Home
ಮೊಬೈಲ್

'ಬ್ಯಾಟರಿ ಬಾಳಿಕೆಯ ರಾಜ'..! ನಾಳೆ OPPO K13 5G ಗ್ರ್ಯಾಂಡ್ ಎಂಟ್ರಿ.. 20000ಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು?

ಒಪ್ಪೋ ಕಂಪನಿಯು ನಾಳೆ ಭಾರತದಲ್ಲಿ ಹೊಸ 5G ಫೋನನ್ನು ಬಿಡುಗಡೆ ಮಾಡಲಿದೆ. ಈ ಫೋನನ್ನು ತನ್ನ 'K' ಸರಣಿಯ ಅಡಿಯಲ್ಲಿ ಪರಿಚಯಿಸಲಿದೆ. ಹೌದು, ಇತ್ತೀಚೆಗೆ ಒಪ್ಪೋ K13 5G (OPPO K13 5G) ಮೊಬೈಲ್ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಈಗಾಗಲೇ ಒಪ್ಪೋ K13 5G ಫೋನಿನ ರಿಟೇಲ್ ಬಾಕ್ಸ್ ಸಹ ಸೋರಿಕೆಯಾಗಿದೆ. ಆನ್‌ಲೈನ್‌ನಲ್ಲಿ ಈ ಮೊಬೈಲ್‌ನ ಫೋಟೋ ಸಹ ಲೀಕ್ ಆಗಿದೆ. ವಿಶೇಷವೆಂದರೆ, 20000 ರೂ.ಗಳ ಬಜೆಟ್ ವಿಭಾಗದಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಲಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಮುಂಬರುವ ಒಪ್ಪೋ K13 5G ಫೋನಿನ ಪ್ರಮುಖ ವಿಶೇಷತೆಗಳು ಬಹಿರಂಗವಾಗಿವೆ. ಅದರಂತೆ, ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಈ ಫೋನಿನ ನಿರೀಕ್ಷಿತ ಬೆಲೆ ಮತ್ತು ಇನ್ನಿತರ ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

ನಾಳೆ OPPO K13 5G ಲಾಂಚ್.. 20000ಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು?

ಒಪ್ಪೋ K13 5G ಬಿಡುಗಡೆಯ ವಿವರ

ಒಪ್ಪೋ ಕಂಪನಿಯು ಏಪ್ರಿಲ್ 21 ರಂದು ಭಾರತದಲ್ಲಿ ದೊಡ್ಡ ಲಾಂಚ್ ಈವೆಂಟ್ ಆಯೋಜಿಸಿದೆ. ಈ ಸಮಾರಂಭದಲ್ಲಿ ಹೊಸ ಒಪ್ಪೋ K13 5G ಫೋನನ್ನು ಅನಾವರಣಗೊಳಿಸಲಾಗುವುದು. ಈ ಬಿಡುಗಡೆ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಇದನ್ನು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಕಂಪನಿಯ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ವಿಶೇಷವೆಂದರೆ, ಒಪ್ಪೋ K13 5G ವಿದೇಶಿ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿಲ್ಲ. ಈ ಮೊಬೈಲ್ ಏಪ್ರಿಲ್ 21 ರಂದು ಭಾರತದಲ್ಲಿ ಮೊದಲು ಬಿಡುಗಡೆಯಾಗಲಿದೆ.

ಒಪ್ಪೋ K13 5G ಬೆಲೆ ಮತ್ತು ಲಭ್ಯತೆ

ಒಪ್ಪೋ K13 5G ಫೋನನ್ನು ಕಂಪನಿಯು 20 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡಲಿದೆ. ನಾಳೆ ಈ ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಲಾಗುವುದು. ಬಿಡುಗಡೆ ಬಳಿಕ ಈ ಮೊಬೈಲ್ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

ಒಪ್ಪೋ K13 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ K13 5G ಮೊಬೈಲ್ 6.67 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇಯೊಂದಿಗೆ ಬಿಡುಗಡೆಯಾಗಲಿದೆ. ಇದು ಪಂಚ್ ಹೋಲ್ ಶೈಲಿಯ ಸ್ಕ್ರೀನ್ ಆಗಿರಲಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬಿಡುಗಡೆಯಾಗಲಿದೆ. ಒಪ್ಪೋ K12 5G ಸ್ಮಾರ್ಟ್‌ಫೋನ್ 6.7 ಇಂಚಿನ FHD+ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಫೋನಿನ ಡಿಸ್ಪ್ಲೇಯು HDR10+, 120Hz ರಿಫ್ರೆಶ್ ದರ ಮತ್ತು 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ K13 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗುವುದು. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಒಪ್ಪೋ K12 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಒಪ್ಪೋ ಮೊಬೈಲ್ 12GB RAM ಮತ್ತು 512GB ಸ್ಟೋರೇಜ್ ಹೊಂದಿದೆ.

ನಾಳೆ OPPO K13 5G ಲಾಂಚ್.. 20000ಕ್ಕಿಂತ ಕಡಿಮೆ ಬೆಲೆ.. ವಿಶೇಷತೆಗಳೇನು?

ಕ್ಯಾಮೆರಾ ಸೆಟಪ್

ಒಪ್ಪೋ K13 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಒಪ್ಪೋ ಮೊಬೈಲ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ. ಒಪ್ಪೋ K12 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಇದೆ. ಹಾಗೆಯೇ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ K13 5G ಫೋನಿನ ಬ್ಯಾಟರಿ ಬ್ಯಾಕಪ್ ಬಗ್ಗೆ ಹೇಳುವುದಾದರೆ, ಇದಕ್ಕೆ 'ಬ್ಯಾಟರಿ ಬಾಳಿಕೆಯ ರಾಜ' ಎಂಬ ಟ್ಯಾಗ್‌ಲೈನ್ ನೀಡಬಹುದು. ಈ ಮೊಬೈಲ್ 7000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ನಿಜವಾದರೆ, ಒಪ್ಪೋ K13 5G ಇಷ್ಟು ದೊಡ್ಡ ಬ್ಯಾಟರಿಯನ್ನು ಹೊಂದಿರುವ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಆಗಲಿದೆ. ಈ ಮೊಬೈಲ್ 90W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿರುತ್ತದೆ. ಒಪ್ಪೋ K12 5G ಫೋನ್ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ತ್ವರಿತವಾಗಿ ಚಾರ್ಜ್ ಮಾಡಲು, ಈ ಮೊಬೈಲ್‌ 100W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

Best Mobiles in India

English summary
OPPO k13 5G to launch on April 21st in India; Key specifications revealed Ahead of Launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+