Poco: ಪೊಕೊದ ಈ ಫೋನ್‌ಗೆ 56% ರಿಯಾಯಿತಿ: 128GB ಸ್ಟೋರೇಜ್.. ಡ್ಯುಯಲ್ ಕ್ಯಾಮೆರಾ
ಪೊಕೊ ಫೋನ್‌ಗಳು (Poco phone) ಹಿಂದೆಂದಿಗಿಂತಲೂ ಈಗ ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಈ ಸ್ಮಾರ್ಟ್‌ಫೋನ್‌ಗಳ ವಿಶೇಷ ಫೀಚರ್ಸ್ ಬಳಕೆದಾರರಿಗೆ ವಿಶೇಷ ಅನುಭವ ನೀಡುತ್ತಿದ್ದು, ಈ ಬೆಳವಣಿಗೆ ನಡುವೆ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಪೊಕೊದ ಆಕರ್ಷಕ ಫೋನ್‌ವೊಂದಕ್ಕೆ ಭರ್ಜರಿ ಆಫರ್ ನೀಡಲಾಗಿದೆ.
ಹೌದು, ಪೊಕೊ F1 ಸ್ಮಾರ್ಟ್‌ಫೋನ್‌ಗೆ (Poco F1 smartphone) ಇದೀಗ ಭಾರೀ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆಯುವ ಮೂಲಕ ಉತ್ತಮ ಎನಿಸಿದೆ. ಹಾಗಿದ್ರೆ, ಈ ವಿಶೇಷ ಸ್ಮಾರ್ಟ್‌ಫೋನ್ ಪ್ರಮುಖ ಫೀಚರ್ಸ್ ಹಾಗೂ ಡಿಸ್ಕೌಂಟ್ ಎಷ್ಟಿದೆ ಜೊತೆಗೆ ಬ್ಯಾಂಕ್ ಆಫರ್ ಏನು ಅನ್ನೋ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಪೊಕೊ F1 ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 24,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು 10,999 ರೂ.ಗಳ ಆಫರ್ ಬೆಲೆಗೆ ಈ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಅಮೆಜಾನ್ (Amazon) 56% ರಿಯಾಯಿತಿ ಘೋಷಣೆ ಮಾಡಿದೆ. ಇಷ್ಟೇ ಅಲ್ಲದೆ ವಿನಿಮಯ ಆಫರ್ ಹಾಗೂ ಬ್ಯಾಂಕ್ ಆಫರ್ ಮೂಲಕ ಖರೀದಿ ಮಾಡಿದ್ರೆ ಇನ್ನೂ ಕಡಿಮೆ ಬೆಲೆಯಲ್ಲಿ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ.
ಬ್ಯಾಂಕ್ ಆಫರ್‌ನಲ್ಲಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ನಲ್ಲಿ ಹೆಚ್ಚುವರಿ 500 ರೂ.ಗಳ ತ್ವರಿತ ರಿಯಾಯಿತಿ, ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 250 ರೂ.ಗಳ ತ್ವರಿತ ರಿಯಾಯಿತಿ ಸೇರಿದಂತೆ ನೀವು ವಿವಿಧ ರೀತಿಯಲ್ಲಿ ಈ ಫೋನ್ ಮೇಲೆ ಆಫರ್ ಪಡೆದುಕೊಳ್ಳಬಹುದು. ಜೊತೆಗೆ ಕ್ಯಾಶ್ ಬ್ಯಾಕ್ ಆಫರ್ ಆಯ್ಕೆ ಸಹ ಇದ್ದು, ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ.

ಪೊಕೊ F1 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.18 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 1080 x 2246 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 18.7:9 ಆಕಾರ ಅನುಪಾತ, 403 ppi ಸಾಂದ್ರತೆಯೊಂದಿಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಪಡೆದುಕೊಂಡಿದೆ. ಈ ಮೂಲಕ ವಿಡಿಯೋ ವೀಕ್ಷಣೆಯಲ್ಲಿ ಹಾಗೂ ಗೇಮಿಂಗ್ ಆಡುವಾಗ ಅತ್ಯುತ್ತಮ ಅನುಭವ ಪಡೆದುಕೊಳ್ಳಬಹುದು.
ಪೊಕೊ F1 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 845 ಪ್ರೊಸೆಸರ್‌ನಲ್ಲಿ ರನ್ ಆಗಲಿದ್ದು, ಈ ಸಿಪಿಯು ಆಕ್ಟಾ-ಕೋರ್ (4x2.8 GHz ಕ್ರಿಯೋ 385 ಚಿನ್ನ ಮತ್ತು 4x1.8 GHz ಕ್ರಿಯೋ 385 ಶಕ್ತಿ ಪಡೆದುಕೊಂಡಿದೆ. ಇದರೊಂದಿಗೆ ಆಂಡ್ರಾಯ್ಡ್ 8.1 (ಓರಿಯೊ), ಆಂಡ್ರಾಯ್ಡ್ 10 ಅನ್ನು ಈ ಫೋನ್ ರನ್ ಮಾಡಲಿದೆ. ಜೊತೆಗೆ ಅಡ್ರಿನೊ 630 ಜಿಪಿಯು ಬಲ ಗೇಮಿಂಗ್‌ನಲ್ಲಿ ಉತ್ತಮ ಅನುಭವ ನೀಡಲಿದೆ. ಉಳಿದಂತೆ ಈ ಫೋನ್ 6GB RAM ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ.
ಪೊಕೊ F1 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 12 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಆಯ್ಕೆ ಪಡೆದಿದ್ದು, ಈ ಸೆನ್ಸರ್‌ಗಳು ಡ್ಯುಯಲ್ ಎಲ್ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಪಡೆದಿವೆ. ಇದರೊಂದಿಗೆ 20 ಮೆಗಾಪಿಕ್ಸೆಲ್‌ನ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಪೊಕೊ F1 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 18W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, ಜಿಪಿಎಸ್ ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಪಡೆದಿದೆ.


Click it and Unblock the Notifications








