ಒನ್‌ಪ್ಲಸ್‌ ಹೇಗೆ ಸ್ಮಾರ್ಟ್‌ಫೋನ್ ಮಾರ್ಕೆಟ್ ಮಾಡುತ್ತೇ ಗೊತ್ತಾ..? ಕೇಳಿದ್ರೆ ಶಾಕ್ ಆಗ್ತೀರಾ..!

|

ಭಾರತೀಯ ಪ್ರೀಮಿಯಮ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಒನ್‌ಪ್ಲಸ್‌ ಕಂಪನಿಯೂ ತನ್ನ ಸ್ಮಾರ್ಟ್‌ಫೋನ್‌ಗಳ ಬೆಲೆ ಮತ್ತು ಗುಣಮಟ್ಟದಿಂದಾಗಿಯೇ ಸುದ್ದಿ ಮಾಡುವಂತೆ ಮಾಡುತ್ತಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಸಾಕಷ್ಟು ದೊಡ್ಡ ಮಾದರಿಯಲ್ಲಿ ಯಶಸ್ಸು ಕಂಡಿದೆ. ಈ ಹಿನ್ನಲೆಯಲ್ಲಿ ಮಾರುಕಟ್ಟೆಗೆ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಿದ್ಧತೆ ನಡೆದಿದೆ. ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಮುಂದಿನ ಆವೃತ್ತಿಯಾಗಿ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಕಾಣಿಸಿಕೊಳ್ಳಲಿದ್ದು, ಅದನ್ನು ಮುಂದಿನ ತಿಂಗಳಿನಲ್ಲಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಇದು ಟಾಪ್ ಮಾದರಿಯ ವಿಶೇಷತೆಗಳೊಂದಿಗೆ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದ್ದು, ಇದಕ್ಕೆ ಈಗಾಗಲೇ ಮಾರ್ಕೆಟಿಂಗ್ ಶುರು ಮಾಡಿದೆ.

ಒನ್‌ಪ್ಲಸ್ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಹೆಚ್ಚಿನ ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿದೆ. ಈ ಹಿನ್ನಲೆಯಲ್ಲಿ ಬೇಡಿಯೂ ಹೆಚ್ಚಾಗುತ್ತಿದೆ. ಇದಲ್ಲದೇ ಒನ್‌ಪ್ಲಸ್‌ ಸಹ ತನ್ನ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಉತ್ತಮವಾಗಿ ಮಾರ್ಕೆಟ್ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಬೇಡಿಕೆಯು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಆನ್‌ಲೈನ್ ಮಾರುಕಟ್ಟೆಯಲ್ಲಿ ಮತ್ತು ಆಫ್‌ಲೈನ್ ಮಾರುಕಟ್ಟೆಯಲ್ಲಿ ಈ ಫೋನಿನ ಬೇಡಿಕೆಯೂ ಇನ್ನು ಕುಸಿಯದೆ ಇರಲು ಒನ್‌ಪ್ಲಸ್ ಮಾರ್ಕೆಟಿಂಗ್ ಸಹ ಒಂದು ಕಾರಣ ಎಂದರೆ ತಪ್ಪಾಗುವುದಿಲ್ಲ.

ಈ ಹಿನ್ನಲೆಯಲ್ಲಿ ಶೀಘ್ರವೇ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿರುವ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ವಿಶೇಷವಾದ ಆಯ್ಕೆಗಳೊಂದಿಗೆ ಮಾರಾಟವಾಗಲಿದ್ದು, ಉತ್ತಮ ಗುಣಮಟ್ಟದಲ್ಲಿ ಕಾಣಿಸಿಕೊಳ್ಳಲಿದ್ದು, ಇದಕ್ಕಾಗಿ ಈಗಾಗಲೇ ಒನ್‌ಪ್ಲಸ್6T ಸ್ಮಾರ್ಟ್‌ಫೋನ್ ಕುರಿತಂತೆ ಮಾರ್ಕೆಟಿಂಗ್ ಅನ್ನು ಶುರು ಮಾಡಿದೆ ಎನ್ನಲಾಗಿದೆ.

