Home
ಮೊಬೈಲ್

ಡಬಲ್ ಗುಡ್‌ನ್ಯೂಸ್: ಏ.21ಕ್ಕೆ ಒಂದು.. ಏ.24ಕ್ಕೆ ಮತ್ತೊಂದು OPPO ಫೋನ್.. 6000mAh ಬ್ಯಾಟರಿ.. ಬೆಲೆ ಎಷ್ಟು?

ಒಪ್ಪೋ ಅಭಿಮಾನಿಗಳಿಗೆ ಏಪ್ರಿಲ್ ತಿಂಗಳು ಬಹಳ ವಿಶೇಷವಾಗಿದೆ. ಕಂಪನಿಯು ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಹೌದು, ಇದೇ ಏಪ್ರಿಲ್ 21 ರಂದು ಒಪ್ಪೋ K13 5G (OPPO K13 5G) ಮೊಬೈಲ್ ಲಾಂಚ್ ಆಗಲಿದೆ. ಈ ಮಧ್ಯೆಯೇ, ಕಂಪನಿಯು ಇಂದು ಮತ್ತೊಂದು ಹೊಸ ಫೋನಿನ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 24 ರಂದು ಭಾರತದಲ್ಲಿ ಒಪ್ಪೋ A5 ಪ್ರೊ 5G (OPPO A5 Pro 5G) ಅನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಬನ್ನಿ, ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿದೆ ಎನ್ನುವುದನ್ನು ತಿಳಿಯೋಣ.

ಮುಂಬರುವ ಒಪ್ಪೋ A5 ಪ್ರೊ 5G ಫೋನಿನ ಬಿಡುಗಡೆ ದಿನಾಂಕದ ಜೊತೆಗೆ, ಫೋಟೋ ಮತ್ತು ಪ್ರಮುಖ ವೈಶಿಷ್ಟ್ಯಗಳನ್ನು ಸಹ ಕಂಪನಿಯು ಬಹಿರಂಗಪಡಿಸಿದೆ. ಅದರಂತೆ, ಇದು 6.67 ಇಂಚಿನ ಡಿಸ್ಪ್ಲೇಯೊಂದೊಗೆ ಬರಲಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 45W ಫ್ಲ್ಯಾಶ್ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಿದ್ಧವಾಗಿದೆ.

ಭಾರತದಲ್ಲಿ OPPO A5 Pro 5G ಬಿಡುಗಡೆಗೆ ಡೇಟ್ ಫಿಕ್ಸ್! ಬೆಲೆ, ವಿಶೇಷತೆಗಳೇನು?

ಒಪ್ಪೋ A5 ಪ್ರೊ 5G ಬಿಡುಗಡೆ ವಿವರಗಳು

ಒಪ್ಪೋ ಕಂಪನಿಯು ತನ್ನ ಹೊಸ ಒಪ್ಪೋ A5 ಪ್ರೊ 5G ಫೋನನ್ನು ಏಪ್ರಿಲ್ 24 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ವರ್ಚುವಲ್ ಲಾಂಚ್ ಈವೆಂಟ್ ಮೂಲಕ ಈ ಒಪ್ಪೋ 5G ಮೊಬೈಲ್‌ನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸುತ್ತದೆ. ನೂತನ ಒಪ್ಪೋ A5 ಪ್ರೊ 5G ಫೋನ್ IP69 ರೇಟಿಂಗ್ ಹೊಂದಿರುವ ಜಲನಿರೋಧಕ ಫೋನ್ ಆಗಿದೆ ಎಂದು ಕಂಪನಿ ತಿಳಿಸಿದೆ. ಈ ಸ್ಮಾರ್ಟ್‌ಫೋನ್ ನೀರು, ಮಣ್ಣು, ಶಾಖ, ಶೀತ ಮತ್ತು ಧೂಳಿನಿಂದ ರಕ್ಷಣೆ ಪಡೆದಿದೆ.

ಒಪ್ಪೋ A5 ಪ್ರೊ 5G ವೈಶಿಷ್ಟ್ಯಗಳು (ನಿರೀಕ್ಷಿತ)

ಡಿಸ್ಪ್ಲೇ ವಿವರ

ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 1604 × 720 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ A5 ಪ್ರೊ 5G ಫೋನ್ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್‌ಓಎಸ್ 15 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 6GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಗಳನ್ನು ಹೊಂದಿದೆ.

ಭಾರತದಲ್ಲಿ OPPO A5 Pro 5G ಬಿಡುಗಡೆಗೆ ಡೇಟ್ ಫಿಕ್ಸ್! ಬೆಲೆ, ವಿಶೇಷತೆಗಳೇನು?

ಕ್ಯಾಮೆರಾ ಸೆಟಪ್

ಒಪ್ಪೋ A5 ಪ್ರೊ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 5,800mAh ಬ್ಯಾಟರಿಯೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಚೀನಾದಲ್ಲಿ 6,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ರಿಲೀಸ್ ಆಗಿದೆ. ಈ ಫೋನ್‌ 45W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಇತರೆ ವೈಶಿಷ್ಟ್ಯಗಳು

ಒಪ್ಪೋ A5 ಪ್ರೊ 5G ಮೊಬೈಲ್ IP69 ರೇಟಿಂಗ್ ಹೊಂದಿದೆ. ಇದು ಭದ್ರತೆ ಮತ್ತು ಅನ್‌ಲಾಕಿಂಗ್‌ಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಈ ಫೋನ್ ಬ್ಲೂಟೂತ್ 5.3, ವೈ-ಫೈ 5, ಎನ್‌ಎಫ್‌ಸಿ ಸಹ ಹೊಂದಿದೆ.

Best Mobiles in India

English summary
OPPO A5 Pro 5G with IP69 ratings and 5800mAh battery to launch in India on April 24th: Expected Price, Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+