ಭಾರತಕ್ಕೆ OPPO F29 5G ಎಂಟ್ರಿ; 6500mAh ಬ್ಯಾಟರಿ.. ಶಕ್ತಿಶಾಲಿ ಪ್ರೊಸೆಸರ್.. ಕಡಿಮೆ ಬೆಲೆ, ಆಫರ್ ಕೂಡ ಸಿಗುತ್ತೆ!
ಒಪ್ಪೋ ಇಂದು ಎರಡು ಸೊಗಸಾದ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇವು, ಒಪ್ಪೋ F29 5G (OPPO F29 5G) ಮತ್ತು ಒಪ್ಪೋ F29 ಪ್ರೊ 5G (OPPO F29 Pro 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಹೌದು, ಕಂಪನಿಯು ತನ್ನ ಒಪ್ಪೋ 'F29' ಸರಣಿಯನ್ನು ಅಧಿಕೃತವಾಗಿ ರಿಲೀಸ್ ಮಾಡಿದೆ. ಈ ಮೂಲಕ ತನ್ನ ಅಭಿಮಾನಿಗಳಿಗೆ ಡಬಲ್ ಗುಡ್ ನ್ಯೂಸ್ ಕೊಟ್ಟಿದೆ. ಈ ಪೈಕಿ ಒಪ್ಪೋ F29 5G ಮೊಬೈಲ್ ಗ್ರಾಹಕರ ಗಮನ ಸೆಳೆದಿದೆ. ಬನ್ನಿ, ಈ ಫೋನಿನ ಲಭ್ಯತೆ ಮತ್ತು ವಿಶೇಷತೆಗಳನ್ನು ನೋಡೋಣ.
ಒಪ್ಪೋ F29 5G ಸ್ಮಾರ್ಟ್‌ಫೋನ್ ಎರಡು ರೇಜ್ ಆಯ್ಕೆಗಳಲ್ಲಿ ಲಾಂಚ್ ಆಗಿದೆ. ಈ ಫೋನಿನ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50MP ಮುಖ್ಯ ಕ್ಯಾಮೆರಾ ಮತ್ತು 16MP ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ ಸಹ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 6500mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ಮತ್ತು ಆಫರ್ ತಿಳಿಯಲು ಮೂಂದೆ ಓದಿ.

ಒಪ್ಪೋ F29 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ F29 5G ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2412 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ದರ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ F29 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್ ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 710 ಜಿಪಿಯು ಸಹ ಹೊಂದಿದೆ. ಈ ಫೋನ್ 8GB RAM ಮತ್ತು 128GB, 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ಒಪ್ಪೋ F29 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ F29 5G ಫೋನ್ 6500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಸೂಪರ್‌ವೂಕ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಒಪ್ಪೋ F29 5G ಬೆಲೆ
8GB RAM + 128GB ಸ್ಟೋರೇಜ್ ಬೆಲೆ = 23,999 ರೂ.
8GB RAM + 256GB ಸ್ಟೋರೇಜ್ ಬೆಲೆ = 25,999 ರೂ.
ಒಪ್ಪೋ F29 5G ಫೋನಿನ ಆರಂಭಿಕ ಬೆಲೆ 23,999 ರೂ. ಆಗಿದೆ. ಈ ಮೊಬೈಲ್ ಮಾರ್ಚ್ 27 ಮತ್ತು ಏಪ್ರಿಲ್ 1 ರಿಂದ ಅಮೆಜಾನ್ (Amazon.in), ಫ್ಲಿಪ್‌ಕಾರ್ಟ್ (Flipkart), ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇಂದಿನಿಂದ (ಮಾರ್ಚ್ 20) ಮುಂಗಡ ಬುಕಿಂಗ್ ಪ್ರಾರಂಭವಾಗಿದೆ. ಈ ಒಪ್ಪೋ ಮೊಬೈಲ್ ಸಾಲಿಡ್ ಪರ್ಪಲ್ ಮತ್ತು ಗ್ಲೇಸಿಯರ್ ಬ್ಲೂ ಬಣ್ಣಗಳಲ್ಲಿ ಮಾರಾಟವಾಗಲಿದೆ.
ಒಪ್ಪೋ F29 5G ಮೊದಲ ಮಾರಾಟದ ಪ್ರಯುಕ್ತ ಕಂಪನಿಯು ಹಲವು ಆಫರ್ ಘೋಷಿಸಿದೆ. ನೀವು ಶೇ.10 ರಷ್ಟು ತ್ವರಿತ ಬ್ಯಾಂಕ್ ರಿಯಾಯಿತಿ ಪಡೆಯಬಹುದು. ಇದು ಎಸ್‌ಬಿಐ ಕಾರ್ಡ್‌ಗಳು, ಹೆಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ ಈ ಆಫರ್ ಲಭ್ಯವಿದೆ. ಜೊತೆಗೆ 2000 ರೂ. ವರೆಗೆ ಹೆಚ್ಚುವರಿ ಎಕ್ಸ್‌ಚೇಂಜ್ ಬೋನಸ್ ನೀಡಲಾಗುವುದು. ಇದರೊಂದಿಗೆ 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಮತ್ತು 8 ತಿಂಗಳವರೆಗೆ ಗ್ರಾಹಕ ಸಾಲದ ವ್ಯವಸ್ಥೆ ಕಲ್ಪಿಸಲಾಗಿದೆ.


Click it and Unblock the Notifications