ಬೇಡಿಕೆ:

ಬೇಡಿಕೆ:

ಒನ್‌ಪ್ಲಸ್ ಉತ್ತಮ ಮಾರುಕಟ್ಟೆ ತಂತ್ರವನ್ನು ಹೊಂದಿದ್ದು, ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಬಿಡುಗಡೆಗೂ ಮುನ್ನವೇ ಮಾರುಕಟ್ಟೆಯಲ್ಲಿ ಸದ್ದು ಶುರು ಆಗುವಂತೆ ಮಾಡಿದ್ದು, ಒನ್‌ಪ್ಲಸ್ ಅಭಿಮಾನಿಗಳಲ್ಲಿ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಕುರಿತ ಕಾತುರತೆಯನ್ನು ಹೆಚ್ಚು ಮಾಡಲು ಮುಂದಾಗಿದೆ, ಈ ಹಿಂದಿನಿಂದಲೂ ಇದೇ ಮಾದರಿಯನ್ನು ಅನುಸರಿಸಿಕೊಂಡು ಬರುತ್ತಿರುವ ಒನ್‌ಪ್ಲಸ್, ಈ ಬಾರಿಯೂ ಹೊಸ ಮಾದರಿಯ ಬುಜ್ ಕ್ರಿಯೇಟ್ ಮಾಡಲು ಮುಂದಾಗಿದೆ.

ಅಮಿತಾಬ್ ಬಚ್ಚನ್:

ಅಮಿತಾಬ್ ಬಚ್ಚನ್:

ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಜಾಹೀರಾತು ನೀಡಲು ಮುಂದಾಗಿರುವ ಒನ್‌ಪ್ಲಸ್, ತನ್ನ ಮುಂದಿನ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಲಾಂಚ್‌ಗಾಗಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಮೂಡಿಸುವ ಯೋಜನೆಯನ್ನು ಹೊಂದಿದೆ ಎನ್ನಲಾಗಿದೆ.

ಬ್ರಾಂಡ್ ಅಂಬಾಸಿಡರ್:

ಬ್ರಾಂಡ್ ಅಂಬಾಸಿಡರ್:

ಈ ಬಾರಿ ಮಾರುಕಟ್ಟೆಯಲ್ಲಿ ಸ್ಪರ್ಧೆಯೂ ಹೆಚ್ಚಾಗಿರುವ ಕಾರಣದಿಂದಾಗಿ ಒನ್‌ಪ್ಲಸ್ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಅಮಿತಾಬ್ ಬಚ್ಚನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದು, ಈ ಮೂಲಕ ತನ್ನ ಬ್ರಾಂಡ್ ಪ್ರಚಾರಕ್ಕೆ ಮುಂದಾಗಿದೆ. ಇದರಿಂದಾಗಿ ಒನ್‌ಪ್ಲಸ್‌ಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭವಾಗಲಿದೆ ಎನ್ನಲಾಗಿದೆ.

ಏಷ್ಯಾ ಕಪ್:

ಏಷ್ಯಾ ಕಪ್:

