Home
ಮೊಬೈಲ್

ಹೋಳಿ ಗಿಫ್ಟ್! ಹೊಸ OPPO ಫೋನ್ ಲಾಂಚ್; 5800mAh ಬ್ಯಾಟರಿ.. 50MP ಕ್ಯಾಮೆರಾ.. ಬೆಲೆ ಎಷ್ಟು ಗೊತ್ತಾ?

ಒಪ್ಪೋ ಹೋಳಿ ಸಂಭ್ರಮವನ್ನು ಮತ್ತಷ್ಟು ಹಿಮ್ಮಡಿಗೊಳಿಸಿದೆ. ಸೈಲೆಂಟ್ ಆಗಿಯೇ ಇಂದು ಹೊಸ ಫೋನನ್ನು ಬಿಡುಗಡೆ ಮಾಡಿದೆ. ಹೌದು, ಕಂಪನಿಯು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಒಪ್ಪೋ A5 ಪ್ರೊ 5G (Oppo A5 Pro 5G) ಫೋನನ್ನು ಪರಿಚಯಿಸಿತ್ತು. ಕಳೆದ ತಿಂಗಳು ಕೆಲವು ಬದಲಾವಣೆಗಳೊಂದಿಗೆ ಇದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. ಇದೀಗ, ನೂತನ ಒಪ್ಪೋ A5 ಪ್ರೊ 4G (Oppo A5 Pro 4G) ಅನ್ನು ಅನಾವರಣಗೊಳಿಸಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಒಪ್ಪೋ A5 ಪ್ರೊ 4G ಮೊಬೈಲ್ ಕೈಗೆಟುಕುವ ಬೆಲೆಯಲ್ಲಿ ಬರುತ್ತದೆ. ಕಡಿಮೆ ದರವೆಂಬ ಕಾರಣಕ್ಕೆ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಒಪ್ಪೋ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಒಪ್ಪೋ A5 ಪ್ರೊ 4G ಬಜೆಟ್ ಸ್ಮಾರ್ಟ್‌ಫೋನ್ IP69 ರೇಟಿಂಗ್‌ನೊಂದಿಗೆ ಬರುತ್ತದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆ ನೀಡುತ್ತದೆ. ಈ ಮೊಬೈಲ್ 1.5 ಮೀಟರ್ ಆಳದ ನೀರಿನಲ್ಲಿ 30 ನಿಮಿಷಗಳ ಕಾಲ ಇದ್ದರೂ ಏನು ಆಗುವುದಿಲ್ಲ. ಹಾಗೆಯೇ ಈ ಫೋನ್ 14 ಮಿಲಿಟರಿ ದರ್ಜೆಯ ಪರೀಕ್ಷೆಗಳಲ್ಲಿ ಸಕ್ಸಸ್ ಕೂಡ ಆಗಿದೆ.

Oppo A5 Pro 4G ಲಾಂಚ್; 5800mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ನೋಡಿ

ಒಪ್ಪೋ A5 ಪ್ರೊ 4G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ A5 ಪ್ರೊ 4G ಸ್ಮಾರ್ಟ್‌ಫೋನ್ 6.67 ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಸೂರ್ಯನ ಬೆಳಕಿನಲ್ಲಿಯೂ ಸ್ಪಷ್ಟವಾಗಿ ಕಾಣುತ್ತದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರವನ್ನು ಹೊಂದಿದೆ. ನೀವು ಸುಲಭವಾಗಿ ಸ್ಕ್ರೋಲಿಂಗ್ ಮತ್ತು ಗೇಮಿಂಗ್‌ ಮಾಡಬಹುದು.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ A5 ಪ್ರೊ 4G ಮೊಬೈಲ್ ಸ್ನಾಪ್‌ಡ್ರಾಗನ್ 6s ಜೆನ್ 1 ಪ್ರೊಸೆಸರ್ ಹೊಂದಿದೆ. ಇದನ್ನು 11 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್ ಓಎಸ್ 15 ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 8GB RAM ಮತ್ತು 256GB ಆಂತರಿಕ ಸ್ಟೋರೇಜ್ ಆಯ್ಕೆ ಹೊಂದಿದೆ. ನೀವು ಅಪ್ಲಿಕೇಶನ್‌ಗಳು ಮತ್ತು ಗೇಮ್‌ಗಳನ್ನು ಸ್ಟೋರೇಜ್ ಮಾಡಲು ಹೆಚ್ಚು ಸ್ಥಳ ಒದಗಿಸುತ್ತದೆ.

Oppo A5 Pro 4G ಲಾಂಚ್; 5800mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ನೋಡಿ

ಕ್ಯಾಮೆರಾ ಸೆಟಪ್

ಒಪ್ಪೋ A5 ಪ್ರೊ 4G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ A5 ಪ್ರೊ 4G ಸ್ಮಾರ್ಟ್‌ಫೋನ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಈ ಒಪ್ಪೋ ಮೊಬೈಲ್ ಡ್ಯುಯಲ್ ಸಿಮ್, ವೈ-ಫೈ 5, ಬ್ಲೂಟೂತ್ 5.0, ಡ್ಯುಯಲ್ ಸ್ಪೀಕರ್‌ಗಳು, ಯುಎಸ್‌ಬಿ ಸಿ ಪೋರ್ಟ್ ಮತ್ತು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಒಳಗೊಂಡಿದೆ.

ಒಪ್ಪೋ A5 ಪ್ರೊ 4G ಬೆಲೆ ಮತ್ತು ಲಭ್ಯತೆ

ಒಪ್ಪೋ A5 ಪ್ರೊ 4G ಫೋನ್ ಕೇವಲ ಒಂದೇ ಸ್ಟೋರೇಜ್‌ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ನೀವು 8GB RAM + 256GB ಸ್ಟೋರೇಜ್ ರೂಪಾಂತರದಲ್ಲಿ ಖರೀದಿಸಬಹುದು. ಇದರ ಬೆಲೆ 18,500 ರೂ. ಆಗಿದೆ. ಈ ಮೊಬೈಲ್ ಮೋಚಾ ಬ್ರೌನ್ ಮತ್ತು ಆಲಿವ್ ಗ್ರೀನ್ ಬಣ್ಣಗಳಲ್ಲಿ ಬರುತ್ತದೆ. ಪ್ರಸ್ತುತ, ಇದು ಮಲೇಷ್ಯಾ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಶೀಘ್ರದಲ್ಲಿಯೇ ಭಾರತೀಯ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ.

Best Mobiles in India

English summary
Oppo A5 Pro 4G with Snapdragon 6s Gen 1 and 5800mAh battery launched: check price, specifications and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+