OPPO Reno 13 5G ಲಾಂಚ್; 50MP ಸೆಲ್ಫಿ ಕ್ಯಾಮೆರಾ.. 1TB ಸ್ಟೋರೇಜ್.. ಬೆಲೆ ಇಷ್ಟೆನಾ?
ಒಪ್ಪೋ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಸದ್ದಿಲ್ಲದೆ ಹೊಸ ಒಪ್ಪೋ ರೆನೋ 13 ಸರಣಿಯನ್ನು (Oppo Reno 13 Series) ಬಿಡುಗಡೆ ಮಾಡಿದೆ. ಕಂಪನಿಯು ಒಪ್ಪೋ ರೆನೋ 13 (OPPO Reno 13) ಮತ್ತು ಒಪ್ಪೋ ರೆನೋ 13 ಪ್ರೊ (OPPO Reno 13 Pro) ಎಂಬ ಎರಡು ಫೋನ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಪೈಕಿ ಒಪ್ಪೋ ರೆನೋ 13 ಮೊಬೈಲ್ ತನ್ನ ಸ್ಟೈಲಿಶ್ ಲುಕ್‌ನೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ಒಪ್ಪೋ ರೆನೋ 13 ಫೋನನ್ನು ಒಟ್ಟು ಐದು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆ 44,200 ರೂ. ಆಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಪ್ರೊಸೆಸರ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 6.59 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5600mAh ಬ್ಯಾಟರಿ ಮತ್ತು 80W ಸೂಪರ್ ಫ್ಲ್ಯಾಶ್ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಒಪ್ಪೋ ರೆನೋ 13 ಫೋನಿನ ಬೆಲೆ
* 12GB RAM + 256GB ಸ್ಟೋರೇಜ್ ಬೆಲೆ = 31,400 ರೂ.
* 12GB RAM + 512GB ಸ್ಟೋರೇಜ್ ಬೆಲೆ = 34,880 ರೂ.
* 16GB RAM + 256GB ಸ್ಟೋರೇಜ್ ಬೆಲೆ = 34,880 ರೂ.
* 16GB RAM + 512GB ಸ್ಟೋರೇಜ್ ಬೆಲೆ = 38,370 ರೂ.
* 16GB RAM + 1TB ಸ್ಟೋರೇಜ್ ಬೆಲೆ = 44,190 ರೂ.
ಕಂಪನಿಯು ಒಪ್ಪೋ ರೆನೋ 13 ಫೋನನ್ನು ಚೀನಾದಲ್ಲಿ 12GB RAM ಮತ್ತು 16GB RAM ನೊಂದಿಗೆ ಬಿಡುಗಡೆ ಮಾಡಿದೆ. ಇದು 256GB ಯಿಂದ 1 TB ಸ್ಟೋರೇಜ್ ಹೊಂದಿದೆ. ಈ ಫೋನಿನ ಆರಂಭಿಕ ಬೆಲೆ 31,400 ರೂ. ಆಗಿದೆ. ಭಾರತೀಯ ಕರೆನ್ಸಿ ಪ್ರಕಾರ 44,200 ರೂ. ಇದೆ. ಈ ಮೊಬೈಲ್ ಬಟರ್‌ಫ್ಲೈ ಪರ್ಪಲ್, ಗ್ಯಾಲಕ್ಸಿ ಬ್ಲೂ ಮತ್ತು ಮಿಡ್‌ನೈಟ್ ಬ್ಲಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಒಪ್ಪೋ ರೆನೋ 13 ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ ರೆನೋ 13 ಮೊಬೈಲ್ 6.59 ಇಂಚಿನ 1.5K ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 2760 x 1256 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒಪ್ಪೋ ರೆನೋ 13 ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 8350 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಭಾರತದಲ್ಲಿ ಮೀಡಿಯಾಟೆಕ್ ಡೈಮೆನ್ಸಿಟಿ 8300 ಪ್ರೊಸೆಸರ್‌ನೊಂದಿಗೆ ಪರಿಚಯಿಸಲಾಗುತ್ತದೆ. ಈ ಸ್ಮಾರ್ಟ್‌ಫೋನ್‌ಗಳು ಆಂಡ್ರಾಯ್ಡ್ 15 ಆಧಾರಿತ ColorOS 15 ನೊಂದಿಗೆ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್
ಒಪ್ಪೋ ರೆನೋ 13 ಸ್ಮಾರ್ಟ್‌ಫೋನ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ರೆನೋ 13 ಮೊಬೈಲ್ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಒಪ್ಪೋ ರೆನೋ 13 ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಧೂಳು ಮತ್ತು ನೀರಿನಿಂದ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ವೈ-ಫೈ 6, ಬ್ಲೂಟೂತ್ 5.4 ಮತ್ತು ಸ್ಟೀರಿಯೋ ಸ್ಪೀಕರ್ ಸೇರಿದಂತೆ ಹಲವು ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