ದೇಶದಲ್ಲಿ ಕ್ರಿಕೆಟ್ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಹಿನ್ನಲೆಯಲ್ಲಿ, ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಅನ್ನು ಹಾಟ್‌ಸ್ಟಾರ್‌ನಲ್ಲಿ ಪ್ರಮೋಟ್ ಮಾಡುವ ಯೋಜನೆಗೆ ಮುಂದಾಗಿದೆ. ಸ್ಕೋರ್ ಪ್ರೆಡಿಕ್ಟ್ ಮಾಡುವ ಸಂದರ್ಭದಲ್ಲಿ ಮುಂದಿನ ಬಾಲ್‌ನಲ್ಲಿ ಎಷ್ಟು ರನ್ ಸ್ಕೋರ್ ಆಗಲಿದೆ ಎನ್ನುವುದನ್ನು ತಿಳಿಸುವ ಜಾಗದಲ್ಲಿ ಸಿಕ್ಸ್ ತೋರಿಸುವ ಜಾಗದಲ್ಲಿ 6T ತೋರಿಸುವಂತೆ ಮಾಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಸೃಷ್ಟಿಸಿಕೊಳ್ಳಲು ಬೇಕಾದ ವಾತಾವರಣವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ಇದು ಭಾಗಿಯಾಗುತ್ತಿದೆ.

ಅಮೆಜಾನ್ ಎಕ್ಸ್‌ಕ್ಲೂಸಿವ್:

ಅಮೆಜಾನ್ ಎಕ್ಸ್‌ಕ್ಲೂಸಿವ್:

ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳಿನಲ್ಲಿ ಕಾಣಿಸಿಕೊಳ್ಳಿದ್ದು, ಆದರೆ ಈಗಾಗಲೇ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಎಲ್ಲಿ ಮಾರಾಟವಾಗಲಿದೆ ಎನ್ನುವ ಮಾಹಿತಿಯೂ ಲೀಕ್ ಆಗಿದೆ. ಈ ಹಿಂದಿನ ಪೋನ್ ಅಮೆಜಾನ್‌ನಲ್ಲಿ ಮಾರಾಟವಾದ ಮಾದರಿಯಲ್ಲಿಯೇ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಸಹ ಅಮೆಜಾನ್‌ನಲ್ಲಿ ಎಕ್ಸ್‌ಕ್ಲೂಸಿವ್ ಆಗಿ ಲಾಂಚ್ ಆಗಲಿದೆ ಎನ್ನಲಾಗಿದೆ.

ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಪವರ್ ಫುಲ್:

ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಪವರ್ ಫುಲ್:

ಮಾರುಕಟ್ಟೆಯಲ್ಲಿ ಬೆಸ್ಟ್ ಎನ್ನಿಸಿಕೊಂಡಿರುವ ಸಾಫ್ಟ್‌ವೇರ್‌ಗಳನ್ನು ಒನ್‌ಪ್ಲಸ್ 6T ಸ್ಮಾರ್ಟ್‌ಫೋನಿನಲ್ಲಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಳಕೆದಾರರಿಗೆ ಉತ್ತಮ ಬೆಲೆಗೆ ಅತ್ಯುತ್ತಮವಾದ ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡುತ್ತಿರುವ ಒನ್‌ಪ್ಲಸ್, ಈ ಬಾರಿಯೂ ಇದೇ ಮಾದರಿಯಲ್ಲಿ ಬೆಲೆಯ ವಿಚಾರದಲ್ಲಿಯೂ ಗ್ರಾಹಕರಿಗೆ ಲಾಭವನ್ನು ಮಾಡಿಕೊಡಲಿದೆ ಎನ್ನಲಾಗಿದೆ.

ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್:

ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್:

ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್‌ ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸ್ಕ್ರಾನರ್ ಹೊಂದಿದ ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಲಿದೆ. ಇದು ಬಳಕೆದಾರರಿಗೆ ಹೊಸ ಮಾದರಿಯ ಸೇವೆಯನ್ನು ನೀಡಲಿದೆ ಎನ್ನಲಾಗಿದೆ. ಇದಲ್ಲದೇ ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ FHD+ ಗುಣಮಟ್ಟದ ಡಿಸ್‌ಪ್ಲೇಯನ್ನು ಹೊಂದಿದೆ ಎನ್ನಲಾಗಿದೆ.

