ಇಂದು OPPO Find X8 ಸೇಲ್; ಮೊದಲ ದಿನವೇ 12% ಡಿಸ್ಕೌಂಟ್.. 10,000 ಉಳಿತಾಯ ಖಚಿತ!
ಒಪ್ಪೋ ಪ್ರಿಯರಿಗೆ ಸಿಹಿಸುದ್ದಿ ಇದೆ. ಎರಡು ಹೊಸ ಮೊಬೈಲ್ ಇಂದು ಅಧಿಕೃತವಾಗಿ ಗ್ರಾಹಕರ ಕೈ ಸೇರಲಿವೆ. ಹೌದು, ಒಪ್ಪೋ ಇತ್ತೀಚೆಗೆ ತನ್ನ ಫೈಂಡ್ X8 (OPPO Find X8) ಸರಣಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಒಪ್ಪೋ ಫೈಂಡ್ X8 (OPPO Find X8) ಮತ್ತು ಒಪ್ಪೋ ಫೈಂಡ್ X8 ಪ್ರೊ (OPPO Find X8 Pro) ಫೋನ್‌ಗಳನ್ನು ಪರಿಚಯಿಸಲಾಗಿತ್ತು. ಅಂದಹಾಗೆ, ಕಂಪನಿಯು ಇಂದಿನಿಂದ (ಡಿಸೆಂಬರ್ 3) ಹೊಸ ಮೊಬೈಲ್‌ಗಳನ್ನು ಮಾರಾಟ ಮಾಡಲಿದೆ. ಈ ಪೈಕಿ, ಒಪ್ಪೋ ಫೈಂಡ್ X8 ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ ಬನ್ನಿ.
ಒಪ್ಪೋ ಫೈಂಡ್ X8 ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಶೇ.12 ರಷ್ಟು ರಿಯಾಯಿತಿ ಮತ್ತು ಹಲವು ಬ್ಯಾಂಕ್ ಆಫರ್‌ಗಳನ್ನು ನೀಡುತ್ತಿದೆ. ಈ ಫೋನ್ ಮೂರು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ 6.59 ಇಂಚಿನ ಡಿಸ್ಪ್ಲೇ, 5630mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.

ಒಪ್ಪೋ ಫೈಂಡ್ X8 ಬೆಲೆ ಮತ್ತು ಆಫರ್‌ಗಳು
ಒಪ್ಪೋ ಫೈಂಡ್ X8 ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವು 69,999 ರೂ.ಗೆ ಮಾರಾಟವಾಗಲಿದೆ. 16GB RAM + 512GB ಸ್ಟೋರೇಜ್ ರೂಪಾಂತರವು 79,999 ರೂ.ಗೆ ಲಭ್ಯವಿದೆ. ಇದು ಸ್ಟಾರ್ ಗ್ರೇ ಮತ್ತು ಸ್ಪೇಸ್ ಬ್ಲಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಒಪ್ಪೋ ಇ-ಸ್ಟೋರ್, ಫ್ಲಿಪ್‌ಕಾರ್ಟ್, ಆನ್‌ಲೈನ್ ಮತ್ತು ಆಫ್‌ಲೈನ್ ಚಿಲ್ಲರೆ ಮಳಿಗೆಗಳ ಮೂಲಕ ಮಾರಾಟವಾಗಲಿದೆ.
ಕಂಪನಿಯು ಶೇ.12 ರಷ್ಟು ರಿಯಾಯಿತಿ ನೀಡುತ್ತಿದೆ. ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 6,999 ರೂ. ಡಿಸ್ಕೌಂಟ್ ಪಡೆಯಬಹುದು. ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 10,000 ಸಾವಿರ ರೂ. ರಿಯಾಯಿತಿ ಲಭ್ಯವಿದೆ. ಫೆಡರಲ್ ಬ್ಯಾಂಕ್ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ ಪಾವತಿ ಮೇಲೆ 7,000 ರೂ. ಡಿಸ್ಕೌಂಟ್ ಸಿಗುತ್ತದೆ. ನೀವು, ಒಪ್ಪೋ ಫೈಂಡ್ X8 5G ಫೋನನ್ನು 59,000 ರೂ.ಗೆ ಖರೀದಿಸಬಹುದು.
ಈ ಸುದ್ದಿ ಓದಿದ್ದೀರಾ?: 3000 ಅಗ್ಗ! 100MP ಬ್ಯಾಕ್ ಕ್ಯಾಮೆರಾ.. 50MP ಸೆಲ್ಫಿ ಕ್ಯಾಮೆರಾ.. ಕಡಿಮೆ ಬೆಲೆಗೆ ಸೊಗಸಾದ ಫೋನ್!
ಒಪ್ಪೋ ಫೈಂಡ್ X8 ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ ಫೈಂಡ್ X8 ಮೊಬೈಲ್ 6.59 ಇಂಚಿನ 1.5K ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ಫೈಂಡ್ X8 ಫೋನ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ColorOS 15 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 12GB RAM + 256GB ಸ್ಟೋರೇಜ್ ಮತ್ತು 16GB RAM + 512GB ಸ್ಟೋರೇಜ್ ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಒಪ್ಪೋ ಫೈಂಡ್ X8 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಜೊತೆಗೆ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ಫೈಂಡ್ X8 ಫೋನ್ 5630mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಬಂದಿದೆ. ಇದನ್ನು ಚಾರ್ಜ್ ಮಾಡಲು, 80W ಸೂಪರ್‌ವೋಕ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 50W AIRVOOC ವೈರ್‌ಲೆಸ್ ಚಾರ್ಜ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಸಹ ಲಭ್ಯವಿದೆ.
ಇತರ ವೈಶಿಷ್ಟ್ಯಗಳು
ಒಪ್ಪೋ ಫೈಂಡ್ X8 ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ವೈ-ಫೈ 7, ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು ಎನ್‌ಎಫ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








