ಭಾರತಿಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ 'ಒನ್‌ಪ್ಲಸ್'!

|

ವಿಶ್ವ ಮೊಬೈಲ್ ಮಾರುಕಟ್ಟೆಯಲ್ಲಿ ತ್ರಿವಿಕ್ರಮನಂತೆ ಮೆರೆಯುತ್ತಿರುವ ಒನ್‌ಪ್ಲಸ್ ಮೊಬೈಲ್ ಕಂಪೆನಿ ಭಾರತಿಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇತ್ತೀಚಿಗಷ್ಟೇ ಭಾರತದಲ್ಲಿ ದಾಖಲೆಯ ಅನ್‌ಬಾಕ್ಸಿಂಗ್ ಕಂಡ ತನ್ನ 'ಒನ್‌ಪ್ಲಸ್ 6T' ಸ್ಮಾರ್ಟ್‌ಫೋನಿನ ನೂತನ ಕಲರ್ ವೆರಿಯಂಟ್ ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿ ಎಲ್ಲರ ಗಮನಸೆಳೆದಿದೆ. ಕಂಪೆನಿ ಹೇಳುವಂತೆ, 'ಮುಸ್ಸಂಜೆಯಲ್ಲಿ ಮಿಂಚು ಹೊಡೆದಾಗ ಆಕಾಶದಲ್ಲಿ ಮೂಡುವ ನೈಸರ್ಗಿಕ ಬಣ್ಣಗಳಿಂದ ಈ ಬಣ್ಣದ ಫೋನ್ ವಿನ್ಯಾಸ ಸ್ಫೂರ್ತಿ ಪಡೆದಿದೆ' ಎಂದು ಹೇಳಿಕೊಂಡಿದೆ.

ಹೌದು, ಒನ್‌ಪ್ಲಸ್ ಕಂಪೆನಿಯೇ ಹೇಳುವಂತೆ ನೂತನ ಬಣ್ಣದ ಹೊಸ ಮಾದರಿಯಲ್ಲಿ ಈಗ ಕಾಲಿಟ್ಟಿರುವ 'ಒನ್‌ಪ್ಲಸ್ 6T' ಸ್ಮಾರ್ಟ್‌ಫೋನ್ ಜನರ ಕಣ್ಮನ ಸೆಳೆಯುತ್ತಿದೆ. ಭಾರತದಲ್ಲಿ ಈವರೆಗೂ ಲಭ್ಯವಿದ್ದ ಮಿರರ್ ಬ್ಲಾಕ್ ಹಾಗೂ ಮಿಡ್‌ನೈಟ್ ಬ್ಲಾಕ್ ಬಣ್ಣಗಳ ಒನ್‌ಪ್ಲಸ್ 6T ಸ್ಮಾರ್ಟ್‌ಪೋನ್ ಈಗ ಮತ್ತೊಂದು ಆಯ್ಕೆಯನ್ನು ನೀಡಿದೆ. ಈ ಎರಡೂ ಮಾದರಿಗಳಿಗೆ 'ಥಂಡರ್ ಪರ್ಪಲ್' ಎಂಬ ಹೊ ಬಣ್ಣದ ಮಾದರಿ ಫೋನ್ ಸೇರಿಕೊಂಡು ಒನ್‌ಪ್ಲಸ್ 6T ಫೋನಿನ ಅಂದವನ್ನು ಹೆಚ್ಚಿಸಿದೆ.

ಭಾರತಿಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ 'ಒನ್‌ಪ್ಲಸ್'!

ಈಗಾಗಲೇ ಮೊಬೈಲ್ ಪ್ರಿಯರ ಮನಗೆದ್ದಿರುವ ಅದ್ಬುತ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 6T ಖರೀದಿಸಲು ಕಾಯುತ್ತಿದ್ದವರಿಗೆ ಇದು ಮತ್ತೊಂದು ಸಿಹಿಸುದ್ದಿಯಾಗಿದ್ದು, ಹೈ ಎಂಡ್ ಫೀಚರ್ಸ್ ಹೊತ್ತು ಬಂದಿರುವ ಒನ್‌ಪ್ಲಸ್ 6T 'ಥಂಡರ್ ಪರ್ಪಲ್' ವೆರಿಯಂಟ್ ಪೋನ್ ಅವರಿಗೆ ಬೆಸ್ಟ್ ಆಯ್ಕೆಯಾಗಬಹುದು. ಹಾಗಾದರೆ, ನೂತನವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಒನ್‌ಪ್ಲಸ್ 6T 'ಥಂಡರ್ ಪರ್ಪಲ್' ವೆರಿಯಂಟ್ ಪೋನ್ ಫೀಚರ್ಸ್ ಯಾವುವು ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.

