ಒನ್‌ಪ್ಲಸ್ ಪ್ರಿಯರಿಗೆ ಸಿಹಿಸುದ್ದಿ!..ಈ 108ಎಂಪಿ ಕ್ಯಾಮೆರಾ ಫೋನ್ ಬೆಲೆ ಇಳಿಕೆ!
ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊಬೈಲ್ ಫೋನ್‌ಗಳಿಗೆ ಏನಾದರೊಂದು ಡಿಸ್ಕೌಂಟ್ ಲಭ್ಯ ಇರುತ್ತದೆ. ಅಮೆಜಾನ್ ತಾಣವು ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನದಲ್ಲಿ ಇರುವ ಒನ್‌ಪ್ಲಸ್ ಸಂಸ್ಥೆಯ ಕೆಲವು ಫೋನ್‌ಗಳಿಗೂ ರಿಯಾಯಿತಿ ಲಭ್ಯ ಮಾಡಿದ್ದು, ಅವುಗಳ ಪೈಕಿ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಮೊಬೈಲ್ ಸಹ ಸಖತ್ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಮೊಬೈಲ್ ಶೇ. 10% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. 8 GB RAM + 128 GB ವೇರಿಯಂಟ್ ಫೋನ್ ಅನ್ನು ಖರೀದಿದಾರರು 17,999 ರೂ. ಗಳ ಬೆಲೆಗೆ ಖರೀದಿಗೆ ಮಾಡಬಹುದು. ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್, ಎಕ್ಸ್‌ಚೇಂಜ್ ಕೊಡುಗೆ ಕೂಡಾ ಸಿಗುತ್ತವೆ.

ಅಂದಹಾಗೆ ಈ ಮೊಬೈಲ್ ಇದು ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಪವರ್ ಪಡೆದಿದ್ದು, 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G - ಫೀಚರ್ಸ್
ಒನ್‌ಪ್ಲಸ್ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 91.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 391ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಪಡೆದಿದೆ.
ನಾರ್ಡ್ CE 3 ಲೈಟ್ 5G ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಪಡೆದಿದ್ದು, ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್ OS 13.1 ಸಪೋರ್ಟ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಪಡೆದುಕೊಂಡೊದೆ. ಇದರೊಂದಿಗೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಲಭ್ಯ.
ಒನ್‌ಪ್ಲಸ್ ಕಂಪನಿಯ ಈ ಫೋನ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI ವಿಶ್ಯುಯಲ್ ಎಫೆಕ್ಟ್, ಸ್ಲೋ ಮೋಷನ್ ವಿಡಿಯೋ, ಡ್ಯುಯಲ್ ವ್ಯೂ ವಿಡಿಯೋ, ಆಯ್ಕೆಗಳನ್ನು ಹೊಂದಿದೆ.
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 67W ಸೂಪರ್ ವೂಕ್ ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, 3.5mm ಆಡಿಯೋ ಜಾಕ್, ಬ್ಲೂಟೂತ್ 5.1, GPS/ A-GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ನೀಲಿಬಣ್ಣದ ಲೈಮ್ ಮತ್ತು ಕ್ರೋಮ್ಯಾಟಿಕ್ ಗ್ರೇ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಸಿಗುತ್ತೆ.


Click it and Unblock the Notifications








