OPPO: ಬರ್ತಿದೆ ಹೊಸ 5G ಫೋನ್: ಬಿಡುಗಡೆ ದಿನಾಂಕ ಘೋಷಣೆ.. ಟಾಪ್ 5 ಫೀಚರ್ಸ್ ಬಹಿರಂಗ!
ಒಪ್ಪೋ ತನ್ನ ಅಭಿಮಾನಿಗಳಿಗೆ ಹೊಸ 5G ಫೋನ್ ಗಿಫ್ಟ್ ನೀಡಲು ಸಜ್ಜಾಗಿದೆ. ಶೀಘ್ರದಲ್ಲೇ ತನ್ನ 'K' ಸರಣಿಯಲ್ಲಿ ಹೊಸ ಮೊಬೈಲ್ ಅನ್ನು ಬಿಡುಗಡೆ ಮಾಡಲಿದೆ. ಇದು ಒಪ್ಪೋ K12 ಪ್ಲಸ್ 5G (OPPO K12 Plus 5G) ಹೆಸರಿನೊಂದಿಗೆ ಮಾರುಕಟ್ಟೆಯಲ್ಲಿ ಲಗ್ಗೆ ಇಡಲಿದೆ. ಇತ್ತೀಚೆಗೆ, ಒಪ್ಪೋ (OPPO) ಈ ಸ್ಮಾರ್ಟ್‌ಫೋನಿನ ಚೀನಾ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಜೊತೆಗೆ, ಈ ಫೋನಿನ ಪ್ರಮುಖ ವೈಶಿಷ್ಟ್ಯಗಳನ್ನು ಸಹ ಬಹಿರಂಗಪಡಿಸಿದೆ. ಬನ್ನಿ, ಈ ನೂತನ ಫೋನಿನ ಬಿಡುಗಡೆ ದಿನಾಂಕ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒಪ್ಪೋ K12 ಪ್ಲಸ್ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 512GB ಸ್ಟೋರೇಜ್, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿರಲಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರಲಿದೆ. ಈ ಸ್ಮಾರ್ಟ್‌ಫೋನ್ 6,400mAh ಬ್ಯಾಟರಿ ಮತ್ತು 80W ಚಾರ್ಜಿಂಗ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ಹೊಂದಿರಲಿದೆ.

ಒಪ್ಪೋ K12 ಪ್ಲಸ್ 5G ಬಿಡುಗಡೆ ವಿವರ
ಕಂಪನಿಯು ಒಪ್ಪೋ K12 ಪ್ಲಸ್ 5G (OPPO K12 Plus 5G) ಫೋನಿನ ಅಧಿಕೃತ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಟೀಸರ್ ಮೂಲಕ ಕಂಪನಿಯು ಈ ಮೊಬೈಲ್‌ನ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಒಪ್ಪೋ K12 ಪ್ಲಸ್ 5G ಸ್ಮಾರ್ಟ್‌ಫೋನ್ ಚೀನಾದಲ್ಲಿ ಅಕ್ಟೋಬರ್ 12 ರಂದು ಮಧ್ಯಾಹ್ನ 2.30ಕ್ಕೆ ಬಿಡುಗಡೆಯಾಗಲಿದೆ. ಇದು ಸ್ನೋ ಪೀಕ್ ವೈಟ್ ಕಲರ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ. ಫೋನ್ ಬಸಾಲ್ಟ್ ಕಪ್ಪು ಬಣ್ಣದ ಆಯ್ಕೆಯಲ್ಲಿಯೂ ಲಭ್ಯವಿರುತ್ತದೆ.
ಒಪ್ಪೋ K12 ಪ್ಲಸ್ 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ K12 ಪ್ಲಸ್ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಅಮೋಲೆಡ್ ಪ್ಯಾನೆಲ್, 2412 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರವನ್ನು ಒಳಗೊಂಡಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒಪ್ಪೋ K12 ಪ್ಲಸ್ 5G ಅನ್ನು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗುತ್ತದೆ. ಜೊತೆಗೆ, ಅಡ್ರಿನೊ 720 ಜಿಪಿಯು ಅನ್ನು ಒಳಗೊಂಡಿರಲಿದೆ.
ಸ್ಟೋರೇಜ್ ಆಯ್ಕೆ
ಒಪ್ಪೋ K12 ಪ್ಲಸ್ 5G ಮೊಬೈಲ್ 8GB, 12GB LPDDR4X RAM, 256GB ಮತ್ತು 512GB UFS 3.1 ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಓಎಸ್ ಆಧಾರಿತ ColorOS 14 ಕಸ್ಟಮ್ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ರಚನೆ
ಒಪ್ಪೋ K12 ಪ್ಲಸ್ 5G ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಒಳಗೊಂಡಿರಲಿದೆ. ಮುಖ್ಯ ಕ್ಯಾಮೆರಾ OIS ಅನ್ನು ಬೆಂಬಲಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರಲಿದೆ.
ಬ್ಯಾಟರಿ ಬ್ಯಾಕಪ್
ಕಂಪನಿಯು ಒಪ್ಪೋ K12 ಪ್ಲಸ್ 5G ಸ್ಮಾರ್ಟ್‌ಫೋನ್ ಅನ್ನು 6,400mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 80W ಸೂಪರ್ ವೂಕ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ಈ ಫೋನ್ ಭದ್ರತೆಗಾಗಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿರಲಿದೆ. ಇದು ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP54 ರೇಟಿಂಗ್ ಅನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, 4G ವೋಲ್ಟ್, ಬ್ಲೂಟೂತ್ 5.3, ವೈ ಫೈ 6 ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿರಲಿದೆ.


Click it and Unblock the Notifications