ದೊಡ್ಡ ಮತ್ತು ಉತ್ಕೃಷ್ಟ ಡಿಸ್‌ಪ್ಲೇ

ದೊಡ್ಡ ಮತ್ತು ಉತ್ಕೃಷ್ಟ ಡಿಸ್‌ಪ್ಲೇ

ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ ತನ್ನ ಬೆಲೆ ವರ್ಗದ ಇತರ ಸ್ಮಾರ್ಟ್‌ಫೋನ್‌ಗಳಿಗಿಂತ ಹೆಚ್ಚು ಆಕರ್ಷಕವಾದ ಮಲ್ಟಿಮೀಡಿಯಾ ಅನುಭವವನ್ನು ನೀಡುತ್ತದೆ. 6.4 ಇಂಚಿನ ದೊಡ್ದ ಡಿಸ್‌ಪ್ಲೇ ಹೊಂದಿದ್ದು, ಬೆಜೆಲ್‌ ಲೆಸ್‌ AMOLED ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನೋಚ್‌ನೊಂದಿಗೆ ಅಳವಡಿಸಲಾಗಿದೆ. ಫ್ರಾಂಟ್ ಕ್ಯಾಮೆರಾವನ್ನು ಸಣ್ಣ ನೀರಿನ ಬಿಂದುವಿನಂತ ಜಾಗದಲ್ಲಿ ಅಳವಡಿಸಿದ್ದು, ಆಕರ್ಷಕವಾಗಿದೆ. ಎಡ್ಜ್‌-ಟು-ಎಡ್ಜ್‌ ಸ್ಕ್ರೀನ್ ವೀಕ್ಷಣೆ ಅನುಭವವನ್ನು ನೀಡುವ ಒನ್‌ಪ್ಲಸ್‌ 6T ಗೇಮಿಂಗ್ ಮತ್ತು ಮಲ್ಟಿಮೀಡಿಯಾ ಬಳಕೆಗೆ ಹೇಳಿ ಮಾಡಿಸಿದಂತಿದೆ. ಇನ್ನು ನೂತನ ಥಂಡರ್ ಪರ್ಪಲ್' ವೆರಿಯಂಟ್ ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್ ಮೊಬೈಲ್ ಪ್ರಿಯರ್ ಕಣ್ಮನ ಸೆಳೆಯುತ್ತಿದೆ.

ಆಂಡ್ರಾಯ್ಡ್ ಪೈ ಔಟ್‌ ಆಫ್‌ ಬಾಕ್ಸ್‌

ಆಂಡ್ರಾಯ್ಡ್ ಪೈ ಔಟ್‌ ಆಫ್‌ ಬಾಕ್ಸ್‌

ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್‌ 845 ಚಿಪ್‌ಸೆಟ್ ಹಾಗೂ 8GBRAM ಮಾದರಿಯಲ್ಲಿ ಥಂಡರ್ ಪರ್ಪಲ್' ವೆರಿಯಂಟ್ ಸ್ಮಾರ್ಟ್‌ಫೋನ್ ಈಗ ಬಿಡುಗಡೆಯಾಗಿದೆ. ಸ್ನಾಪ್‌ಡ್ರಾಗನ್‌ 845 ಚಿಪ್‌ಸೆಟ್‌ನಲ್ಲಿ 'Trust Zone' ಬಳಸಿದ್ದಾರೆ. ಇದು ಗೌಪ್ಯತೆಗಾಗಿರುವ ಪ್ರತ್ಯೇಕ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ. ಇನ್ನು ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ ಇತ್ತೀಚಿನ ಆಂಡ್ರಾಯ್ಡ್ ಪೈ ಒಎಸ್‌ನೊಂದಿಗೆ ಬಂದಿದೆ. ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ ಹೊರತುಪಡಿಸಿ ಆಂಡ್ರಾಯ್ಡ್ ಪೈ ಔಟ್‌ ಆಫ್‌ ಬಾಕ್ಸ್‌ ಒಎಸ್‌ನೊಂದಿಗೆ ಮಾರುಕಟ್ಟೆಗೆ ಬಂದಿರುವ ಮೊದಲ ಸ್ಮಾರ್ಟ್‌ಫೋನ್‌ ಆಗಿದೆ. Google I/O ದಲ್ಲಿ ಪರಿಚಯಿಸಲ್ಪಟ್ಟ ಗೂಗಲ್‌ನ ಗೆಸ್ಚರ್‌ ನ್ಯಾವಿಗೇಷನ್‌ ಫೀಚರ್‌ನ್ನುಆಂಡ್ರಾಯ್ಡ್‌ಪೈ ಬೆಂಬಲಿತ Oxyzen OS ಒನ್‌ಪ್ಲಸ್‌ನಲ್ಲಿ ಇದೆ.

