ಜಸ್ಟ್ 7,999 ರೂ.! 50MP ಕ್ಯಾಮೆರಾ.. 5160mAh ಬ್ಯಾಟರಿ.. ಹೊಸ POCO C75 ಫೋನ್ ಲಾಂಚ್
ಪೊಕೊ ಅಭಿಮಾನಿಗಳ ಕಾಯುವಿಕೆ ಮುಗಿಯಿತು! ಮತ್ತೊಂದು ಹೊಸ ಪೊಕೊ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಕಂಪನಿಯು ಪೊಕೊ C75 5G (POCO C75 5G) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸಲಾಗಿದೆ. ನೀವು, 10 ಸಾವಿರ ರೂ.ಗಿಂತಲೂ ಕಡಿಮೆ ಬಜೆಟ್‌ನಲ್ಲಿ ಈ 5G ಸ್ಮಾರ್ಟ್‌ಫೋನ್ ಖರೀದಿಸಬಹುದು. ಬನ್ನಿ, ಹೊಸ ಪೊಕೊ C75 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ C75 5G ಫೋನ್ ಭಾರತದ ಅತ್ಯಂತ ಕೈಗೆಟುಕುವ 5G ಸ್ಮಾರ್ಟ್‌ಫೋನ್ ಆಗಿದೆ. ಇದನ್ನು 4GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.68 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5160mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಪೊಕೊ C75 5G ಬೆಲೆ ಮತ್ತು ಲಭ್ಯತೆ
ಪೊಕೊ C75 5G ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವನ್ನು ಕೇವಲ 7,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ ಡಿಸೆಂಬರ್ 19 ರಂದು ಮಧ್ಯಾಹ್ನ 12 ಗಂಟೆಗೆ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮತ್ತು ಇ ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ.
ಪೊಕೊ C75 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಪೊಕೊ C75 5G ಸ್ಮಾರ್ಟ್‌ಫೋನ್ 6.68 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಹೆಚ್‌ಡಿ ಪ್ಲಸ್ ವಾಟರ್‌ಡ್ರಾಪ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 600 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಹೊಸ ಪೊಕೊ C75 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಿರುವ ಆಕ್ಟಾಕೋರ್ ಪ್ರೊಸೆಸರ್ ಆಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ. ಇದು ಆಂಡ್ರಾಯ್ಡ್ 16 ಬೆಂಬಲ ಸಹ ಬೆಂಬಲ ಹೊಂದಿದೆ.
ಸ್ಟೋರೇಜ್ ಆಯ್ಕೆ
ಪೊಕೊ C75 5G ಮೊಬೈಲ್ 4GB RAM ನೊಂದಿಗೆ ಬಿಡುಗಡೆಯಾಗಿದೆ. ಇದರೊಂದಿಗೆ 4GB RAM ಬೂಸ್ಟ್ ತಂತ್ರಜ್ಞಾನ ಲಭ್ಯವಿದೆ. ನೀವು, 4GB ಭೌತಿಕ RAM ಮತ್ತು 4GB ವರ್ಚುವಲ್ RAM ಮೂಲಕ 8GB RAM ಬಳಸಬಹುದು. ಈ ಫೋನ್ 64GB ಮತ್ತು 128GB ಸ್ಟೋರೇಜ್ ಆಯ್ಕೆ ಹೊಂದಿದೆ.

ಕ್ಯಾಮೆರಾ ಸೆಟಪ್
ಪೊಕೊ C75 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಪೊಕೊ C75 5G ಫೋನನ್ನು 5000mAh ಸಾಮರ್ಥ್ಯಕ್ಕಿಂತ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಾಗಿದೆ. ಮಾಹಿತಿಯ ಪ್ರಕಾರ, ಇದು 5160mAh ಬ್ಯಾಟರಿ ಹೊಂದಿರುತ್ತದೆ. ಇದನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರ ವೈಶಿಷ್ಟ್ಯಗಳು
ಪೊಕೊ C75 5G ಮೊಬೈಲ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಸಹ ಹೊಂದಿದೆ. ಜೊತೆಗೆ 3.5 ಎಂಎಂ ಆಡಿಯೊ ಜಾಕ್, ವೈಫೈ, ಬ್ಲೂಟೂತ್ V5, ಡ್ಯುಯಲ್ ಸಿಮ್ ಬೆಂಬಲ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








