ಪೊಕೊ F4 5G ಫೋನ್ ವಿಮರ್ಶೆ: ನೀವು ಬಯಸುವ ಎಲ್ಲವನ್ನು ಇದು ಒಳಗೊಂಡಿದೆ!

|

ಪೊಕೊ ಮೊಬೈಲ್ ತಯಾರಿಕಾ ಕಂಪನಿಯು ಅಗ್ಗದ ಬೆಲೆಯಿಂದ ಮೀಡ್‌ರೇಂಜ್‌ ವರೆಗೂ ಸ್ಮಾರ್ಟ್‌ಫೋನ್ ಶ್ರೇಣಿಯ ಆಯ್ಕೆ ಹೊಂದಿದೆ. ಪೊಕೊ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಪೊಕೊ F4 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಮೀಡ್‌ರೇಂಜ್‌ ವರ್ಗದಲ್ಲಿಯೇ ಇತರೆ ಫೋನ್‌ಗಳಿಗೆ ಪೈಪೋಟಿ ನೀಡುವ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಕ್ರಮವಾಗಿ

ಹೌದು, ಪೊಕೊ ಕಂಪೆನಿಯ ಪೊಕೊ F4 5G ಸ್ಮಾರ್ಟ್‌ಫೋನ್‌ ಮೂರು ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದ್ದು, ಅವುಗಳು ಕ್ರಮವಾಗಿ 6GB RAM + 128GB, 8GB + 128GB ಮತ್ತು 12GB + 256GB ವೇರಿಯಂಟ್‌ ಆಗಿವೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ಸಪೋರ್ಟ್‌ ಇದೆ.

ನೆಟ್‌ಫ್ಲಿಕ್ಸ್‌ನಲ್ಲಿ

ಪೊಕೊ F4 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಸೆಲ್ಫಿ ಕ್ಯಾಮೆರಾವು 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದು ಅಮೆಜಾನ್‌ ಪ್ರೈಮ್‌ ವೀಡಿಯೊದಲ್ಲಿ HDR10 ಪ್ಲಸ್‌ ಹಾಗೂ ನೆಟ್‌ಫ್ಲಿಕ್ಸ್‌ನಲ್ಲಿ ಡಾಲ್ಬಿ ವಿಷನ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಪೊಕೊ F4 5G ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ F4 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ HD+ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಡಿಸ್‌ಪ್ಲೇ DCI-P3 ಬಣ್ಣದ ಹರವು ಸಹ ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 360Hz ಸ್ಪರ್ಶ ಮಾದರಿ ದರದೊಂದಿಗೆ 5000000:1 ಕಾಂಟ್ರಾಸ್ಟ್ ಅನುಪಾತದೊಂದಿಗೆ 1300nits ಗರಿಷ್ಠ ಹೊಳಪನ್ನು ನೀಡುತ್ತದೆ. ಇದಲ್ಲದೆ ಅಮೇಜಾನ್‌ ಪ್ರೈಮ್‌ ವೀಡಿಯೊದಲ್ಲಿ HDR10+ , ನೆಟ್‌ಫ್ಲಿಕ್ಸ್‌ ನಲ್ಲಿ ಡಾಲ್ಬಿ ವಿಷನ್‌ ಬೆಂಬಲವನ್ನು ಹೊಂದಿದೆ. ಹೆಚ್ಚುವರಿಯಾಗಿ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಒಟ್ಟಾರೇ ಇದರ ಡಿಸ್‌ಪ್ಲೇಯು ಈ ವರ್ಗದಲ್ಲಿ ಇತರೆ ಬ್ರ್ಯಾಂಡ್‌ಗಳಿಗೆ ಟಾಂಗ್ ಕೊಡುವಂತಿದೆ ಎನ್ನಬಹುದು.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಪೊಕೊ F4 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಮಾಲಿ-G610 MC6 GPU ಸಪೋರ್ಟ್‌ ಅನ್ನು ಪಡೆದಿದೆ. ಅಲ್ಲದೆ ಫೋರ್‌ ಕಾರ್ಟೆಕ್ಸ್-A78 ಕೋರ್‌ಗಳನ್ನು ಒಳಗೊಂಡಿದೆ. ಹಾಗೆಯೇ 6GB RAM + 128GB ಮತ್ತು 8GB + 128GB ಹಾಗೂ 12GB + 256GB ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಆದರೆ, ಪೊಕೊ F4 5G ಸ್ಮಾರ್ಟ್‌ಫೋನ್‌ ಎಸ್‌ಡಿ ಕಾರ್ಡ್‌ ಸೌಲಭ್ಯವನ್ನು ಪಡೆದಿಲ್ಲ. ಈ ವಿಭಾಗದಲ್ಲಿ ಇದು ನಕಾರಾತ್ಮಕ ಅಂಶವಾಗಿ ಕಂಡಬರುತ್ತದೆ.

