Home
ಮೊಬೈಲ್

ಧೂಳೆಬ್ಬಿಸಲು ಬಂತು OPPO A5 Pro ಫೋನ್; 6000mAh ಬಿಗ್ ಬ್ಯಾಟರಿ.. 512GB ಬೃಹತ್ ಸ್ಟೋರೇಜ್.. ಬೆಲೆಯೂ ಕಡಿಮೆ!

ಒಪ್ಪೋ ತನ್ನ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದೆ. ಸದ್ದಿಲ್ಲೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಹೌದು, ಕಂಪನಿಯು ಒಪ್ಪೋ A5 ಪ್ರೊ 5G (OPPO A5 Pro 5G) ಮೊಬೈಲ್ ಅನ್ನು ಅನಾವರಣಗೊಳಿಸಿದೆ. ಇದು ಕಳೆದ ಜೂನ್ ತಿಂಗಳಲ್ಲಿ ಬಿಡುಗಡೆಯಾದ ಒಪ್ಪೋ A3 ಪ್ರೊ 5G ಫೋನಿನ ಉತ್ತರಾಧಿಕಾರಿಯಾಗಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಸ್ಮಾರ್ಟ್‌ಫೋನ್‌ ತನ್ನ ಸ್ಟನ್ನಿಂಗ್ ಲುಕ್ ಮತ್ತು ವೈಶಿಷ್ಟ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಒಪ್ಪೋ A3 ಪ್ರೊ 5G ಮೊಬೈಲ್ 6000mAh ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 512GB ಸ್ಟೋರೇಜ್ ಮತ್ತು 512GB ಸ್ಟೋರೇಜ್ ಸಹ ಹೊಂದಿದೆ. ಈ ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ ತಿಳಿಯಲು ಮುಂದೆ ಓದಿ.

OPPO A5 Pro 5G ಲಾಂಚ್; 6000mAh ಬ್ಯಾಟರಿ.. 512GB ಸ್ಟೋರೇಜ್.. ಬೆಲೆ ಎಷ್ಟು?

ಒಪ್ಪೋ A5 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ A5 ಪ್ರೊ ಮೊಬೈಲ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2412×1080 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1200 nits ಗರಿಷ್ಠ ಬ್ರೈಟ್‌ನೆಸ್ ಮತ್ತು 2160Hz ಅಲ್ಟ್ರಾ ಹೈ ಫ್ರೀಕ್ವೆನ್ಸಿ PWM ಮಬ್ಬಾಗಿಸುವಿಕೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ A5 ಪ್ರೊ 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಹೊಂದಿದೆ. ಇದು 4nm ಆಕ್ಟಾಕೋರ್ ಪ್ರೊಸೆಸರ್‌ ಆಗಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G615 MC2 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 15 ಆಧಾರಿತ ColorOS ನಲ್ಲಿ ಕೆಲಸ ನಿರ್ವಹಿಸುತ್ತದೆ.
ColorOS ಜೊತೆಗೆ Android 15

ಸ್ಟೋರೇಜ್ ಆಯ್ಕೆ

ಒಪ್ಪೋ A5 ಪ್ರೊ 5G ಮೊಬೈಲ್ 12GB RAM ಹೊಂದಿದೆ. ಈ ಫೋನಿನ ದೊಡ್ಡ ವೇರಿಯಂಟ್ 12GB RAM ಮತ್ತು 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಮೂಲ ರೂಪಾಂತರವು 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಹೊಂದಿದೆ.

ಕ್ಯಾಮೆರಾ ಸೆಟಪ್

ಒಪ್ಪೋ A5 ಪ್ರೊ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ OIS ತಂತ್ರಜ್ಞಾನದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಎಲ್‌ಇಡಿ ಫ್ಲಾಶ್‌ನೊಂದಿಗೆ ಬರುತ್ತದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

OPPO A5 Pro 5G ಲಾಂಚ್; 6000mAh ಬ್ಯಾಟರಿ.. 512GB ಸ್ಟೋರೇಜ್.. ಬೆಲೆ ಎಷ್ಟು?

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ A5 ಪ್ರೊ 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಒಪ್ಪೋ A3 ಪ್ರೊ ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸಂವೇದಕ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ ಸಿಮ್, 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.4, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಒಪ್ಪೋ A5 ಪ್ರೊ ಬೆಲೆ ಮತ್ತು ಲಭ್ಯತೆ

ಒಪ್ಪೋ A5 ಪ್ರೊ ಫೋನ್‌ ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ನೀವು ಕೆಂಪು, ರಾಕ್ ಕಪ್ಪು, ಕ್ವಾರ್ಟ್ಜ್ ವೈಟ್ ಮತ್ತು ಸ್ಯಾಂಡ್‌ಸ್ಟೋನ್ ಪರ್ಪಲ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ 8GB + 256GB ಸ್ಟೋರೇಜ್‌ ರೂಪಾಂತರವನ್ನು 23,330 ರೂ.ಗೆ ಬಿಡುಗಡೆ ಮಾಡಲಾಗಿದೆ.

8GB + 512GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್ ಬೆಲೆ 25,670 ರೂ.ಗೆ ಲಭ್ಯವಿದೆ. ಇನ್ನು 12GB + 512GB ಸ್ಟೋರೇಜ್ ಆಯ್ಕೆಯು 29,170 ರೂ.ಗೆ ಮಾರಾಟವಾಗಲಿದೆ. ಪ್ರಸ್ತುತ, ಈ ಫೋನ್ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಡಿಸೆಂಬರ್ 27 ರಿಂದ ಚೀನಾದಲ್ಲಿ ಮಾರಾಟವಾಗಲಿದೆ.

Best Mobiles in India

English summary
OPPO A5 Pro Launched with 120Hz Display, 6000mAh Battery: Know Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+