OPPO: ಹೊಸ 5G ಫೋನ್ ಬಿಡುಗಡೆ; 512GB ಸ್ಟೋರೇಜ್.. 50MP ಕ್ಯಾಮೆರಾ.. ಬೆಲೆಯೂ ಕಡಿಮೆ!
ಒಪ್ಪೋ ಸೈಲೆಂಟ್ ಆಗಿಯೇ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಂಪನಿಯು ತನ್ನ 'A' ಸರಣಿಯನ್ನು ತವರು ಮಾರುಕಟ್ಟೆಯಲ್ಲಿ ವಿಸ್ತರಿಸಿದೆ. ಹೌದು, ಒಪ್ಪೋ A3i ಪ್ಲಸ್ 5G (OPPO A3i Plus 5G) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದು ಮಧ್ಯಮ ಬಜೆಟ್ 5G ಫೋನ್ ಆಗಿದೆ. ಬನ್ನಿ, ಹೊಸ ಒಪ್ಪೋ 5G ಮೊಬೈಲ್‌ನ ಬೆಲೆ, ಲಭ್ಯತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಒಪ್ಪೋ A3i ಪ್ಲಸ್ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಲಾಂಚ್ ಆಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 512GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ. ಈ ಫೋನಿನ ಮತ್ತಿತರ ಫೀಚರ್ಸ್ ಈ ಕೆಳಗಿನಂತಿವೆ.

ಡಿಸ್ಪ್ಲೇ ವಿವರ
ಒಪ್ಪೋ A3i ಪ್ಲಸ್ 5G ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2412 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರದ ಬೆಂಬಲ, 1200 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಒಪ್ಪೋ 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ A3i ಪ್ಲಸ್ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ColorOS 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಸ್ಮಾರ್ಟ್‌ಫೋನ್ ಅಡ್ರಿನೊ 619 ಜಿಪಿಯು ಸಹ ಹೊಂದಿದೆ.
RAM ಮತ್ತು ಸ್ಟೋರೇಜ್
ಒಪ್ಪೋ A3i ಪ್ಲಸ್ 5G ಸ್ಮಾರ್ಟ್‌ಫೋನ್ 12GB RAM ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ 256GB ಮತ್ತು 512GB ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟವಾಗಲಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ಒಪ್ಪೋ A3i ಪ್ಲಸ್ 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ A3i ಪ್ಲಸ್ 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಒಪ್ಪೋ A3i ಪ್ಲಸ್ 5G ಬೆಲೆ
ಒಪ್ಪೋ A3i ಪ್ಲಸ್ 5G ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವು 15,550 ರೂ.ಗೆ ಬಿಡುಗಡೆಯಾಗಿದೆ. ಹಾಗೆಯೇ 12GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 17,950 ರೂ. ಆಗಿದೆ. ಈ ಒಪ್ಪೋ 5G ಮೊಬೈಲ್ ಕಪ್ಪು, ಹಸಿರು ಮತ್ತು ನೇರಳೆ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಪ್ರಸ್ತುತ, ಇದು ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಮಾರಾಟವಾಗಲಿದೆ. ಕಂಪನಿಯು ಭಾರತದಲ್ಲಿ ಈ ಫೋನನ್ನು ಬಿಡುಗಡೆ ಮಾಡುವ ಬಗ್ಗೆ ಈವರೆಗೇ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.


Click it and Unblock the Notifications








