ಒನ್‌ಪ್ಲಸ್‌ ನಾರ್ಡ್‌ 2T ವಿಮರ್ಶೆ: ಕೊಟ್ಟ ಕಾಸಿಗೆ ಖಂಡಿತ ಮೋಸವಿಲ್ಲ!

|

ಮೊಬೈಲ್‌ ವಲಯದಲ್ಲಿ ಒನ್‌ಪ್ಲಸ್‌ ಸಂಸ್ಥೆಯು ತನ್ನದೇ ಶೈಲಿಯಿಂದ ಗುರುತಿಸಿಕೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಮತ್ತು ಇತರೆ ಸ್ಮಾರ್ಟ್‌ ಡಿವೈಸ್ ಬಿಡುಗಡೆ ಮಾಡಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಒನ್‌ಪ್ಲಸ್‌ ತನ್ನ ಸ್ಮಾರ್ಟ್‌ಫೋನ್‌ಗಳ ಪಟ್ಟಿಗೆ ನೂತನವಾಗಿ ಒನ್‌ಪ್ಲಸ್‌ ನಾರ್ಡ್‌ 2T ಸ್ಮಾರ್ಟ್‌ಫೋನ್‌ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ, ಅತ್ಯುತ್ತಮ ಫೀಚರ್ಸ್‌ಗಳಿಂದ ಆಕರ್ಷಕ ಎನಿಸಿದೆ.

ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ ನಾರ್ಡ್‌ 2T ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಸಂಪೂರ್ಣ ಭರ್ತಿ ಆಗಿದೆ. ಒನ್‌ಪ್ಲಸ್‌ ನಾರ್ಡ್‌ 2T ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ SoC ಪ್ರೊಸೆಸರ್‌ ಹೊಂದಿದ್ದು, 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ಕ್ಯಾಮೆರಾ ಪ್ರಿಯರನ್ನು ಸೆಳೆಯುವಂತಿದೆ.

ದೊರೆಯಲಿದೆ

ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ 2T 5G ಫೋನ್‌ 8 GB RAM + 128 GB ಮತ್ತು 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ದೊರೆಯಲಿದೆ. ಇದರೊಂದಿಗೆ ಕ್ಯಾಮೆರಾ ಫೀಚರ್ಸ್‌ಗಳಿಂದಲೂ ಒನ್‌ಪ್ಲಸ್‌ ನಾರ್ಡ್‌ 2T 5G ಫೋನ್‌ ಆಕರ್ಷಕ ಎನಿಸಿದ್ದು, ಇದ್ರಲ್ಲಿ 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ. ಹಾಗೆಯೇ 960fps ವರೆಗಿನ ಸೂಪರ್ ಸ್ಲೋ ಮೋಷನ್ ವೀಡಿಯೊ ಫೀಚರ್ಸ್‌ ಒಳಗೊಂಡಿದೆ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿದೆ?..ಈ ಫೋನಿನ ಬೆಲೆ ಎಷ್ಟು? ಹಾಗೂ ಈ ಫೋನಿನ ಇತರೆ ಸೌಲಭ್ಯಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಉತ್ತಮವಾಗಿದೆಯೇ?

ಡಿಸ್‌ಪ್ಲೇ ಉತ್ತಮವಾಗಿದೆಯೇ?

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಹೊಂದಿದ್ದು, HDR 10+ ಪ್ರಮಾಣೀಕರಣವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ತನ್ನ ವರ್ಗದಲ್ಲಿ ಅತ್ಯುತ್ತಮ ಡಿಸ್‌ಪ್ಲೇ ಆಗಿದ್ದು, ಗುಣಮಟ್ಟದ ಕಂಟೆಂಟ್‌ ಸ್ಟ್ರೀಮಿಂಗ್‌ ಸೂಪರ್‌ ಡಿಸ್‌ಪ್ಲೇ ಎನಿಸಿದೆ. ಈ ಫೋನಿನ ಡಿಸ್‌ಪ್ಲೇ ಗುಣಮಟ್ಟ ಅತ್ಯುತ್ತಮ ಆಗಿದ್ದು, ಕೈ ಯಲ್ಲಿ ಹಿಡಿಯಲು ಕಂಫರ್ಟ್‌ ರಚನೆ ಹೊಂದಿದೆ. ಆದ್ರೆ, ಅತ್ಯುತ್ತಮ ಗೇಮಿಂಗ್‌ ಅನುಭವಕ್ಕಾಗಿ ಡಿಸ್‌ಪ್ಲೇಯ ಗಾತ್ರ ಇನ್ನಷ್ಟು ಹೆಚ್ಚಿಸಬಹುದಿತ್ತು ಎನಿಸುತ್ತದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅನ್ನು ಆಕ್ಷಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 1300 ಸಾಮಾನ್ಯ ದಿನನಿತ್ಯದ ಬಳಕೆಗೆ ಉತ್ತಮ ಚಿಪ್ ಆಗಿದೆ. ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸುವುದು, ಚಾಟ್ ಮಾಡುವುದು, ವೀಡಿಯೊವನ್ನು ವೀಕ್ಷಿಸುವುದು, ಗೇಮ್‌ಗಳನ್ನು ಆಡುವುದಕ್ಕೆ ಇದು ಪೂರಕ ಪ್ರೊಸೆಸರ್‌ ಆಗಿದೆ. ಹಾಗೆಯೇ 8 GB RAM + 128 GB ಮತ್ತು 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವುದಕ್ಕೆ ಅವಕಾಶ ನೀಡಿಲ್ಲ.

