16,499 ಸಾಕು..! ಮಾರುಕಟ್ಟೆಗೆ ಅಪ್ಪಳಿಸಿತು OPPO A5 Pro ಫೋನ್; ಅಂತಹುದ್ದೇನಿದೆ ಇದರಲ್ಲಿ ವಿಶೇಷತೆ?
ಕಾಯುವಿಕೆ ಕೊನೆಗೂ ಮುಗಿಯಿತು! ಬಹುನಿರೀಕ್ಷಿತ ಒಪ್ಪೋ A5 ಪ್ರೊ 5G (OPPO A5 Pro 5G) ಸ್ಮಾರ್ಟ್‌ಫೋನ್ ಇದೀಗ, ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಹೌದು, ಕಂಪನಿಯು ಆಕರ್ಷಕ ವಿನ್ಯಾಸ ಮತ್ತು ಶಕ್ತಿಶಾಲಿ ವೈಶಿಷ್ಟ್ಯಗಳೊಂದಿಗೆ ಈ ಬಜೆಟ್ ಸ್ನೇಹಿ 5G ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನನ್ನು ಇದಕ್ಕೂ ಮೊದಲು ಚೀನಾ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಭಾರತೀಯ ಗ್ರಾಹಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೆಲವು ಬದಲಾವಣೆಗಳೊಂದಿಗೆ ರಿಲೀಸ್ ಮಾಡಲಾಗಿದೆ. ಈ ನೂತನ ಒಪ್ಪೋ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಒಪ್ಪೋ A5 ಪ್ರೊ 5G ಮೊಬೈಲ್ ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಇತರೆ ಕೈಗೆಟುಕುವ 5G ಸ್ಮಾರ್ಟ್‌ಫೋನ್‌ಗಳೊಂದಿಗೆ ನೇರವಾ ಸ್ಪರ್ಧಿಸಲಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ HD+ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 8GB RAM + 256GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 45W ವೇಗದ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ.

ಕೆಳಗೆ ಬಿದ್ದರೂ, ಒದ್ದೆಯಾದರೂ ಕೆಲಸ ಮಾಡುತ್ತೆ!
ನೀವು ಒಪ್ಪೋ A5 ಪ್ರೊ 5G ಫೋನನ್ನು ಕೆಳಗೆ ಬೀಳಿಸಿದರೂ ಅಥವಾ ಒದ್ದೆಯಾದರೂ ಕೆಲಸ ನಿರ್ವಹಿಸುತ್ತದೆ. ಈ ಫೋನಿನ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ. ಇದು 14 ಮಿಲಿಟರಿ ದರ್ಜೆಯ ಪರಿಸರ ಪರೀಕ್ಷೆಗಳಿಗೆ ಪ್ರಮಾಣೀಕರಣವನ್ನು ಹೊಂದಿವೆ. ಈ ಮೊಬೈಲ್ IP66, IP68 ಮತ್ತು IP69 ರೇಟಿಂಗ್ ಪಡೆದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆ ಹೊಂದಿದೆ. ಅಂದರೆ ಟೀ (ಚಹಾ), ಕಾಫಿ, ಹಾಲು, ಸೋಡಾ, ನೀರು ಮತ್ತು ಇನ್ನೂ ಹೆಚ್ಚಿನವುಗಳನ್ನು ಒಳಗೊಂಡಂತೆ 18 ರೀತಿಯ ದ್ರವ ಸೋರಿಕೆಗಳನ್ನು ತಡೆದುಕೊಳ್ಳಬಲ್ಲದು ಎಂದು ಒಪ್ಪೋ ತಿಳಿಸಿದೆ.
ಒಪ್ಪೋ A5 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1,604 × 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ A5 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಸಹ ಇದೇ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್ ಓಎಸ್ 15 ನೊಂದಿಗೆ ಕೆಲಸ ನಿರ್ವಹಿಸುತ್ತದೆ.
