ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಫಸ್ಟ್ ಲುಕ್: ಮೀಡ್‌ರೇಂಜ್ ಬೆಲೆಗೆ ಆಕರ್ಷಕ ಫೋನ್!
ಒನ್‌ಪ್ಲಸ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಪರಿಚಯಿಸಿರುವ 'ಒಪ್ಪೋ ರೆನೊ 7' ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G' ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದಿನ ಅಗತ್ಯ ಫೀಚರ್ಸ್‌ಗಳನ್ನು ಹೊಂದಿದ್ದು, ಆಕರ್ಷಕ ಲುಕ್ ಸಹ ಪಡೆದಿದೆ. ಮುಖ್ಯವಾಗಿ 64 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ, 8GB RAM ಮತ್ತು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಮೀಡ್‌ರೇಂಜ್ ಸ್ಮಾರ್ಟ್‌ಫೋನ್ ಆಗಿ ಕಾಣಿಸಿಕೊಂಡಿದೆ.

ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೀಡ್‌ರೇಂಜ್ ಮಾದರಿಯಲ್ಲಿ ಗುರುತಿಸಿಕೊಂಡಿದ್ದು, ಹಲವು ಹೈ ಎಂಡ್ ಫೀಚರ್ಸ್‌ಗಳನ್ನು ಪಡೆದಿದೆ.6GB RAM + 128GB ಮತ್ತು 8GB RAM + 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಹೊಂದಿದ್ದು, ಚುರುಕಾದ ಕಾರ್ಯವೈಖರಿ ಕಾಣಬಹುದಾಗಿದೆ. ಜೊತೆಗೆ 5,000mAh ಬ್ಯಾಟರಿ ಸಪೋರ್ಟ್‌ಗೆ 33W ಸೂಪರ್VOOC ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಡಿವೈಸ್ ಸಹ ಗ್ರಾಹಕರ ಕಣ್ಮನ ಸೆಳೆಯುವಂತಿದೆ. ಹಾಗಾದರೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿವೆ ಎನ್ನುವ ಕುರಿತು ಫಸ್ಟ್ ಲುಕ್ ಮಾಹಿತಿ ಇಲ್ಲಿದೆ. ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ. ಮೀಡ್‌ರೇಂಜ್ ದರದಲ್ಲಿ ಅತ್ಯುತ್ತಮ ಡಿಸ್‌ಪ್ಲೇ ಇದಾಗಿದ್ದು, ವಿಡಿಯೋ ವೀಕ್ಷಣೆ ಮಾಡುವವರಿಗೆ, ಗೇಮಿಂಗ್ ಪ್ರಿಯರಿಗೆ ಡಿಸ್‌ಪ್ಲೇ ಆಪರೇಟಿಂಗ್ ಆಕರ್ಷಕ ಎನಿಸಲಿದೆ.

ಪ್ರೊಸೆಸರ್ ಪವರ ಯಾವುದು?
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಕ್ಸಿಜೆನ್ 2.1 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಇದರ ಕಾರ್ಯ ವೈಖರಿಯು ತನ್ನ ವರ್ಗದ ಫೋನ್‌ಗಳಂತೆ ಇದ್ದು, ಬಳಕೆದಾರರಿಗೆ ನಿರಾಶಾದಾಯಕ ಎನಿಸುವುದಿಲ್ಲ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಅಧಿಕ ಡೇಟಾದ ಗೇಮ್ ಆಟಗಳಿಗೂ ಪೂರಕ ಆಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಮುಖ್ಯ ಕ್ಯಾಮೆರಾ ಅತ್ಯುತ್ತಮ ಆಗಿದ್ದರೂ, ಉಳಿದೆರಡು ಕ್ಯಾಮೆರಾಗಳಲ್ಲಿ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಸೆನ್ಸಾರ್ ಇರಬೇಕಿತ್ತು. ಇನ್ನು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಸೆಲ್ಫಿ ಕ್ಯಾಮೆರಾವನ್ನು ಹೆಚ್ಚಿಸಬಹುದಿತ್ತು.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ.ಬೆಲೆ ಹೊಂದಿದೆ. ಆದರೆ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 21,999 ರೂ.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications








