ಅಬ್ಬರಿಸಲು ಬಂತು OPPO Reno 13 ಫೋನ್; 50+50 ಕ್ಯಾಮೆರಾ.. 5600mAh ಬ್ಯಾಟರಿ.. ಬೆಲೆ ಇಷ್ಟೆನಾ?
ಒಪ್ಪೋ ತನ್ನ ಬಹುನಿರೀಕ್ಷಿತ ರೆನೋ 13 (OPPO Reno 13 Series 5G) ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಎರಡು ಹೊಸ ಸೊಗಸಾದ ಮೊಬೈಲ್‌ಗಳು ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹೌದು, ಕಂಪನಿಯು ಒಪ್ಪೋ ರೆನೋ 13 5G (OPPO Reno 13 5G) ಮತ್ತು ಒಪ್ಪೋ ರೆನೋ 13 ಪ್ರೊ 5G (OPPO Reno 13 Pro 5G) ಫೋನ್‌ಗಳನ್ನು ಅಧಿಕೃತವಾಗಿ ಪರಿಚಯಿಸಿದೆ. ಈ ಪೈಕಿ ಒಪ್ಪೋ ರೆನೋ 13 ಅನ್ನು ಮಧ್ಯಮ ಶ್ರೇಣಿಯ ವಿಭಾಗದಲ್ಲಿ ರಿಲೀಸ್ ಆಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒಪ್ಪೋ ರೆನೋ 13 ಸ್ಮಾರ್ಟ್‌ಫೋನ್ 6.59 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8350 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ 5,600mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಸ್ಟೈಲಿಶ್ ಲುಕ್ ಮತ್ತು ಫೀಚರ್ಸ್ ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿದೆ. ಇದರ ಬೆಲೆ ತಿಳಿಯಲು ಮುಂದೆ ಓದಿ.

ಒಪ್ಪೋ ರೆನೋ 13 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ ರೆನೋ 13 5G ಫೋನ್ 6.59 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2,760 x 1,256 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ರೆನೋ 13 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8350 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ ColorOS 15.0 ಜೊತೆಗೆ ಕೆಲಸ ನಿರ್ವಹಿಸುತ್ತದೆ.
ಕ್ಯಾಮೆರಾ ಸೆಟಪ್
ಒಪ್ಪೋ ರೆನೋ 13 5G ಮೊಬೈಲ್ OIS ಮತ್ತು ಎಲ್‌ಇಡಿ ಫ್ಲ್ಯಾಷ್ ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಈ ಮೊಬೈಲ್, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ರೆನೋ 13 5G ಫೋನ್ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಒಪ್ಪೋ ರೆನೋ 13 5G ಬೆಲೆ ಮತ್ತು ಲಭ್ಯತೆ
8GB RAM + 128GB ಸ್ಟೋರೇಜ್ ಬೆಲೆ = 37,999 ರೂ.
8GB RAM + 256GB ಸ್ಟೋರೇಜ್ ಬೆಲೆ = 39,999 ರೂ.
ಒಪ್ಪೋ ರೆನೋ 13 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರ ಬೆಲೆ 37,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ. ಇದೆ. ಈ ಮೊಬೈಲ್ ಜನವರಿ 11 ರಂದು ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.


Click it and Unblock the Notifications