ವಾಟರ್‌ ಡ್ರಾಪ್ ನೋಚ್:

ವಾಟರ್‌ ಡ್ರಾಪ್ ನೋಚ್:

ಒನ್‌ಪ್ಲಸ್ 6T ಸ್ಮಾರ್ಟ್‌ಫೋನಿನಲ್ಲಿ ವಾಟರ್ ಡ್ರಾಪ್ ನೋಚ್ ಅನ್ನು ಕಾಣಬಹುದಾಗಿದೆ. ಇದು ಮಾರುಕಟ್ಟೆಯಲ್ಲಿ ಬೆಸ್ಟ್ ಎನ್ನಿಸಿಕೊಂಡಿದ್ದು, ಬಳಕೆದಾರರಿಗೆ ಫುಲ್ ಸ್ಕ್ರಿನ್ ವಿವ್ ಆಯ್ಕೆಯೊಂದಿಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಗುಣಮಟ್ಟದ ವಿಡಿಯೋ ನೋಡುವ ಮತ್ತು ಗೇಮ್ ಆಡುವ ಅನುಭವವು ಉತ್ತಮವಾಗಿ ಇರಲಿದೆ.

ಡ್ಯಾಷ್ ಚಾರ್ಜರ್‌ಗಿಂತಲೂ ಬೆಸ್ಟ್:

ಡ್ಯಾಷ್ ಚಾರ್ಜರ್‌ಗಿಂತಲೂ ಬೆಸ್ಟ್:

ಸದ್ಯ ಮಾರುಕಟ್ಟೆಯಲ್ಲಿ ಒನ್‌ಪ್ಲಸ್ ಪರಿಚಯ ಮಾಡಿರುವ ಡ್ಯಾಷ್ ಚಾರ್ಜರ್ ಬೆಸ್ಟ್ ಎನ್ನಿಸಿಕೊಂಡಿದೆ. ಆದರೆ ಇದಕ್ಕಿತಲೂ ಉತ್ತಮವಾದ ಬೆಸ್ಟ್‌ ಚಾರ್ಜರ್ ಅನ್ನು ಒನ್‌ಪ್ಲಸ್ 6T ಸ್ಮಾರ್ಟ್‌ಫೋನಿನೊಂದಿಗೆ ಬಳಕೆದಾರರಿಗೆ ನೀಡಲಿದೆ ಎನ್ನಲಾಗಿದೆ. ಇದಕ್ಕೆ ಯಾವ ಹೆಸರು ಇಟ್ಟಿದೆ ಎಂಬುದು ತಿಳಿದಿಲ್ಲ.

ಹೊಸ ಮಾದರಿ ಇಯರ್ ಫೋನ್:

ಹೊಸ ಮಾದರಿ ಇಯರ್ ಫೋನ್:

ಒನ್‌ಪ್ಲಸ್ 6T ಸ್ಮಾರ್ಟ್‌ಫೋನ್ ಹೊಸ ಮಾದರಿಯ ಇಯರ್ ಫೋನ್ ಅನ್ನು ಪಡೆದುಕೊಳ್ಳಲಿದೆ. ಈ ಫೋನಿನಲ್ಲಿ C ಟೈಪ್ USB ಪ್ರೋರ್ಟ್ ನೀಡಲಾಗಿದ್ದು, ಇದಕ್ಕೆ ಇಯರ್ ಫೋನ್ ಹಾಕಿಕೊಳ್ಳಬೇಕಾಗಿದೆ. ಇದಕ್ಕಾಗಿಯೇ ಹೊಸ ಮಾದರಿಯ ಬುಲೆಟ್ ಇಯರ್ ಫೋನ್ ಅನ್ನು ನೀಡಲಿದೆ ಎನ್ನಲಾಗಿದೆ. ಇದು ಬಳಕೆದಾರರಿಗೆ ಹೊಸ ಮಾದರಿಯ ಅನುಭವವನ್ನು ನೀಡಲಿದೆ.

Best Mobiles in India

English summary
OnePlus proves it's the master of marketing with 6T's latest advertising campaign, to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X