ಕ್ಯಾಮೆರಾ ಸೆಟಪ್
ಒಪ್ಪೋ A5 ಪ್ರೊ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ A5 ಪ್ರೊ 5G ಸ್ಮಾರ್ಟ್‌ಫೋನ್ 5800mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿಯೂ ಇದೇ ಬ್ಯಾಟರಿಯೊಂದಿಗೆ ಪರಿಚಯಿಸಲಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಇದು 45W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಒಪ್ಪೋ A5 ಪ್ರೊ 5G ಮೊಬೈಲ್ ಭದ್ರತೆ ಮತ್ತು ಅನ್‌ಲಾಕಿಂಗ್‌ಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಈ ಫೋನ್ ಬ್ಲೂಟೂತ್ 5.3, ವೈ-ಫೈ 5, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಒಪ್ಪೋ A5 ಪ್ರೊ 5G ಬೆಲೆ ಮತ್ತು ಲಭ್ಯತೆ
8GB RAM + 128GB ಸ್ಟೋರೇಜ್ ಬೆಲೆ = 17,999 ರೂ.
8GB RAM + 256GB ಸ್ಟೋರೇಜ್ ಬೆಲೆ = 19,999 ರೂ.
ಒಪ್ಪೋ A5 ಪ್ರೊ 5G ಫೋನನ್ನು ಕಂಪನಿಯು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಪರಿಚಯಿಸಿದೆ. ಈ ಮೊಬೈಲ್ ಎರಡು ಬಣ್ಣಗಳಲ್ಲಿ ಬರುತ್ತದೆ. ನೀವು ಮೋಚಾ ಬ್ರೌನ್ ಮತ್ತು ಫೆದರ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು. ಇಂದಿನಿಂದ, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್, ಫ್ಲಿಪ್‌ಕಾರ್ಟ್, ಒಪ್ಪೋ ಇ-ಸ್ಟೋರ್ ಮತ್ತು ಇತರೆ ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಈ ಮೊಬೈಲ್ ಮಾರಾಟವಾಗಲಿದೆ. ಕಂಪನಿಯು ಆರಂಭಿಕ ಮಾರಾಟದಲ್ಲಿ1,500 ರೂ. ಕ್ಯಾಶ್‌ಬ್ಯಾಕ್ ಮತ್ತು 6 ತಿಂಗಳವರೆಗೆ ನೋ ಕಾಸ್ಟ್ ಇಎಐ ಆಯ್ಕೆ ನೀಡುತ್ತದೆ. ಇದರ ಜೊತೆಗೆ, ಶೂನ್ಯ ಡೌನ್ ಪೇಮೆಂಟ್ ಯೋಜನೆಯೂ ಲಭ್ಯವಿದೆ. ಈ ಫೋನ್ ಖರೀದಿಸಲು ಈ ಲಿಂಕ್ ಕ್ಲಿಕ್ ಮಾಡಿ.
ವಿಶೇಷ ಪ್ರಕಟಣೆ
ಈ ವೆಬ್‌ಸೈಟ್‌ನಲ್ಲಿ ಅಂಗಸಂಸ್ಥೆ ಲಿಂಕ್‌ಗಳ ಮೂಲಕ ಮಾಡಿದ ಖರೀದಿಗಳಿಂದ ಗಿಜ್‌ಬಾಟ್ ಸಣ್ಣ ಕಮಿಷನ್ ಗಳಿಸುತ್ತದೆ. ಆದರೆ, ನಮ್ಮ ಉತ್ಪನ್ನಗಳ ಶಿಫಾರಸುಗಳು ಪ್ರಾಮಾಣಿಕ ಅಭಿಪ್ರಾಯಗಳು ಮತ್ತು ವೈಯಕ್ತಿಕ ಅನುಭವವನ್ನು ಆಧರಿಸಿವೆ. ಇದಕ್ಕಾಗಿ ನೀವು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಿಲ್ಲ.


Click it and Unblock the Notifications








