TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ವಿಶ್ವ ಮೊಬೈಲ್ ಮಾರುಕಟ್ಟೆಯಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಭಾರತದಲ್ಲಿ ಇದೇ ಮೇ ತಿಂಗಳ 17ನೇ ತಾರೀಖು ಬಿಡುಗಡೆಯಾಗುತ್ತಿರುವ ಸುದ್ದಿ ನಿಮಗೆಲ್ಲಾ ಈಗಾಗಲೇ ತಿಳಿದಿದೆ ಎನ್ನಬಹುದು. ಆದರೆ, ಭಾರೀ ಕುತೋಹಲ ಹುಟ್ಟಿಸಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ ಎಷ್ಟು ಎಂಬುದು ಮಾತ್ರ ಈಗಷ್ಟೇ ಲೀಕ್ ಆಗಿದೆ.!
ಹೌದು, ಭವಿಷ್ಯದ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಆಗಲಿದೆ ಎಂಬ ನಿರೀಕ್ಷೆಯನ್ನು ಹುಟ್ಟಿಹಾಕಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಬೆಲೆಗಳು ಎಷ್ಟು ಎಂಬುದನ್ನು ಪ್ರಮುಖ ಗ್ಯಾಜೆಟ್ ವೆಬ್‌ಸೈಟ್‌ಗಳು ವರದಿ ಮಾಡಿವೆ. ಒನ್‌ಪ್ಲಸ್ ಅಧಿಕೃತವಾಗಿ ಬೆಲೆ ಮಾಹಿತಿ ನೀಡುವುದಕ್ಕಿಂತಲೂ ಮೊದಲೇ ಒನ್‌ಪ್ಲಸ್ 6 ನಿಖರ ಬೆಲೆಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ.
ಒನ್‌ಪ್ಲಸ್ ಕಂಪೆನಿ ತನ್ನ ವಿಶೇಷ ಸ್ಟಾರ್ ವಾರ್ಸ್ ಲಿಮಿಟೆಡ್ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮೊದಲು ಪರಿಚಯಿಸಲು ಮುಂದಾಗಿದೆ. ಗ್ರಾಹಕರಿಗೆ ಅತಿ ಕಡಿಮೆ ಬೆಲೆಗೆ ಅತ್ಯುತ್ತಮ ಫೋನ್‌ಗಳನ್ನು ನೀಡಲು ಹೊಸ ಮಾರಾಟ ನೀತಿ ಅನುಸರಿಸುತ್ತಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ ಎಷ್ಟು ಎಂಬುದು ಎಲ್ಲರಿಗೂ ಕುತೋಹಲ ಮೂಡಿಸಿದೆ. ಹಾಗಾದರೆ, ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ ಎಷ್ಟು ಮತ್ತು ಫೀಚರ್ಸ್ ಯಾವುವು ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!
ಒನ್‌ಪ್ಲಸ್ 6 ವಿನ್ಯಾಸ ಹೇಗಿದೆ?
ಇದೇ ಮೊದಲ ಬಾರಿಗೆ ಒನ್‌ಪ್ಲಸ್ 6 ಸ್ಮಾರ್ಟ್‌ಫೋನಿನ ಮೊದಲ ಪೋಟೊ ಲೀಕ್ ಆಗಿ ಇಂಟರ್‌ನೆಟ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಐಫೋನ್ 10 ಮಾದರಿಯ ಡಿಸ್‌ಪ್ಲೇ ನೋಚ್ ,ವುಡನ್ ಬ್ಯಾಕ್ ಪ್ಯಾನಲ್ ವಿನ್ಯಾವನ್ನು ಹೊಂದಿರುವ ಒನ್‌ಪ್ಲಸ್ 6 ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಮತ್ತು 3.5mm ಆಡಿಯೋ ಜಾಕ್ ಕೂಡ ಸ್ಮಾರ್ಟ್‌ಫೋನಿನಲ್ಲಿ ಇರಲಿದೆ.!!
ಸ್ನ್ಯಾಪ್‌ಡ್ರಾಗನ್ 845 Soc ಚಿಪ್‌ಸೆಟ್!!
ಒನ್‌ಪ್ಲಸ್ ಕಂಪೆನಿ ಸಿಇಒ ಪೀಟ್ ಲೌ ಹೇಳಿರುವಂತೆ ಒನ್‌ಪ್ಲಸ್ 6 ಫೋನಿನಲ್ಲಿ ಕ್ವಾಲ್ಕಮ್ ಕಂಪೆನಿಯ ಸ್ನ್ಯಾಪ್‌ಡ್ರಾಗನ್ 845 Soc ಚಿಪ್‌ಸೆಟ್ ಅಳವಡಿಸದೆ ವಿಧಿಯಿಲ್ಲ.! ಪ್ರಸ್ತುತ ಅತ್ಯುತ್ತಮ ಮೊಬೈಲ್ ಚಿಪ್‌ಸೆಟ್ ಎಂದು ಹೆಸರಾಗಿರುವ ಸ್ನ್ಯಾಪ್‌ಡ್ರಾಗನ್ 845 Soc ಚಿಪ್‌ಸೆಟ್ ಅನ್ನು ಗ್ರಾಹಕರು ಕೂಡ ಎದುರು ನೋಡುತ್ತಿದ್ದಾರೆ.!!
ವಾಟರ್‌ಪ್ರೂಫ್ ಚಾಲೆಂಜ್!!
