Home
ಮೊಬೈಲ್

ಭಾರತಕ್ಕೆ OPPO Reno 13 Pro ಗ್ರ್ಯಾಂಡ್​​ ಎಂಟ್ರಿ; 50+50+50MP ಕ್ಯಾಮೆರಾಗಳು.. 512GB ಸ್ಟೋರೇಜ್.. ಬೆಲೆ ಎಷ್ಟು?

ಒಪ್ಪೋ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ಒಪ್ಪೋ ರೆನೋ 13 (OPPO Reno 13 Series 5G) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ಒಪ್ಪೋ ರೆನೋ 13 5G (OPPO Reno 13 5G) ಮತ್ತು ಒಪ್ಪೋ ರೆನೋ 13 ಪ್ರೊ 5G (OPPO Reno 13 Pro 5G) ಫೋನ್‌ಗಳನ್ನು ಅಧಿಕೃತವಾಗಿ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ಒಪ್ಪೋ ರೆನೋ 13 ಪ್ರೊ 5G ಸ್ಮಾರ್ಟ್‌ಫೋನ್‌ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಒಪ್ಪೋ ರೆನೋ 13 ಪ್ರೊ ಸ್ಮಾರ್ಟ್‌ಫೋನ್‌ 6.83 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 8350 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50+50+50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್‌ ಲಭ್ಯವಿದೆ. ಜೊತೆಗೆ 12GB RAM + 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಭಾರತದಲ್ಲಿ OPPO Reno 13 Pro ಲಾಂಚ್; ರಾಶಿ ರಾಶಿ ಫೀಚರ್ಸ್‌.. ಬೆಲೆ ಎಷ್ಟು?

ಒಪ್ಪೋ ರೆನೋ 13 5G ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ ರೆನೋ 13 ಪ್ರೊ 5G ಮೊಬೈಲ್ 6.83 ಇಂಚಿನ 1.5K ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 1200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಒಪ್ಪೋ ರೆನೋ 13 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್‌ ಡೈಮೆನ್ಸಿಟಿ 8350 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ColorOS 15.0 ಜೊತೆಗೆ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ಒಪ್ಪೋ ರೆನೋ 13 ಪ್ರೊ 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒಪ್ಪೋ ರೆನೋ 13 ಪ್ರೊ 5G ಮೊಬೈಲ್ 5,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಒಪ್ಪೋ ರೆನೋ 13 ಪ್ರೊ ಬೆಲೆ ಮತ್ತು ಲಭ್ಯತೆ

12GB RAM + 256GB ಸ್ಟೋರೇಜ್ ಬೆಲೆ = 49,999 ರೂ.
12GB RAM + 512GB ಸ್ಟೋರೇಜ್ ಬೆಲೆ = 54,999 ರೂ.

ಒಪ್ಪೋ ರೆನೋ 13 5G ಫೋನನ್ನು ಎರಡು ಸ್ಟೋರೇಜ್‌ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರ ಬೆಲೆ 49,999 ರೂ. ಆಗಿದೆ. 12GB RAM + 512GB ಸ್ಟೋರೇಜ್ ಆಯ್ಕೆಯನ್ನು 54,999 ರೂ.ಗೆ ಪರಿಚಯಿಸಲಾಗಿದೆ. ಈ ಮೊಬೈಲ್ ಜನವರಿ 11 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು ಮಿಸ್ಟ್ ಲ್ಯಾವೆಂಡರ್ ಮತ್ತು ಗ್ರ್ಯಾಫೈಟ್ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು.

Best Mobiles in India

English summary
OPPO Reno13 Pro With Dimensity 8350 SoC Launched in India: Check price, specifications here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+