ಕ್ಯಾಮೆರಾ ಸೆನ್ಸಾರ್ ಎಷ್ಟು? ಗುಣಮಟ್ಟ ಹೇಗಿದೆ?

ಕ್ಯಾಮೆರಾ ಸೆನ್ಸಾರ್ ಎಷ್ಟು? ಗುಣಮಟ್ಟ ಹೇಗಿದೆ?

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲವನ್ನು ಹೊಂದಿದ್ದು, ರಾತ್ರಿ ಮೋಡ್‌ನಲ್ಲಿಯೂ ಸಹ ಶೇಕ್-ಫ್ರೀ ಚಿತ್ರಗಳನ್ನು ಸೆರೆಹಿಡಿಯಲು ಸಹಾಯ ಮಾಡುತ್ತದೆ. ಅಧಿಕ ಬೆಳಕಿನ ಸಂದರ್ಭಗಳಲ್ಲೂ ಗುಣಮಟ್ಟದಲ್ಲಿ ಫೋಟೊಗಳು ಸೆರೆಹಿಡಿಯಬಹುದಾಗಿದೆ. ಡಿಜಿಟಲ್‌ ಜೂಮ್ ಮಾಡಿದರೂ, ಗುಣಮಟ್ಟ ಉತ್ತಮವಾಗಿ ಉಳಿಯುತ್ತವೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದ್ದು, 120 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ ನೀಡಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಎಷ್ಟಿದೆ? ಇತರೆ ಸೌಲಭ್ಯಗಳೆನು?

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಎಷ್ಟಿದೆ? ಇತರೆ ಸೌಲಭ್ಯಗಳೆನು?

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಸ್ಮಾರ್ಟ್‌ಫೋನ್ 30 ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ ಮತ್ತು ನಿಯಮಿತ (ಗೇಮಿಂಗ್ ಅಲ್ಲದ) ಬಳಕೆಯಲ್ಲಿ ಸಾಧನವು ಸಮಯಕ್ಕೆ 6 ಗಂಟೆಗಳ ಪರದೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು SAR ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ?

ಬೆಲೆ ಮತ್ತು ಲಭ್ಯತೆ?

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8 GB RAM + 128 GB ಸ್ಟೋರೇಜ್ ಆಯ್ಕೆಗೆ 28,999 ರೂ.ಬೆಲೆ ಹೊಂದಿದೆ. ಹಾಗೆಯೇ 12GB + 256GB ಮಾದರಿಯ ಆಯ್ಕೆಗೆ 33,999 ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಮೆಜಾನ್‌, ಒನ್‌ಪ್ಲಸ್‌.ಇನ್‌, ಒನ್‌ಪ್ಲಸ್‌ ಸ್ಟೋರ್‌ ಅಪ್ಲಿಕೇಶನ್‌, ಒನ್‌ಪ್ಲಸ್‌ ಎಕ್ಸ್‌ಪೀರಿಯೆನ್ಸ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯ. ಇದು ಗ್ರೇ ಶ್ಯಾಡೋ ಮತ್ತು ಜೇಡ್ ಫಾಗ್ ಬಣ್ಣದ ಆಯ್ಕೆ ಪಡೆದಿದೆ.

ಕೊನೆಯ ಮಾತು

ಕೊನೆಯ ಮಾತು

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಅತ್ಯುತ್ತಮ ಡಿಸ್‌ಪ್ಲೇ, ಹೈ ಎಂಡ್ ಕ್ಯಾಮೆರಾ, ಬಿಗ್ ಬ್ಯಾಟರಿ ಇಂತಹ ಫೀಚರ್ಸ್‌ಗಳಿಂದ ಗಮನ ಸೆಳೆದಿದ್ದರೂ, ಇದು 25,000ರೂ. ಒಳಗೆ ಫೋನ್ ಖರೀದಿಸುವ ಗ್ರಾಹಕರನ್ನು ಸೆಳೆಯುವಲ್ಲಿ ಹಿನ್ನಡೆ ಎದುರಿಸಬಹುದು. ಹಾಗೆಯೇ ಈ ಫೋನ್ ಡಿಸ್‌ಪ್ಲೇ ಗಾತ್ರ ಇನ್ನಷ್ಟು ಹೆಚ್ಚಿಸಿದ್ದರೇ, ಗೇಮಿಂಗ್‌ಗೆ ಪೂರಕ ಎನಿಸುತ್ತಿತ್ತು. ಇವುಗಳನ್ನು ಹೊರತುಪಡಿಸಿದರೆ, ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಖಂಡಿತವಾಗಿಯೂ ಕೊಟ್ಟ ಕಾಸಿಗೆ ಮೋಸವಿಲ್ಲದ ಸ್ಮಾರ್ಟ್‌ಫೋನ್‌ ಎನ್ನಬಹುದು.

Best Mobiles in India

English summary
OnePlus Nord 2T Review: Powerful Performance Phone at Mid Range Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X