Home
ಮೊಬೈಲ್

ಭಾರತದಲ್ಲಿ OPPO F29 Pro 5G ಲಾಂಚ್; 6000mAh ಬ್ಯಾಟರಿ.. 50MP ಕ್ಯಾಮೆರಾ.. ಬೆಲೆ, ಆಫರ್ ಏನಿದೆ?

ಒಪ್ಪೋ ಕಂಪನಿಯು ಹೊಚ್ಚ ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದನ್ನು ಒಪ್ಪೋ F29 (OPPO F29) ಸರಣಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಹೌದು, ಕಂಪನಿಯು ತನ್ನ ಬಹುನಿರೀಕ್ಷಿತ ಒಪ್ಪೋ F29 ಪ್ರೊ 5G (OPPO F29 Pro 5G) ಸ್ಮಾರ್ಟ್‌ಫೋನ್‌ ಅನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಇದನ್ನು 30,000 ರೂ.ಗಳ ಬಜೆಟ್‌ನಲ್ಲಿ ತರಲಾಗಿದೆ. ಇದರ ಸ್ಟೈಲಿಶ್ ಲುಕ್ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳು ಇಲ್ಲಿವೆ.

ಒಪ್ಪೋ F29 ಪ್ರೊ 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.67 ಇಂಚಿನ ಅಮೋಲೆಡ್‌ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 12GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಅನೇಕ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ಭಾರತದಲ್ಲಿ OPPO F29 Pro ಲಾಂಚ್; ರಾಶಿ ಫೀಚರ್ಸ್.. ಬೆಲೆ, ಆಫರ್ ಏನಿದೆ?

ಒಪ್ಪೋ F29 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ F29 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್‌ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2412 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ F29 ಪ್ರೊ 5G ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಕಲರ್ ಓಎಸ್ 15 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಮಾಲಿ G615 MC2 ಜಿಪಿಯು ಸಹ ಹೊಂದಿದೆ. ಈ ಫೋನ್ 8GB, 12GB RAM ಮತ್ತು 128GB, 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

Take a Poll

ಕ್ಯಾಮೆರಾ ಸೆಟಪ್

ಒಪ್ಪೋ F29 ಪ್ರೊ 5G ಸ್ಮಾರ್ಟ್‌ಫೋನ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ಎಲ್‌ಇಡಿ ಫ್ಲ್ಯಾಷ್ ಮತ್ತು ವಿವಿಧ ಕ್ಯಾಮೆರಾ ವೈಶಿಷ್ಟ್ಯಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ F29 ಪ್ರೊ 5G ಫೋನ್ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಒಪ್ಪೋ F29 ಪ್ರೊ 5G ಬೆಲೆ

8GB RAM + 128GB ಸ್ಟೋರೇಜ್ ಬೆಲೆ = 27,999 ರೂ.
8GB RAM + 256GB ಸ್ಟೋರೇಜ್ ಬೆಲೆ = 29,999 ರೂ.
12GB RAM + 256GB ಸ್ಟೋರೇಜ್ ಬೆಲೆ = 31,999 ರೂ.

ಒಪ್ಪೋ F29 ಪ್ರೊ 5G ಫೋನಿನ ಆರಂಭಿಕ ಬೆಲೆ 27,999 ರೂ. ಆಗಿದೆ. ಈ ಮೊಬೈಲ್ ಮಾರ್ಚ್ 27 ಮತ್ತು ಏಪ್ರಿಲ್ 1 ರಿಂದ ಅಮೆಜಾನ್ (Amazon.in), ಫ್ಲಿಪ್‌ಕಾರ್ಟ್ (Flipkart), ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇಂದಿನಿಂದ (ಮಾರ್ಚ್ 20) ಮುಂಗಡ ಬುಕಿಂಗ್ ಪ್ರಾರಂಭವಾಗಿದೆ.

ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಹಲವು ಆಫರ್ ಘೋಷಿಸಿದೆ. ನೀವು ಶೇ.10 ರಷ್ಟು ತ್ವರಿತ ಬ್ಯಾಂಕ್ ರಿಯಾಯಿತಿ ಪಡೆಯಬಹುದು. ಇದು ಎಸ್‌ಬಿಐ ಕಾರ್ಡ್‌ಗಳು, ಹೆಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ ಈ ಆಫರ್ ಲಭ್ಯವಿದೆ. ಜೊತೆಗೆ 2500 ರೂ. ವರೆಗೆ ಹೆಚ್ಚುವರಿ ಎಕ್ಸ್‌ಚೇಂಜ್ ಬೋನಸ್ ನೀಡಲಾಗುವುದು. ಇದರೊಂದಿಗೆ 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಮತ್ತು 8 ತಿಂಗಳವರೆಗೆ ಗ್ರಾಹಕ ಸಾಲದ ಪ್ರಯೋಜನೆ ಪಡೆಯಬಹುದು.

Best Mobiles in India

English summary
OPPO F29 Pro 5G with MediaTek Dimensity 7300 and 6000mAh battery launched in India: know price, specifications and sale details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+