Home
ಮೊಬೈಲ್

ಪೊಕೊ F3 GT ಫಸ್ಟ್‌ ಲುಕ್: ಮೀಡ್‌ರೇಂಜ್‌ ಬೆಲೆಗೆ ಜಬರ್ದಸ್ತ್ ಗೇಮಿಂಗ್ ಫೋನ್!

ಜನಪ್ರಿಯ ಪೊಕೊ ಬ್ರ್ಯಾಂಡ್‌ ಈಗಾಗಲೇ ಕೆಲವು ಮಾಡೆಲ್‌ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಅನಿಸಿಕೊಂಡಿದೆ. ಸಂಸ್ಥೆಯು ಇದೀಗ ನೂತನವಾಗಿ ಬಿಡುಗಡೆ ಮಾಡಿರುವ ಪೊಕೊ F3 GT ಸ್ಮಾರ್ಟ್‌ಫೋನ್‌ ಗೇಮಿಂಗ್ ಪ್ರಿಯರನ್ನು ಸೆರಿದಂತೆ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಅಟ್ರ್ಯಾಕ್ಟ್‌

ಹೌದು, ಪೊಕೊ ಕಂಪೆನಿ ತನ್ನ ಬಹುನಿರೀಕ್ಷಿತ ಪೊಕೊ F3 GT ಸ್ಮಾರ್ಟ್‌ಫೋನ್‌ ಹೈ ಎಂಡ್‌ ಫೀಚರ್ಸ್‌ಗಳಿಂದ ಅಟ್ರ್ಯಾಕ್ಟ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,065mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಹೈಲೈಟ್‌ ಆಗಿದೆ. ಇನ್ನುಳಿದಂತೆ ಪೊಕೊ F3 GT ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಮತ್ತು ಅವುಗಳ ಕಾರ್ಯವೈಖರಿ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ F3 GT ಸ್ಮಾರ್ಟ್‌ಫೋನ್‌ 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10+ ಬೆಂಬಲ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 480 ಹೆಚ್ ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದುಕೊಂಡಿದೆ. ಡಿಸಿ ಡಿಮ್ಮಿಂಗ್‌ಗೆ ಬೆಂಬಲಿಸಲಿದೆ. ಹೈ ಎಂಡ್ ಮಾದರಿಯ ಡಿಸ್‌ಪ್ಲೇ ಇದಾಗಿದ್ದು, ಆಕರ್ಷಕ ಎನಿಸಲಿದೆ.

ಪ್ರೊಸೆಸರ್‌ ಕಾರ್ಯವೈಖರಿ

ಪ್ರೊಸೆಸರ್‌ ಕಾರ್ಯವೈಖರಿ

ಪೊಕೊ F3 GT ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 6GB RAM + 128GB, 8GB RAM+ 128GB ಮತ್ತು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಸಂಪೂರ್ಣ ವೇಗದ ಟಚ್ ಪಡೆದಿದೆ. ಗ್ರಾಹಕರಿಗೆ ತಡೆ ರಹಿತ ಗೇಮಿಂಗ್ ಅನುಭವ ನೀಡಲಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷ

ಟ್ರಿಪಲ್ ಕ್ಯಾಮೆರಾ ವಿಶೇಷ

ಪೊಕೊ F3 GT ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ (119 ಡಿಗ್ರಿ ಫೀಲ್ಡ್-ಆಫ್-ವ್ಯೂ), ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಮುಖ್ಯ ಸೆನ್ಸಾರ್‌ ಅನ್ನು ಇಡಿ (ಹೆಚ್ಚುವರಿ-ಕಡಿಮೆ ಪ್ರಸರಣ) ಗಾಜಿನಿಂದ ತಯಾರಿಸಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಡಿಎಸ್‌ಎಲ್‌ಆರ್ ಮಸೂರಗಳಲ್ಲಿ ಚಿತ್ರಗಳ ಉತ್ತಮ ಸ್ಪಷ್ಟತೆಗಾಗಿ ಬಳಸಲಾಗುತ್ತದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಕ್ವಾಡ್‌ ಕ್ಯಾಮೆರಾ ರಚನೆಯನ್ನು ನೀಡಬಹುದಾಗಿತ್ತು ಎನಿಸುತ್ತದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಪೊಕೊ F3 GT ಸ್ಮಾರ್ಟ್‌ಫೋನ್‌ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕೇವಲ 15 ನಿಮಿಷಗಳಲ್ಲಿ ಫೋನ್ ಅರ್ಧದಾರಿಯಲ್ಲೇ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ. ಇದು ಐಪಿ 53 ರೇಟ್ ಆಗಿದೆ ಮತ್ತು ಗೇಮಿಂಗ್ ಮಾಡುವಾಗ ಉತ್ತಮ ಧ್ವನಿ ಗುಣಮಟ್ಟಕ್ಕಾಗಿ ಮೂರು ಮೈಕ್ರೊಫೋನ್ಗಳನ್ನು ಸಂಯೋಜಿಸುತ್ತದೆ. ಇದು ವೈ-ಫೈ ಗೇಮಿಂಗ್ ಆಂಟೆನಾ, ನಿಖರವಾದ ಹ್ಯಾಪ್ಟಿಕ್ ಪ್ರತಿಕ್ರಿಯೆ ಮತ್ತು ಕಂಪನದೊಂದಿಗೆ ಎಕ್ಸ್-ಶಾಕರ್ಸ್, ಜಿಟಿ ಸ್ವಿಚ್ ಮತ್ತು ಮ್ಯಾಗ್ಲೆವ್ ಪ್ರಚೋದಕಗಳನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪೊಕೊ F3 GT ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಸ್ಟೋರೇಜ್ ಆಯ್ಕೆಗೆ 26,999 ರೂ, ಹಾಗೂ 8GB RAM+ 128GB ಸ್ಟೋರೇಜ್ ಆಯ್ಕೆಗೆ 28,999,ರೂ ಬೆಲೆಯನ್ನು ಹೊಂದಿದೆ. ಇನ್ನು 8GB RAM + 256GB ಸಂಗ್ರಹದ ಬೆಲೆ 30,999 ರೂ. ಹೊಂದಿದೆ.

Best Mobiles in India

English summary
Poco F3 GT First Look: Powerful Gaming Smartphone At Mid Range Price Tag.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+