Home
ಮೊಬೈಲ್

ಸಿಹಿಸುದ್ದಿ: ಬರ್ತಿದೆ OPPO Reno 13 ಸರಣಿ; ಒಂದೇ ದಿನ 2 ಹೊಸ ಫೋನ್ ಲಾಂಚ್.. ಬೆಲೆ, ವಿಶೇಷತೆಗಳೇನು?

ಒಪ್ಪೋ ಮೊಬೈಲ್ ಪ್ರಿಯರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಕಂಪನಿಯು ತನ್ನ ಬಹುನಿರೀಕ್ಷಿತ ರೆನೋ 13 (OPPO Reno 13) ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಹೌದು, ಈ ಸರಣಿಯ ಅಡಿಯಲ್ಲಿ, ಒಪ್ಪೋ ರೆನೋ 13 (OPPO Reno 13) ಮತ್ತು ಒಪ್ಪೋ ರೆನೋ 13 ಪ್ರೊ (OPPO Reno 13 Pro) ಫೋನ್‌ಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಒಪ್ಪೋ ರೆನೋ 13 ಸರಣಿಯು ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಈಗಾಗಲೇ, ತನ್ನ ವೆಬ್‌ಸೈನ್‌ನಲ್ಲಿ ಮುಂಬರುವ ಸರಣಿಯ ಮೈಕ್ರೋ ಸೈಟ್ ಲೈವ್ ಮಾಡಿದೆ. ಈ ಮೂಲಕ ಮುಂಬರುವ 5G ಫೋನ್‌ಗಳ ಫೋಟೋ ಮತ್ತು ಡಿಸೈನ್ ಬಹಿರಂಗಪಡಿಸಿದೆ. ಕಂಪನಿಯು ಇದನ್ನು OPPO AI ಫೋನ್ ಎಂದು ಕರೆದಿದೆ. ಆದರೆ, ಬಿಡುಗಡೆಯ ದಿನಾಂಕವನ್ನು ಇನ್ನೂ ಘೋಷಿಸಿಲ್ಲ. ಒಪ್ಪೋನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟೀಸರ್‌ ಬಿಡುಗಡೆಯಾಗಿದೆ. ಈ ಒಪ್ಪೋ ರೆನೋ 13 ಸರಣಿಯ ಬೆಲೆಯನ್ನು ತಿಳಿಯಲು ಮುಂದೆ ಓದಿ.

ಬರ್ತಿದೆ OPPO Reno 13 ಸರಣಿ; ಒಂದೇ ದಿನ 2 ಹೊಸ ಫೋನ್ ಲಾಂಚ್.. ಬೆಲೆ ಎಷ್ಟು?

ಒಪ್ಪೋ ರೆನೋ 13 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ ರೆನೋ 13 ಮೊಬೈಲ್ 6.59 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಅಮೋಲೆಡ್‌ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2760 x 1256 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂದಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ ರೆನೋ 13 ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 8350 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ColorOS 15.0 ಜೊತೆಗೆ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ಒಪ್ಪೋ ರೆನೋ 13 ಸ್ಮಾರ್ಟ್‌ಫೋನ್ OIS ಮತ್ತು ಎಲ್‌ಇಡಿ ಫ್ಲ್ಯಾಷ್ ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ ರೆನೋ 13 ಮೊಬೈಲ್ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಬರ್ತಿದೆ OPPO Reno 13 ಸರಣಿ; ಒಂದೇ ದಿನ 2 ಹೊಸ ಫೋನ್ ಲಾಂಚ್.. ಬೆಲೆ ಎಷ್ಟು?

ಒಪ್ಪೋ ರೆನೋ 13 ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ ರೆನೋ 13 ಪ್ರೊ ಮೊಬೈಲ್ 6.83 ಇಂಚಿನ 1.5K ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 1200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ ರೆನೋ 13 ಪ್ರೊ ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 8350 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ColorOS 15.0 ಜೊತೆಗೆ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ಒಪ್ಪೋ ರೆನೋ 13 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ ರೆನೋ 13 ಪ್ರೊ ಮೊಬೈಲ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಒಪ್ಪೋ ರೆನೋ 13 ಸರಣಿಯ ಬೆಲೆ

ಒಪ್ಪೋ ರೆನೋ 13 ಮತ್ತು ಒಪ್ಪೋ ರೆನೋ 13 ಫೋನ್‌ಗಳು ಈಗಾಗಲೇ ಚೀನಾದಲ್ಲಿ ಬಿಡುಗಡೆಯಾಗಿವೆ. ಒಪ್ಪೋ ರೆನೋ 13 ಫೋನನ್ನು 12GB RAM ಮತ್ತು 16GB RAM ನೊಂದಿಗೆ ಒಟ್ಟು 5 ರೂಪಾಂತರಗಳಲ್ಲಿ ಪರಿಚಯಿಸಲಾಗಿದೆ. ಈ ಫೋನಿನ ಆರಂಭಿಕ ಬೆಲೆ 44,190 ರೂ. ಆಗಿದೆ.

ಒಪ್ಪೋ ರೆನೋ 13 ಪ್ರೊ ಫೋನನ್ನು ಚೀನಾದಲ್ಲಿ 12 B RAM ಮತ್ತು 16GB RAM ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು 256GB, 512GB ಮತ್ತು 1 TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಒಪ್ಪೋ ರೆನೋ 13 ಪ್ರೊ ಬೆಲೆ 52,350 ರೂ. ಆಗಿದೆ.

Best Mobiles in India

English summary
OPPO Reno 13 and OPPO Reno 13 Pro launch in india confirmed by brand: Check Expected Price, Specifications and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+