ಪೊಕೊ C3 ಸ್ಮಾರ್ಟ್‌ಫೋನ್ ವಿಮರ್ಶೆ: ಅಗ್ಗದ ಬೆಲೆಯಲ್ಲಿ ಆಕರ್ಷಕ ಫೋನ್!

|

ಪೊಕೊ ಮೊಬೈಲ್ ತಯಾರಿಕಾ ಕಂಪನಿಯು ಅಗ್ಗದ ಬೆಲೆಯಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಪೊಕೊ C3 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ತನ್ನ ವರ್ಗದಲ್ಲಿಯೇ ಇತರೆ ಫೋನ್‌ಗಳಿಗೆ ಪೈಪೋಟಿ ನೀಡುವ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಪೊಕೊ

ಹೌದು, ಪೊಕೊ ಕಂಪೆನಿಯ ಪೊಕೊ C3 ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದ್ದು, ಅವುಗಳು ಕ್ರಮವಾಗಿ 3GB + 32GB ಹಾಗೂ 4GB + 64GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಪೊಕೊ C3 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌

ಡಿಸ್‌ಪ್ಲೇ ಡಿಸೈನ್‌

ಪೊಕೊ C3 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ವಾಟರ್‌ ಸ್ಟೈಲ್‌ ನಾಚ್‌ ರಚನೆಯ ಈ ಡಿಸ್‌ಪ್ಲೇಯು 269 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ಎನ್ನಬಹುದಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಪೊಕೊ C3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 3GB + 32GB ಹಾಗೂ 4GB + 64GB ಸ್ಟೋರೇಜ್‌ ಸಾಮರ್ಥ್ಯವನ್ನು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ. ಅಧಿಕ ಸ್ಟೋರೇಜ್‌ಗಾಗಿ ಹೆಚ್ಚುವರಿ ಮೆಮೊರಿ ವಿಸ್ತರಿಸುವ ಆಯ್ಕೆ ಪ್ಲಸ್‌ ಪಾಯಿಂಟ್ ಅನಿಸಲಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಪೊಕೊ C3 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್ಲಾಕ್ ಬೆಂಬಲಿಸುವ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಉತ್ತಮ ಎಡಿಟಿಂಗ್ ಆಯ್ಕೆಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ C3 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v.5, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ. ತನ್ನ ವರ್ಗದಲ್ಲಿಯೇ ಅತ್ಯುತ್ತಮ ಬ್ಯಾಟರಿ ಇದಾಗಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಪೊಕೊ C3 ಸ್ಮಾರ್ಟ್‌ಫೋನ್‌ 3GB + 32GB ಸ್ಟೋರೇಜ್‌ ವೇರಿಯಂಟ್‌ ದರವು 7,499 ರೂ ಆಗಿದೆ ಹಾಗೂ 4GB + 64GB ವೇರಿಯಂಟ್‌ ಬೆಲೆಯು 8,999ರೂ. ಪ್ರೈಸ್‌ಟ್ಯಾಗ್‌ ಹೊಂದಿದೆ. ಆರ್ಟಿಕಲ್ ಬ್ಲೂ, ಲಿಮ್ ಗ್ರೀನ್, ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
The Poco C3 has a matte-textured rear surface. However, it has a gradient finish and a dual-tone design.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X