ಅತ್ಯಾಧುನಿಕ ಸ್ಕ್ರೀನ್ ಅನ್‌ಲಾಕ್‌

ಅತ್ಯಾಧುನಿಕ ಸ್ಕ್ರೀನ್ ಅನ್‌ಲಾಕ್‌

ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ ಭವಿಷ್ಯದ ಸ್ಕ್ರೀನ್‌ ಅನ್‌ಲಾಕ್‌ ತಂತ್ರಜ್ಞಾನವನ್ನು ಹೊಂದಿದ್ದು, ಕಂಪೆನಿಯು ಬಹು ನಿರೀಕ್ಷಿತ ಹೊಸ ಫ್ಲಾಗ್‌ಶಿಪ್‌ ಸ್ಮಾರ್ಟ್‌ಫೋನ್‌ನಲ್ಲಿ ಭವಿಷ್ಯದ ಸ್ಕ್ರೀನ್ ಅನ್‌ಲಾಕ್ ತಂತ್ರಜ್ಞಾನದ ಸುಳಿವು ನೀಡುವ ಸಣ್ಣ ವಿಡಿಯೋದ ಮಾಹಿತಿ ನಿಖರವಾಗಿದೆ. .ಈ ತಂತ್ರಜ್ಞಾನ ಸ್ಮಾರ್ಟ್‌ಫೋನ್‌ನ್ನು ಹೆಚ್ಚು ಸುರಕ್ಷಿತಗೊಳಿಸಿದೆ. ಒನ್‌ಪ್ಲಸ್‌ ಹಾರ್ಡ್‌ವೇರ್‌ ಮತ್ತು ಸ್ವಯಂ-ಕಲಿಕೆಯ ಕ್ರಮಾವಳಿಗಳನ್ನು ಸಂಯೋಜಿಸಿ ನಿಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಪೂರ್ವಭಾವಿಯಾಗಿ ಲೋಡ್ ಮಾಡುವ ಸಾಮರ್ಥ್ಯ ಹೊಂದಿದೆ. ಇದರಿಂದ ನಿಮಗೆ ಝಿಪ್ಪಿ ಅನ್‌ಲಾಕ್‌ ಅನುಭವ ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ನಲ್ಲಿ ಸಿಗಲಿದೆ.

3700 mAh ಬ್ಯಾಟರಿ ಸಾಮರ್ಥ್ಯ

3700 mAh ಬ್ಯಾಟರಿ ಸಾಮರ್ಥ್ಯ

ಹೊಸ ಸ್ಮಾರ್ಟ್‌ಫೋನ್‌ನ ಬ್ಯಾಟರಿ 3700 mAh ಸಾಮರ್ಥ್ಯ ಹೊಂದಿದ್ದು, ಒನ್‌ಪ್ಲಸ್‌ 6 ಸ್ಮಾರ್ಟ್‌ಫೋನ್‌ನ 3300 mAh ಬ್ಯಾಟರಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ನಿಮ್ಮ ಸ್ಮಾರ್ಟ್‌ಫೋನ್‌ನ ಹೆಚ್ಚು ಸಮಯ ಬಳಸಲು ಇದು ಭರವಸೆ ನೀಡುತ್ತದೆ. ಇದಕ್ಕೆಲ್ಲಕ್ಕಿಂತ ಹೆಚ್ಚಾಗಿ ಜನಪ್ರಿಯ ಡ್ಯಾಶ್ ಚಾರ್ಜ್‌ರ್‌ನ ಮುಂದುವರೆದ ಆವೃತ್ತಿಯನ್ನು ಒನ್‌ಪ್ಲಸ್‌ 6Tಯಲ್ಲಿ ತರಲಾಗಿದೆ. ಹೊಸ OnePlus 6T ಸ್ಮಾರ್ಟ್‌ಫೋನ್‌ನ್ನು ಕಂಪನಿಯ ಸುಧಾರಿತ ಡ್ಯಾಶ್ ಚಾರ್ಜಿಂಗ್ ತಂತ್ರಜ್ಞಾನದ ಮೂಲಕ ಬೆಂಬಲಿಸಲಾಗುತ್ತದೆ. ನಿಮಗೆ ಅಗತ್ಯವಿದ್ದ ಸಮಯದಲ್ಲಿ ಆದಷ್ಟು ಬೇಗ ಸ್ಮಾರ್ಟ್‌ಫೋನ್‌ನ್ನು ಚಾರ್ಜ್‌ ಮಾಡಬಹುದಾಗಿದೆ.

