Home
ಮೊಬೈಲ್

ಕೇವಲ 11,499 ರೂ.! 108MP ಕ್ಯಾಮೆರಾ.. 5030mAh ಬ್ಯಾಟರಿ.. ಡಿಸ್ಕೌಂಟ್ ಕೂಡ ಸಿಗುತ್ತೆ!

ಕೇವಲ 11,499 ರೂ.! 108 ಮೆಗಾಪಿಕ್ಸೆಲ್ ಕ್ಯಾಮೆರಾ, 6.79 ಇಂಚಿನ ದೊಡ್ಡ ಡಿಸ್ಪ್ಲೇ, 5030mAh ಶಕ್ತಿಶಾಲಿ ಬ್ಯಾಟರಿ.. ಮೊಬೈಲ್‌ ಪ್ರಿಯರಿಗೆ ಇದಕ್ಕಿಂತ ಮತ್ತೇನು ಬೇಕು! ಹೌದು, ಪೊಕೊ (Poco) ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಪೊಕೊ M6 ಪ್ಲಸ್ 5G (Poco M6 Plus 5G) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಶೇ.30 ರಷ್ಟು ಡಿಸ್ಕೌಂಟ್‌ ನೀಡಲಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ಇನ್ನುಳಿದ ವೈಶಿಷ್ಟ್ಯಗಳನ್ನು ತಿಳಿಯೋಣ.

ಕಂಪನಿಯು ಪೊಕೊ M6 ಪ್ಲಸ್ 5G ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟ ಮಾಡುತ್ತಿದೆ. ನೀವು ಮಿಸ್ಟಿ ಲ್ಯಾವೆಂಡರ್, ಐಸ್ ಸಿಲ್ವರ್ ಮತ್ತು ಗ್ರ್ಯಾಫೈಟ್ ಬ್ಲಾಕ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 AE ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಜೊತೆಗೆ 33W ವೇಗದ ಚಾರ್ಜರ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ. ನೀವು, 12 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಫೋನ್ ಕೊಳ್ಳಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ.

ಕೇವಲ 11,499 ರೂ.! 108MP ಕ್ಯಾಮೆರಾ.. 5030mAh ಬ್ಯಾಟರಿ.. ಯಾವ ಫೋನ್?

ಪೊಕೊ M6 ಪ್ಲಸ್ 5G ಬೆಲೆ ಮತ್ತು ಆಫರ್‌ಗಳು

ಕಂಪನಿಯು ಪೊಕೊ M6 ಪ್ಲಸ್ 5G ಫೋನಿನ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಮೇಲೆ ಶೇ.30 ರಷ್ಟು ರಿಯಾಯಿತಿ ನೀಡುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಈ ಫೋನ್‌ ಖರೀದಿಸಿದರೆ, ಶೇ.5 ರಷ್ಟು ಹೆಚ್ಚುವರಿ ಡಿಸ್ಕೌಂಟ್ ಲಭ್ಯವಿದೆ. ರಿಯಾಯಿತಿಯೊಂದಿಗೆ ಫ್ಲಿಪ್‌ಕಾರ್ಟ್‌ನಲ್ಲಿ 6GB + 128GB ಸ್ಟೋರೇಜ್ ರೂಪಾಂತರವನ್ನು 11,499 ರೂ.ಗೆ ಖರೀದಿಸಬಹುದು. 8GB RAM + 128GB ಸ್ಟೋರೇಜ್ ರೂಪಾಂತರವು 12,499 ರೂ.ಗೆ ಲಭ್ಯವಿದೆ.

ಈ ಸುದ್ದಿ ಓದಿದ್ದೀರಾ?: 10000 ಅಗ್ಗ! ದೈತ್ಯ Motorola ಫೋನಿನ ಬೆಲೆ ಇಳಿಕೆ; ಹೊಸ ಬೆಲೆ, ಡಿಸ್ಕೌಂಟ್ ಎಷ್ಟು?

ಪೊಕೊ M6 ಪ್ಲಸ್ 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಪೊಕೊ M6 ಪ್ಲಸ್ 5G ಮೊಬೈಲ್ 6.79 ಇಂಚಿನ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್, 550 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಕಂಪನಿಯು ಪೊಕೊ M6 ಪ್ಲಸ್ 5G ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 AE ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು ಗ್ರಾಫಿಕ್ಸ್‌ಗಾಗಿ ಅಡ್ರಿನೊ A613 ಜಿಪಿಯು ಲಭ್ಯವಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಇತ್ತೀಚಿನ ಹೈಪರ್‌ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 6GB RAM + 128GB ಸ್ಟೋರೇಜ್ ಮತ್ತು 8GB RAM + 128GB ಸ್ಟೋರೇಜ್‌ ಹೊಂದಿದೆ.

ಕೇವಲ 11,499 ರೂ.! 108MP ಕ್ಯಾಮೆರಾ.. 5030mAh ಬ್ಯಾಟರಿ.. ಯಾವ ಫೋನ್?

ಕ್ಯಾಮೆರಾ ಸೆಟಪ್

ಪೊಕೊ M6 ಪ್ಲಸ್ 5G ಮೊಬೈಲ್ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜರ್

ಕಂಪನಿಯು ಪೊಕೊ M6 ಪ್ಲಸ್ 5G ಫೋನಿನಲ್ಲಿ 5030mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜರ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಪೊಕೊ M6 ಪ್ಲಸ್ 5G ಮೊಬೈಲ್ ಐಆರ್‌ (IR) ಬ್ಲಾಸ್ಟರ್ ಮತ್ತು ಧೂಳು ಮತ್ತು ಸ್ಪ್ಲಾಶ್ ವಿರುದ್ಧ ರಕ್ಷಣೆಗಾಗಿ IP53 ರೇಟಿಂಗ್ ಪಡೆದಿದೆ. ಇನ್‌ಫ್ರಾರೆಡ್ ಸೆನ್ಸರ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, 3.5 ಎಂಎಂ ಆಡಿಯೊ ಜ್ಯಾಕ್, ಬಾಟಮ್ ಫೈರಿಂಗ್ ಲೌಡ್‌ ಸ್ಪೀಕರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+