ಬಿಡುಗಡೆಯಾಗಲಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಅತ್ಯದ್ಬುತ ವಾಟರ್‌ಪ್ರೂಫ್ ತಂತ್ರಜ್ಞಾನವನ್ನು ಹೊಂದಿರಲಿದೆ.! ಪ್ರಸ್ತುತ ಇರುವ ವಾಟರ್‌ಪ್ರೂಫ್ ತಂತ್ರಜ್ಞಾನಕ್ಕಿಂತಲೂ ಅತ್ಯುತ್ತಮ ವಾಟರ್‌ಪ್ರೂಫ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದಾಗಿ ಒನ್‌ಪ್ಲಸ್ ಕಂಪೆನಿ ಹೆಳಿದೆ.!!
ಗಾಜಿನ ಹಿಂಭಾಗವನ್ನು ಹೊಂದಿದೆ ಒನ್‌ಪ್ಲಸ್ 6!!
ಒನ್‌ಪ್ಲಸ್ ಸ್ಮಾರ್ಟ್‌ಫೋನುಗಳು ಮಾರುಕಟ್ಟೆಗೆ ಬಂದಾಗಿನಿಂದಲೂ ಯಾವಾಗಲೂ ಸುಂದರ ವಿನ್ಯಾಸಕ್ಕೆ ಹೆಸರುವಾಸಿಯಾಗಿವೆ. ಹಾಗಾಗಿ, ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಪ್ರಿಯರು ಒನ್‌ಪ್ಲಸ್ 6 ಸ್ಮಾರ್ಟ್‌ಪೋನಿನ ವಿನ್ಯಾಸದ ಮೇಲೆ ಇನ್ನೂ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಈ ನಿರೀಕ್ಷೆಯನ್ನು ಹೊತ್ತಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಪ್ರೀಮಿಯಂ ವಿನ್ಯಾಸದಲ್ಲಿ ಗಾಜಿನ ಹಿಂಭಾಗವನ್ನು ಹೊಂದಿದೆ ಎಂದು ಪೀಟ್ ಲೌ ಅವರು ತಿಳಿಸಿದ್ದಾರೆ.
ಒನ್‌ಪ್ಲಸ್ ಸ್ಮಾರ್ಟ್‌ಫೋನುಗಳು ಮಾರುಕಟ್ಟೆಗೆ ಬಂದಾಗಿನಿಂದಲೂ ಯಾವಾಗಲೂ ಸುಂದರ ವಿನ್ಯಾಸಕ್ಕೆ ಹೆಸರುವಾಸಿಯಾಗಿವೆ. ಹಾಗಾಗಿ, ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಪ್ರಿಯರು ಒನ್‌ಪ್ಲಸ್ 6 ಸ್ಮಾರ್ಟ್‌ಪೋನಿನ ವಿನ್ಯಾಸದ ಮೇಲೆ ಇನ್ನೂ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಈ ನಿರೀಕ್ಷೆಯನ್ನು ಹೊತ್ತಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಪ್ರೀಮಿಯಂ ವಿನ್ಯಾಸದಲ್ಲಿ ಗಾಜಿನ ಹಿಂಭಾಗವನ್ನು ಹೊಂದಿದೆ ಎಂದು ಪೀಟ್ ಲೌ ಅವರು ತಿಳಿಸಿದ್ದಾರೆ.
5 ಪದರದ ನ್ಯಾನೋಟೆಕ್ ಕೋಟಿಂಗ್!!
ಪ್ರೀಮಿಯಂ ವಿನ್ಯಾಸದಲ್ಲಿ ಗಾಜಿನ ಹಿಂಭಾಗವನ್ನು ಹೊಂದಿರುವ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಮೂರು ಸಾಮಾನ್ಯ ನ್ಯಾನೋಟೆಕ್ ಪದರಗಳ ಬದಲಾಗಿ 5 ಪದರದ ನ್ಯಾನೋಟೆಕ್ ಕೋಟಿಂಗ್ ಹೊಂದಿದೆ ಎಂದು ತಿಳಿದುಬಂದಿದೆ. ಹೆಚ್ಚುವರಿ ಪದರಗಳು ಸಾಧನದ ಹಿಂಭಾಗವನ್ನು ಆವರಿಸಿರುವುದರಿಂದ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಪ್ರೀಮಿಯಂ ನೋಟವನ್ನು ಮಾತ್ರವಲ್ಲದೇ, ಅತ್ಯುತ್ತಮ ಗುಣಮಟ್ಟವನ್ನು ಹೊಂದಿರುವುದನ್ನು ಕಾಣಬಹುದಾಗಿದೆ.
ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ?
ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ ಈ ಮೊದಲ ಒನ್‌ಪ್ಲಸ್ ಕಂಪೆನಿ ಸ್ಮಾರ್ಟ್‌ಫೋನ್‌ಗಳಿಗಿಂತ ಸ್ವಲ್ಪ ಹೆಚ್ಚಾಗಿಯೇ ಇದೆ ಎನ್ನಲಾಗುತ್ತಿದೆ. 6GB RAM+ 64GB ಮೆಮೊರಿ ವೆರಿಯಂಟ್‌ನ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ 33,999 ರೂಪಾಯಿಗಳಾಗಿರಲಿದೆ ಎನ್ನಲಾಗಿದೆ. ಇನ್ನು 8GB RAM + 128GB ಮೆಮೊರಿ ವೆರಿಯಂಟ್‌ನ ಒನ್‌ಪ್ಲಸ್ 6 ಸ್ಮಾರ್ಟ್‌ಪೋನ್ ಬೆಲೆ 39,999 ರೂ.ಗಳು ಎಂದು ಹೇಳಲಾಗುತ್ತಿದೆ.