ಖರೀದಿಗೆ ಕ್ಯೂ! OPPO Find X8 ಲಾಂಚ್; ಬೆಲೆ 69,999 ರೂ.. 10% ಡಿಸ್ಕೌಂಟ್.. ಇಲ್ಲಿವೆ ಟಾಪ್ 5 ಫೀಚರ್ಸ್
OPPO Find X8 Top 5 Features: ಒಪ್ಪೋ ಭಾರತದಲ್ಲಿ ಎರಡು ಹೊಸ ಮೊಬೈಲ್‌ಗಳನ್ನು ಬಿಡುಗಡೆ ಮಾಡಿದೆ. ಅವುಗಳೇ, ಒಪ್ಪೋ ಫೈಂಡ್ X8 (OPPO Find X8) ಮತ್ತು ಒಪ್ಪೋ ಫೈಂಡ್ X8 ಪ್ರೊ (OPPO Find X8 Pro) ಫೋನ್‌ಗಳು. ಇವುಗಳನ್ನು ಒಪ್ಪೋ ಫೈಂಡ್ X8 (OPPO Find X8) ಸರಣಿಯ ಅಡಿಯಲ್ಲಿ ಪರಿಚಯಿಸಲಾಗಿದೆ. ಈ ಪೈಕಿ ಒಪ್ಪೋ ಫೈಂಡ್ X8 ಮೊಬೈಲ್ 69,999 ರೂ.ಗೆ ಬಿಡುಗಡೆಯಾಗಿದೆ. ನಾವು, ಈ ಲೇಖನದಲ್ಲಿ ಹೊಸ ಫೋನಿನ ಟಾಪ್ 5 ವೈಶಿಷ್ಟ್ಯಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೌದು, ಬಹುನಿರೀಕ್ಷಿತ ಒಪ್ಪೋ ಫೈಂಡ್ X8 ಮೊಬೈಲ್ ಭಾರತದಲ್ಲಿ ಲಾಂಚ್ ಆಗಿದೆ. ಇದು ಸ್ಟೈಲಿಶ್ ಲುಕ್ ಮತ್ತು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾಗಳು, 6.59 ಇಂಚಿನ ಡಿಸ್ಪ್ಲೇ, 5630mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಒಪ್ಪೋ ಫೈಂಡ್ X8 ಬೆಲೆ ಎಷ್ಟು?
ಒಪ್ಪೋ ಫೈಂಡ್ X8 ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 69,999 ರೂ.ಗೆ ಆಗಿದೆ. 16GB RAM ಮತ್ತು 512GB ಸ್ಟೋರೇಜ್ ರೂಪಾಂತರವನ್ನು 79,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಕಂಪನಿಯು ಶೇ.10 ರಷ್ಟು ಕ್ಯಾಶ್‌ಬ್ಯಾಕ್ ಮತ್ತು 24 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯ ನೀಡುತ್ತದೆ. ಈ ಫೋನ್ ಸ್ಟಾರ್ ಗ್ರೇ ಮತ್ತು ಸ್ಪೇಸ್ ಬ್ಲಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಡಿಸೆಂಬರ್ 3 ರಿಂದ ಈ ಫೋನಿನ ಮಾರಾಟ ಪ್ರಾರಂಭವಾಗಲಿದೆ.
ಒಪ್ಪೋ ಫೈಂಡ್ X8: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊದಲಿಗೆ ಒಪ್ಪೋ ಫೈಂಡ್ X8 ಫೋನಿನ ಡಿಸ್ಪ್ಲೇ ಬಗ್ಗೆ ತಿಳಿಯೋಣ. ಈ ಫೋನ್ 120Hz ರಿಫ್ರೆಶ್ ದರದೊಂದಿಗೆ 6.59 ಇಂಚಿನ ಫ್ಲಾಟ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1.5K ರೆಸಲ್ಯೂಶನ್, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ಫೈಂಡ್ X8 ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ColorOS 15 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 12GB RAM + 256GB ಸ್ಟೋರೇಜ್ ಮತ್ತು 16GB RAM + 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಒಪ್ಪೋ ಫೈಂಡ್ X8 ಸ್ಮಾರ್ಟ್‌ಫೋನ್ ಟ್ರಿಪಲ್ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ಫೈಂಡ್ X8 ಮೊಬೈಲ್ 5630mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇದರೊಂದಿಗೆ 50W AIRVOOC ವೈರ್‌ಲೆಸ್ ಚಾರ್ಜ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರ ವೈಶಿಷ್ಟ್ಯಗಳು
ಒಪ್ಪೋ ಫೈಂಡ್ X8 ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ಮತ್ತು 69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ವೈ-ಫೈ 7, ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು ಎನ್‌ಎಫ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








