Just In
Don't Miss
- News
'ವಂಶ ರಾಜಕೀಯ ಕೊನೆಗೊಳಿಸಲು ಇದು ಸಮಯ'- ಪ್ರಧಾನಿ ನರೇಂದ್ರ ಮೋದಿ
- Automobiles
ದೇಶದಲ್ಲಿನ ಅಪಘಾತಗಳಿಗೆ ಸಂಬಂಧಿಸಿ ಆಘಾತಕಾರಿ ಅಂಕಿಅಂಶ ಬಹಿರಂಗ
- Sports
RCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ
- Movies
ಶವವಾಗಿ ಪತ್ತೆಯಾದ ಮಾಡೆಲ್ ಬಿದಿಶಾ: ಕೊಲೆಯೊ? ಆತ್ಮಹತ್ಯೆಯೊ?
- Finance
ಜೂನ್ 1ರಿಂದ ಎಲ್ಲಾ ರೀತಿಯ ಚಿನ್ನದ ಮೇಲೆ ಹಾಲ್ಮಾರ್ಕ್: ಇಲ್ಲಿದೆ ಪ್ರಮುಖ ಮಾಹಿತಿ
- Lifestyle
ಮಕ್ಕಳು ತುಂಬಾ ಹಠ ಮಾಡುತ್ತಿದ್ದರೆ ಅದು ಒಳ್ಳೆಯದೇ ಗೊತ್ತಾ? ಹೇಗೆ?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೊಕೊ M4 ಪ್ರೊ ಫಸ್ಟ್ ಲುಕ್: ಬಜೆಟ್ ದರದಲ್ಲಿ ಆಕರ್ಷಕ ಸ್ಮಾರ್ಟ್‌ಫೋನ್!
ಜನಪ್ರಿಯ ಪೊಕೊ ಬ್ರ್ಯಾಂಡ್ ಈಗಾಗಲೇ ಕೆಲವು ಮಾಡೆಲ್ ಸ್ಮಾರ್ಟ್‌ಫೋನ್ ಪರಿಚಯಿಸಿ ಸೈ ಅನಿಸಿಕೊಂಡಿದೆ. ಸಂಸ್ಥೆಯು ಇದೀಗ ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G96 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ಹೌದು, ಪೊಕೊ ಸಂಸ್ಥೆ ತನ್ನ ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G96 SoC ಪ್ರೊಸೆಸರ್ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 6GB + 64GB, 6GB + 128GB ಮತ್ತು 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ರಚನೆ ಇದ್ದು, ಸ್ಕ್ರೀನ್ 90Hz ರೀಫ್ರೇಶ್ ರೇಟ್ ಪಡೆದಿದೆ. ಹಾಗಾದರೇ ಪೊಕೊ M4 ಪ್ರೊ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಕಾರ್ಯ ವೈಖರಿ ಹೇಗಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD + ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು DCI-P3 ವೈಡ್ ಕಲರ್ ಗ್ಯಾಮಟ್ ಅನ್ನು ಸಹ ಹೊಂದಿದೆ. ಈ ಫೋನ್ 1000 nits ಗರಿಷ್ಠ ಹೊಳಪು ಹೊಂದಿರುವ AMOLED ಡಿಸ್ಪ್ಲೇ ಆಗಿದೆ. ಇದರ ಸುತ್ತಳತೆಯು 159.87 x 73.87 x 8.09mm ಆಗಿದೆ. ಸ್ಕ್ರೀನ್ ಸ್ಕ್ರೋಲಿಂಗ್ ಉತ್ತಮವಾಗಿದೆ.

ಪ್ರೊಸೆಸರ್ ಪವರ್ ಯಾವುದು
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G96 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಅನ್ನು ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB + 64GB, 6GB + 128GB ಮತ್ತು 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಅಂತರ್ನಿರ್ಮಿತ RAM ಅನ್ನು ವಾಸ್ತವಿಕವಾಗಿ ವಿಸ್ತರಿಸುವ ಟರ್ಬೊ RAM ಫಿಚರ್ಸ್ ಅನ್ನು ಸಹ ಹೊಂದಿದೆ. ತನ್ನ ವರ್ಗದಲ್ಲಿ ಅತ್ಯುತ್ತಮ ಪ್ರೊಸೆಸರ್ ಇದಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು f/2.45 ಲೆನ್ಸ್ ಪಡೆದಿದೆ. ಬಜೆಟ್ ದರದಲ್ಲಿ ಈ ಕ್ಯಾಮೆರಾ ಗ್ರಾಹಕರಿಗೆ ಆಕರ್ಷಕ ಎನಿಸಲಿದೆ.

ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ ಸೌಲಭ್ಯಗಳು
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 6GB RAM + 64GB ಸ್ಟೋರೇಜ್ ರೂಪಾಂತರಕ್ಕೆ 14,999.ರೂ. ಆಗಿದೆ. ಇನ್ನು ಈ ಫೋನ್ 6GB + 128GB ಆಯ್ಕೆಯ ಬೆಲೆ 16,499ರೂ.ಆಗಿದೆ. ಇದರ ಟಾಪ್-ಎಂಡ್ 8GB + 128GB ಮಾಡೆಲ್ ಬೆಲೆ 17,999ರೂ .ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲಾಕ್ ಬಣ್ಣಗಳಲ್ಲಿ ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999