ಸ್ಮಾರ್ಟ್‌ಫೋನ್ ಕಾ 'ರಾಜಾ': 16,999 ಸಾಕು..! 7000mAh ಬೃಹತ್ ಬ್ಯಾಟರಿ.. ಯಾವ ಫೋನ್? ಸೇಲ್ ಯಾವಾಗ?
ಒಪ್ಪೋ ಕಂಪನಿಯು ತನ್ನ 'K' ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಒಪ್ಪೋ K13 5G (OPPO K13 5G) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಬಜೆಟ್ ಸ್ಮಾರ್ಟ್‌ಫೋನ್ ಪ್ರಿಯರು ಮಾತ್ರವಲ್ಲದೆ, ಬಿಗ್ ಬ್ಯಾಟರಿ ಬ್ಯಾಕಪ್ ಇಷ್ಟಪಡುವವರು ಈ ಒಪ್ಪೋ 5G ಮೊಬೈಲ್ ಅನ್ನು ಕಣ್ಣು ಮುಚ್ಚಿ ಖರೀದಿಸಬಹುದು. ಬನ್ನಿ, ಈ ಒಪ್ಪೋ K13 5G ಫೋನಿನ ಬೆಲೆ, ಮಾರಾಟದ ವಿವರಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒಪ್ಪೋ K13 5G ಮೊಬೈಲ್ ನಿರೀಕ್ಷೆಯಂತೆಯೇ 20,000 ರೂ.ಗಳ ಬಜೆಟ್ ವಿಭಾಗದಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ಪ್ರಮುಖ ವಿಶೇಷತೆಯೆಂದರೆ, ದೊಡ್ಡ ಬ್ಯಾಟರಿ ಬ್ಯಾಕಪ್. ಇದು 7000mAh ಸಾಮರ್ಥ್ಯದ ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 6.67 ಇಂಚಿನ ಡಿಸ್ಪ್ಲೇ, 8GB RAM + 256GB ಸ್ಟೋರೇಜ್ ಅನ್ನು ಹೊಂದಿದೆ.

ಒಪ್ಪೋ K13 5G ಬೆಲೆ ಮತ್ತು ಲಭ್ಯತೆ
8GB RAM + 128GB ಸ್ಟೋರೇಜ್ ಬೆಲೆ = 17,999 ರೂ.
8GB RAM + 256GB ಸ್ಟೋರೇಜ್ ಬೆಲೆ = 19,999 ರೂ.
ಒಪ್ಪೋ K13 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ಆರಂಭಿಕ ಬೆಲೆ 17,999 ರೂ. ಆಗಿದೆ. ಈ ಫೋನ್ ಏಪ್ರಿಲ್ 25 ರಿಂದ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್, ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಕಂಪನಿಯು ಆರಂಭಿಕ ಮಾರಾಟ ಪ್ರಯುಕ್ತ ಹಲವು ಆಫರ್ ಘೋಷಿಸಿದೆ. ಎಸ್‌ಬಿಐ, ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳೊಂದಿಗೆ ಈ ಮೊಬೈಲ್ ಖರೀದಿಸಿದರೆ, 1000 ರೂ. ತ್ವರಿತ ರಿಯಾಯಿತಿ ಅಥವಾ 1000 ರೂ. ವರೆಗೆ ಹೆಚ್ಚುವರಿ ಎಕ್ಸ್‌ಚೇಂಜ್ ಬೋನಸ್ ಸಿಗುತ್ತದೆ. ಜೊತೆಗೆ 6 ತಿಂಗಳ ನೋ ಕಾಸ್ಟ್ ಇಎಂಐ ಆಯ್ಕೆಯೂ ಲಭ್ಯವಿದೆ.
ಒಪ್ಪೋ K13 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ K13 5G ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,400 × 1,080 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನಿನ ಡಿಸ್ಪ್ಲೇಯು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ಸಹ ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ K13 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ColorOS 15 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 810 ಜಿಪಿಯು ಸಹ ಹೊಂದಿದೆ. ಈ ಫೋನ್ 8GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 128GB ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಒಪ್ಪೋ K13 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ ಬರುತ್ತದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಇದು 4K ವಿಡಿಯೋ ರೆಕಾರ್ಡಿಂಗ್ ಬೆಂಬಲಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಒಪ್ಪೋ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ K13 5G ಸ್ಮಾರ್ಟ್‌ಫೋನ್‌ನ ಬ್ಯಾಟರಿ ಬಗ್ಗೆ ಹೇಳುವುದಾದರೆ, ಇದು 7000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇಷ್ಟು ದೊಡ್ಡ ಬ್ಯಾಟರಿಯನ್ನು ಹೊಂದಿರುವ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ SuperVOOC ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.


Click it and Unblock the Notifications








