್ 13R ಫೋನ್ 12GB RAM ಮತ್ತು16GB RAM ಹೊಂದಿದೆ. ಈ ಫೋನಿನಲ್ಲಿ 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಸೆಟಪ್

ಒನ್‌ಪ್ಲಸ್ 13R ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ 2x ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.

OnePlus 13R ಲಾಂಚ್; ಅದ್ಭುತ ಕ್ಯಾಮೆರಾ, ಬೃಹತ್ ಬ್ಯಾಟರಿ.. ಬೆಲೆ ಎಷ್ಟು?

ಬ್ಯಾಟರಿ ಮತ್ತು ಚಾರ್ಜಿಂಗ್

ಒನ್‌ಪ್ಲಸ್ 13R ಮೊಬೈಲ್ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್ 80W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒನ್‌ಪ್ಲಸ್ 12R ಮೊಬೈಲ್ 5500mAh ಬ್ಯಾಟರಿಯನ್ನು ಹೊಂದಿದೆ.

ಇತರೆ ವೈಶಿಷ್ಟ್ಯಗಳು

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್‌ಫ್ರಾರೆಡ್ ರಿಮೋಟ್ ಕಂಟ್ರೋಲ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಎನ್‌ಎಫ್‌ಸಿ, ವೈ-ಫೈ 7, ಬ್ಲೂಟೂತ್ 5.4 ಮತ್ತು ಯುಎಸ್‌ಬಿ ಟೈಪ್ ಸಿ, ಸ್ಟಿರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಒನ್‌ಪ್ಲಸ್ 13R ಬೆಲೆ ಮತ್ತು ಲಭ್ಯತೆ

12GB + 256GB ಸ್ಠೋರೇಜ್ = 42,999 ರೂ.
16GB + 512GB ಸ್ಟೋರೇಜ್ = 49,999 ರೂ.

ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. 12GB + 256GB ಸ್ಠೋರೇಜ್ ಬೆಲೆ 42,999 ರೂ. ಮತ್ತು 16GB + 512GB ಸ್ಟೋರೇಜ್ ಬೆಲೆ 49,999 ರೂ. ಆಗಿದೆ. ಈ ಮೊಬೈಲ್ ಜನವರಿ 13 ರಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು,ಕಂಪನಿಯ ಅಧಿಕೃತ ವೆಬ್‌ಸೈಟ್, ಒನ್‌ಪ್ಲಸ್ ಸ್ಟೋರ್, ಅಮೆಜಾನ್‌ ಮೂಲಕ ಖರೀದಿಸಬಹುದು.

Best Mobiles in India

English summary
OnePlus 13R with 6000mAh battery launched in India: price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+