ವೇಗದ ಡ್ಯಾಶ್‌ ಚಾರ್ಜಿಂಗ್

ವೇಗದ ಡ್ಯಾಶ್‌ ಚಾರ್ಜಿಂಗ್

ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ ಹಿಂದಿನ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳಿಗಿಂತ ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಕಂಪನಿಯ ಟ್ರಾಕ್‌ ರೆಕಾರ್ಡ್‌ನ್ನು ಗಮನಿಸಿದರೆ, ಒನ್‌ಪ್ಲಸ್‌ ಡಿವೈಸ್‌ಗಳು ಉತ್ತಮ ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, ಈ ಬಾರಿಯ ಒನ್‌ಪ್ಲಸ್‌ 6T ಸ್ಮಾರ್ಟ್‌ಫೋನ್‌ನಲ್ಲಿ ಹೆಚ್ಚು ಸಮಯ ಬಳಸಲು ಭರವಸೆ ನೀಡುತ್ತದೆ. ಇದಕ್ಕೆಲ್ಲಕ್ಕಿಂತ ಹೆಚ್ಚಾಗಿ ಜನಪ್ರಿಯ ಡ್ಯಾಶ್ ಚಾರ್ಜ್‌ರ್‌ನ ಮುಂದುವರೆದ ಆವೃತ್ತಿಯನ್ನು ಒನ್‌ಪ್ಲಸ್‌ 6Tಯಲ್ಲಿ ತರಲಾಗಿದೆ. ಹೊಸ OnePlus 6T ಸ್ಮಾರ್ಟ್‌ಫೋನ್‌ನ್ನು ಕಂಪನಿಯ ಸುಧಾರಿತ ಡ್ಯಾಶ್ ಚಾರ್ಜಿಂಗ್ ತಂತ್ರಜ್ಞಾನದ ಮೂಲಕ ಬೆಂಬಲಿಸಲಾಗುತ್ತದೆ.ಇದು ಹೊಸ ಬ್ಯಾಟರಿ ಫೀಚರ್ ಹೊಂದಿದ್ದು, ಈ ಆಪ್‌ ಮೊಬೈಲ್ ಬಳಕೆಯನ್ನು ವಿಶ್ಲೇಷಿಸಿ, ಬಳಕೆದಾರನ ಬಳಕೆಗೆ ತಕ್ಕಂತೆ ಬ್ಯಾಟರಿ ಸಾಮರ್ಥ್ಯವನ್ನು ವಿನಿಯೋಗಿಸುತ್ತದೆ.

ಥಂಡರ್ ಪರ್ಪಲ್ ಫೋನ್ ಬೆಲೆ?

ಥಂಡರ್ ಪರ್ಪಲ್ ಫೋನ್ ಬೆಲೆ?

ನೂತನವಾಗಿ ಭಾರತದ ಮೊಬೈಲ್ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಒನ್‌ಪ್ಲಸ್‌ 6T ಥಂಡರ್ ಪರ್ಪಲ್ ಬಣ್ಣದ ಮಾದರಿಯ ಸ್ಮಾರ್ಟ್‌ಫೋನ್ ಬೆಲೆ 41,999 ರೂಪಾಯಿಗಳಾಗಿವೆ. 8GB RAM ಮಾದರಿಯ ಸ್ಮಾರ್ಟ್‌ಫೋನ್ ಇದಾಗಿರುವುದರಿಂದ ಬೆಲೆ ಸ್ವಲ್ಪ ಹೆಚ್ಚಾಗಿದೆ. ಇನ್ನು ಅಮೆಜಾನ್.ಇನ್, ಒನ್‌ಪ್ಲಸ್ .ಇನ್ ಆನ್‌ಲೈನ್ ಜಾಲತಾಣಗಳು ಹಾಗೂ ರಿಲಯನ್ಸ್ ಡಿಜಿಟಲ್ ಮತ್ತು ಕ್ರೋಮಾ ಅಂಗಡಿಗಳು ಸೇರಿದಂತೆ ವಿಶೇಷ ಆಫ್ಲೈನ್ ಚಾನೆಲ್‌ಗಳಲ್ಲಿ ಸ್ಮಾರ್ಟ್‌ಪೋನ್ ಅನ್ನು ಖರೀದಿಸಬಹುದಾಗಿದೆ.

Most Read Articles
Best Mobiles in India

English summary
OnePlus 6T Thunder Purple is priced at Rs. 41,999 and will be on Amazon.in, oneplus.in, Reliance Digital and Croma stores and all OnePlus exclusive offline channels. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more