ಪೊಕೊ M2 ಮತ್ತು ರಿಯಲ್‌ಮಿ 7i: ಭಿನ್ನತೆಗಳು ಏನು?..ಖರೀದಿಗೆ ಯಾವುದು ಬೆಸ್ಟ್?
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ರಿಯಲ್ ಮಿ 7i ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿರುವುದು ಹೈಲೈಟ್ ಆಗಿ ಕಾಣಿಸಿಕೊಂಡಿದೆ. ಹೆಚ್ಚು ಕಡಿಮೆ ಅದೇ ಪ್ರೈಸ್‌ಟ್ಯಾಗ್‌ನ ರೇಂಜ್‌ನಲ್ಲಿ ಪೊಕೊ M2 ಸ್ಮಾರ್ಟ್‌ಫೋನ್ ಸಹ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಇವೆರಡರಲ್ಲಿ ಯಾವುದು ಬೆಸ್ಟ್?

ಹೌದು, ರಿಯಲ್ ಮಿ ಸಂಸ್ಥೆಯ ನೂತನ ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಹಾಗೂ ಪೊಕೊ M2 ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಬೆಸ್ಟ್ ಅನಿಸುವಂತಹ ಫೀಚರ್ಸ್‌ಗಳನ್ನು ಪಡೆದಿವೆ. ಈ ಎರಡು ಫೋನ್‌ಗಳ ಪ್ರೈಸ್‌ಟ್ಯಾಗ್‌ನಲ್ಲಿ ಹೆಚ್ಚಿನ ಭಿನ್ನತೆ ಕಾಣಿಸದಿದ್ದರೂ, ಫೀಚರ್ಸ್‌ಗಳ ದೃಷ್ಠಿಯಿಂದ ಕೆಲವು ಭಿನ್ನತೆಗಳು ಇವೆ. ಹಾಗೆಯೇ ಕೆಲವು ಫೀಚರ್ಸ್‌ಗಳು ಸಾಮ್ಯತೆ ಹೊಂದಿವೆ. ಹಾಗಾದರೇ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್ ಫೀಚರ್ಸ್ ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಸ್ಕ್ರೀನ್ ರೀಫ್ರೇಶ್ ರೇಟ್ 90Hz ಆಗಿದೆ. ಇದರೊಂದಿಗೆ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಅದೇ ರೀತಿ ಪೊಕೊ M2 ಸ್ಮಾರ್ಟ್‌ಪೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದ್ದು, 60 Hz ರೀಫ್ರೇಶ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಅದೇ ರೀತಿ ಪೊಕೊ M2 ಸ್ಮಾರ್ಟ್‌ಪೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿದೆ. 6GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ಸ್ಪೆಷಲ್
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದ್ದು, ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಪೊಕೊ M2 ಸ್ಮಾರ್ಟ್‌ಪೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಸಾಮರ್ಥ್ಯ
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಮೈಕ್ರೋ-USB ಪೋರ್ಟ್, ಬ್ಲೂಟೂತ್ v5.0 ಸೌಲಭ್ಯಗಳನ್ನು ಒಳಗೊಂಡಿದೆ. ಹಾಗೆಯೇ ಪೊಕೊ M2 ಸ್ಮಾರ್ಟ್‌ಪೋನ್ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಬೆಲೆಯು 11,999 ರೂ. ಆಗಿದೆ. 4GB + 128GB ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಇನ್ನು ಭಾರತದಲ್ಲಿ ಪೊಕೊ M2 ಸ್ಮಾರ್ಟ್‌ಪೋನ್ 6GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಬೆಲೆಯು 10,999ರೂ. ಆಗಿದೆ. ಹಾಗೂ 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 12,499ರೂ. ಆಗಿದೆ.


Click it and Unblock the Notifications