ಕ್ಯಾಮೆರಾ ಸೆನ್ಸಾರ್ ಹೇಗಿದೆ?

ಕ್ಯಾಮೆರಾ ಸೆನ್ಸಾರ್ ಹೇಗಿದೆ?

ಪೊಕೊ F4 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ f/1.8 ಲೆನ್ಸ್‌ನೊಂದಿಗೆ ಬರುತ್ತದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿರುವ ಕ್ಯಾಮೆರಾಗಳು ನೈಟ್ ಮೋಡ್, AI ಸ್ಕೈಸ್ಕೇಪಿಂಗ್ 4.0 ಮತ್ತು AI ಎರೇಸ್ 2.0 ನಂತಹ ಫೀಚರ್ಸ್‌ಗಳನ್ನು ಒಳಗೊಂಡಿವೆ. ಜೊತೆಗೆ ಎಲ್ಇಡಿ ಫ್ಲ್ಯಾಷ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್‌ ಕೂಡ ಸೇರಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಪೊಕೊ F4 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಕೇವಲ 38 ನಿಮಿಷಗಳಲ್ಲಿ 0% to 100% ಚಾರ್ಜ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್‌ ಅನ್ನು ಒಳಗೊಂಡಿವೆ. ಜೊತೆಗೆ ಈ ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಅನ್ನು ಕೂಡ ಹೊಂದಿದೆ. ಇನ್ನು ಈ ಫೋನ್‌ ಸ್ಟಿರಿಯೊ ಸ್ಪೀಕರ್‌ಗಳೊಂದಿಗೆ ಬರುತ್ತದೆ. ಇದು ಡಾಲ್ಬಿ ಅಟ್ಮೋಸ್‌ ಮತ್ತು ಹೈ-ರೆಸ್ ಆಡಿಯೊ ಬೆಂಬಲವನ್ನು ಹೊಂದಿದೆ. ಸೌಂಡ್‌ ಕ್ಯಾನ್ಸಲೇಶನ್‌ಗಾಗಿ ಎರಡು ಮೈಕ್ರೊಫೋನ್‌ಗಳನ್ನು ಸಹ ನೀಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಪೊಕೊ F4 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 27,999ರೂ. ಆಗಿದೆ. ಇನ್ನು 8GB + 128GB ಮಾದರಿಯ ಆಯ್ಕೆಯ ಬೆಲೆ 29,999ರೂ. ಹೊಂದಿದೆ. ಇದಲ್ಲದೆ ಇದರ ಟಾಪ್-ಆಫ್-ಲೈನ್ 12GB + 256GB ಆಯ್ಕೆಯ ಬೆಲೆ 33,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್‌ ನೆಬ್ಯುಲಾ ಗ್ರೀನ್ ಮತ್ತು ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಕೊನೆಯ ಮಾತು

ಕೊನೆಯ ಮಾತು

ಪೊಕೊ F4 5G ಸ್ಮಾರ್ಟ್‌ಫೋನ್‌ ಅತ್ಯುತ್ತಮ ಡಿಸ್‌ಪ್ಲೇ, ಹೈ ಎಂಡ್ ಕ್ಯಾಮೆರಾ, ಬಿಗ್ ಬ್ಯಾಟರಿ ಇಂತಹ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಮೀಡ್‌ರೇಂಜ್‌ ವಿಭಾಗದಲ್ಲಿ ಈ ಫೋನ್ ಖರೀದಿಸುವ ಗ್ರಾಹಕರನ್ನು ಸೆಳೆಯುವಂತಹ ಡಿವೈಸ್‌ ಎನ್ನಬಹುದಾಗಿದೆ. ಅದಾಗ್ಯೂ, ಈ ಫೋನ್‌ ಸರಳ ರಚನೆಯ ನೋಟವನ್ನು ಪಡೆದಿದ್ದು, ಅಲ್ಲದೇ ಬ್ಯಾಟರಿ ಸಾಮರ್ಥ್ಯವನ್ನು 5,000mAh ನೀಡಿದ್ದರೆ ಇನ್ನಷ್ಟು ಆಕರ್ಷಕ ಎನಿಸುತ್ತಿತ್ತು.

Best Mobiles in India

English summary
POCO F4 5G Review: all Rounder Phone at Mid Range Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X